ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಅಗಿರುವ ನಟ ದರ್ಶನ್ ಗ್ಯಾಂಗ್ ಸದಸ್ಯರ ಪೈಕಿ ಎ1 ಆರೋಪಿ ಪವಿತ್ರಾ ಗೌಡ ಮನೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಾಕ್ಷಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಬೆಂಗಳೂರು(ಜೂ.16) ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಡೆಸಿದ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಎ1 ಆರೋಪಿ ಪವಿತ್ರಾ ಗೌಡ ಮನೆಯಲ್ಲಿ ಸಾಕ್ಷ್ಯಕ್ಕಾಗಿ ತೀವ್ರ ಶೋಧ ನಡೆಸಿದ್ದಾರೆ. ಈ ವೇಳೆ ಪ್ರಕರಣ ಸಂಬಂಧಿಸಿದ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿದೆ. ರೇಣುಕಾಸ್ವಾಮಿ ಮೇಲೆ ಪವಿತ್ರಾ ಗೌಡ ಚಪ್ಪಲಿಯಲ್ಲಿ ಹಲ್ಲೆ ನಡೆಸಿದ್ದರು. ಹಲ್ಲೆಗೆ ಬಳಸಿದ್ದ ಚಪ್ಪಲಿಯನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಕೆಲ ಮಹತ್ವದ ಸಾಕ್ಷ್ಯಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಹಾಗೂ ಗ್ಯಾಂಗ್ ಸದಸ್ಯರನ್ನು ಮತ್ತೆ 6 ದಿನಗಳ ಪೊಲೀಸ್ ಕಸ್ಟಡಿಗೆ ಕೋರ್ಟ್ ಒಪ್ಪಿಸಿತ್ತು. ಇಂದಿನಿಂದ ಮತ್ತೆ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಪವಿತ್ರಾ ಗೌಡ ಮನೆಯಲ್ಲಿ ಮಹಜರು ನಡೆಸಿದ್ದಾರೆ. ಇದೇ ವೇಳೆ ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಹತ್ಯೆ ನಡೆಸುವ ದಿನ ಪವಿತ್ರಾ ಗೌಡ ಧರಿಸಿದ್ದ ಬಟ್ಟೆ, ಶಾಲುನ್ನೂ ಪೊಲೀಸರು ವಶಪಡಿಸಿದ್ದಾರೆ.

ಏನೇ ಕೇಳು, ಏನೇ ಹೇಳು ಕಣ್ಣೀರೇ ನನಗೀಗ, ಪೊಲೀಸ್ ಕಸ್ಟಡಿಯಲ್ಲಿ ನಟ ದರ್ಶನ್ ಜರ್ಝರಿತ!

ಸುಮಾರು 2 ಗಂಟೆಗೂ ಹೆಚ್ಚು ಕಾಲು ಪೊಲೀಸರು ಪವಿತ್ರಾ ಗೌಡ ಮನೆ ಶೋಧ ನಡೆಸಿದ್ದಾರೆ. ಹಲವು ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡಿರುವ ವಸ್ತುಗಳ ಕುರಿತು ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಶೋಧ ಕಾರ್ಯ ಮುಗಿಸಿದ ಪೊಲೀಸರು ಇದೀಗ ಪವಿತ್ರಾ ಗೌಡಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. 

ನಟ ದರ್ಶನ್ 2ನೇ ಪತ್ನಿ ಎಂದೇ ಗುರುತಿಸಿಕೊಂಡಿರುವ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎಂಬ ಆರೋಪದಡಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಲಾಗಿತ್ತು. ನಟ ದರ್ಶನ್ ಹಾಗೂ ಆತನ ಗ್ಯಾಂಗ್ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆ ತಂದು ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿ ಹಾಕಿ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಲಾಗಿತ್ತು. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಶೆಡ್‌ಗೆ ಆಗಮಿಸಿ ಹಲ್ಲೆ ನಡೆಸಿದ್ದರು. ಪವಿತ್ರಾ ಗೌಡ ಚಪ್ಪಲಿ ಬಿಚ್ಚಿ ಹೊಡೆದಿದ್ದರು. ಈ ಹಲ್ಲೆಗೆ ಬಳಸಿದ್ದ ಚಪ್ಪಲಿ ಸೇರಿದಂತೆ ಹಲವು ವಸ್ತುಗಳು ಇದೀಗ ಪೊಲೀಸರು ವಶವಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಬಚಾವ್ ಆಗಲು ಆಪ್ತರನ್ನು ಶರಣಾಗಿಸುವ ಪ್ರಯತ್ನ ಮಾಡಲಾಗಿತ್ತು. 30 ಲಕ್ಷ ರೂಪಾಯಿ ಆಫರ್ ನೀಡಿ ಪೊಲೀಸರಿಗೆ ಶರಣಾಗಿಸುವ ಪ್ರಯತ್ನ ಮಾಡಿದ್ದರು. ಆದರೆ ಪೊಲೀಸರು ಚಾಣಾಕ್ಷತೆಯಿಂದ ಈ ಪ್ರಕರಣ ಬೆಳಕಿಗೆ ಬಂದಿದೆ

ಕೊಲೆ ಕೇಸ್‌ನಿಂದ ಮುಕ್ತಿ ಸಿಗಲೆಂದು ಕೈಗಾದಲ್ಲಿ ದರ್ಶನ್ ಬಾವ ಮಂಜುನಾಥ್ ಮಾಡಿದ್ದೇನು?