Kantara; ಮತ್ತೊಂದು ದಾಖಲೆ ಬರೆದ ರಿಷಬ್ ಶೆಟ್ಟಿ, ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಮಾರಾಟ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾದ ಹವಾ ಇನ್ನೂ ಕಮ್ಮಿ ಆಗಿಲ್ಲ. ಈಗಾಗಲೇ ಅನೇಕ ದಾಖಲೆಗಳನ್ನು ಬರೆದಿರುವ ಕಾಂತಾರ ಇದೀಗ ಮತ್ತೊಂದು ರೆಕಾರ್ಡ್ ಮಾಡಿದೆ. 

Rishab Shetty starrer Kantara film 1 crore ticket sold in karnataka sgk

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾದ ಹವಾ ಇನ್ನೂ ಕಮ್ಮಿ ಆಗಿಲ್ಲ. ಈಗಾಗಲೇ ಅನೇಕ ದಾಖಲೆಗಳನ್ನು ಮಾಡಿರುವ ಕಾಂತಾರ ಇದೀಗ ಮತ್ತೊಂದು ರೆಕಾರ್ಡ್ ಮಾಡಿ ಬೀಗಿದೆ. ಸಿನಿಮಾ ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದರೂ ಇನ್ನೂ ಅನೇಕ ಕಡೆ  ಕಾಂತರಾ ಉತ್ತಮ ಪ್ರದರ್ಶನ ಕಾಣುತ್ತಿದೆ. ರಿಷಬ್​ ಶೆಟ್ಟಿ ನಟನೆ ಮತ್ತು ನಿರ್ದೇಶನಕ್ಕೆ ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಈಗಾಗಲೇ ಕೋಟಿ ಕೋಟಿ ಬಾಚಿಕೊಳ್ಳುವ ಮೂಲಕ ಕಾಂತಾರ ಹೊಂಬಾಳೆ ಫಿಲ್ಸ್‌ಗೆ ದೊಡ್ಡ ಲಾಭ ತಂದುಕೊಟ್ಟಿದೆ. ಇದೀಗ ಸಿನಿಮಾತಂಡ ಮತ್ತೊಂದು ಸಂತಸದ ವಿಚಾರವನ್ನು ಹಂಚಿಕೊಂಡಿದೆ. 

ಕರ್ನಾಟಕದಲ್ಲಿ ಕಾಂತಾರ ಸಿನಿಮಾದ 1 ಕೋಟಿ ಟಿಕೆಟ್ ಮಾರಾಟವಾಗಿದೆ. ಈ ಮೂಲಕ ಅತೀ ಹೆಚ್ಚು ಟಿಕೆಟ್ ಮಾರಾಟವಾದ ಸಿನಿಮಾ ಕಾಂತಾರ ಎನ್ನುವ ಹೆಗ್ಗಳಿಕೆ ಗಳಿಸಿದೆ. ಈಗಾಗಲೇ ದೇಶ-ವಿದೇಶಗಳಲ್ಲಿ ಸದ್ದು ಮಾಡುತ್ತಿರುವ ಕಾಂತಾರಗೆ ಈ ದಾಖಲೆ ಮತ್ತಷ್ಟು ಖುಷಿ ತಂದಿದೆ. ಈ ಬಗ್ಗೆ ಹೊಂಬಾಳೆ ಫಿಲ್ಸ್ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಇತ್ತೀಚಿಗಷ್ಟೆ ಸಿನಿಮಾತಂಡ ಕರ್ನಾಟಕದಲ್ಲಿ ಅತೀ ಹೆಚ್ಚು ಜನ ವೀಕ್ಷಿಸಿದ ಹೊಂಬಾಳೆ ಫಿಲ್ಮ್ಸ್‌ನ ಮೊದಲ ಸಿನಿಮಾ ಎನ್ನುವ ಮಾಹಿತಿ ಬಹಿರಂಗ ಪಡಿಸಿದ್ದರು. ಬರೋಬ್ಬರಿ 1 ಕೋಟಿ ಟಿಕೆಟ್ ಮಾರಾಟವಾದ ಸಿನಿಮಾ ಎನ್ನುವ ಹೆಗ್ಗಳಿಕೆ ಸಿಕ್ಕಿದೆ. 

ಕಾಂತಾರ ಸಿನಿಮಾ ಸೆಪ್ಟಂಬರ್ 30ರಂದು ರಿಲೀಸ್ ಆಗಿದೆ. ಕನ್ನಡದಲ್ಲಿ ಮಾತ್ರ ರಿಲೀಸ್ ಆದ ಕಾಂತಾರ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಾಣುತ್ತಿದ್ದಂತೆ ಬೇರೆ ಬೇರೆ ಭಾಷೆಗೆ ಡಬ್ ಆಗಿ ರಿಲೀಸ್ ಆಯಿತು. ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಕಾಂತಾರ ರಿಲೀಸ್ ಆಗಿದೆ. ಪರಭಾಷೆಯಲ್ಲೂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ಅಭಿಮಾನಿಗಳು ಮಾತ್ರವಲ್ಲದೇ ಸಿನಿಮಾ ಗಣ್ಯರು ಸಹ ಮೆಚ್ಚುಗೆ ವ್ಯಕ್ತಪಡಿಸಿದರು. ಸೂಪರ್ ಸ್ಟಾರ್ ರಜನಿಕಾಂತ್, ಧನುಷ್, ಅನುಷ್ಕಾ ಶೆಟ್ಟಿ, ಪ್ರಭಾಸ್, ಕಾರ್ತಿ, ನಾನಿ, ಕಂಗನಾ ರಣಾವತ್ ಸೇರಿದಂತೆ ಅನೇಕ ಕಲಾವಿದರೂ ಹಾಡಿಹೊಗಳಿದರು. 

ಧರ್ಮಸ್ಥಳದ ಧರ್ಮಾಧಿಕಾರಿಯವರನ್ನು ಭೇಟಿಯಾದ ರಿಷಬ್ ಶೆಟ್ಟಿ ದಂಪತಿ

ಗಲ್ಲಾಪೆಟ್ಟಿಗೆಯಲ್ಲೂ ಕಾಂತಾರಗೆ ಭರ್ಜರಿ ಗಳಿಕೆಯಾಗಿದೆ. ಹಿಂದಿಯಲ್ಲಿ ಈವರೆಗೆ 67 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಈಗಾಗಲೇ ಕಾಂತಾರ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಕನ್ನಡದ ಸಿನಿಮಾಗಳು ದೇಶ-ವಿದೇಶಗಳಲ್ಲಿ ಸದ್ದು ಮಾಡುತ್ತಿರುವ ರೀತಿಗೆ ಸ್ಯಾಂಡಲ್ ವುಡ್ ಹೆಮ್ಮೆ ಪಡುತ್ತಿದೆ.

ಕಾಂತಾರಾ ಸಿನಿಮಾ ವೀಕ್ಷಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ರಿಶಭ್ ಶೆಟ್ಟಿಗೆ ಫುಲ್ ಮಾರ್ಕ್ಸ್!

 ಕಾಂತಾರ ಬಗ್ಗೆ, 

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟ ಕಿಶೋರ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಮಿಂಚಿದ್ದಾರೆ. ಇನ್ನೂ ನಾಯಕಿಯಾಗಿ ಸಪ್ತಮಿ ಗೌಡ ಬಣ್ಣ ಹಣ್ಣ ಹಚ್ಚಿದ್ದಾರೆ. ಅಚ್ಯುತ್ ಕುಮಾರ್ ಗಮನಾರ್ಹ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಅನೇಕ ರಂಗಭೂಮಿ ಕಲಾವಿದರು ನಟಿಸಿದ್ದಾರೆ.  ಪ್ರತಿಯೊಂದು ಪಾತ್ರಗಳು ಸಹ ಪ್ರೇಕ್ಷಕರ ಹೃದಯ ಗೆದ್ದಿವೆ. ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಲ್ಲಿ ಸಿನಿಮಾ ಮೂಡಿಬಂದಿದೆ.  

Latest Videos
Follow Us:
Download App:
  • android
  • ios