Asianet Suvarna News Asianet Suvarna News

Independence Day; ಯಶ್ ಮನೆ ಮೇಲೆ ಹಾರಿದ ರಾಷ್ಟ್ರಧ್ವಜ; ಸ್ವಾತಂತ್ರ್ಯ ದಿನಾಚರಣೆಗೆ ಶುಭ ಕೋರಿದ ರಾಕಿಂಗ್ ಕುಟುಂಬ

ರಾಕಿಂಗ್ ಸ್ಟಾರ್ ಯಶ್ ಮನೆಮೇಲೆಯೂ ರಾಷ್ಟ್ರಧ್ವಜ ರಾರಾಜಿಸುತ್ತಿದೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗಿಯಾಗಿದ್ದ ಯಶ್ ಎಲ್ಲರಿಗೂ ಧ್ವಜ ಹಾರಿಸುವಂತೆ ಕರೆಕೊಟ್ಟಿದ್ದರು. ಇಂದು   ಸ್ವಾತಂತ್ರ್ಯೋತ್ಸವದ ದಿನ ರಾಷ್ಟ್ರಧ್ವಜ ಕೈಯಲ್ಲಿ ಹಿಡಿದು ದೇಶದ ಜನತೆಗೆ ಶುಭಕೋರಿದ್ದಾರೆ.

Rocking star Yash And Radhika Pandit celebrate 75th independence day and wish to fans sgk
Author
Bengaluru, First Published Aug 15, 2022, 11:17 AM IST

ದೇಶದಾದ್ಯಂತ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲೆಲ್ಲೂ ಅಜಾದಿ ಸ್ವಾತಂತ್ರ್ಯೋತ್ಸವ ಕಳೆಕಟ್ಟಿದೆ. ಮನೆ ಮನದಲ್ಲೂ ತ್ರಿವರ್ಣ ಧ್ವಜ ಹಾರುತ್ತಿದೆ. ಇದೇ ಸಮಯದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗುತ್ತಿದೆ. 75ನೇ ಸ್ವಾತಂತ್ರ್ಯೋತ್ಸವದ ಈ ಅಮೃತಮಹೋತ್ಸವ ಘಳಿಗೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಯೊಬ್ಬರು ಮನೆಮೇಲೆ ರಾಷ್ಟ್ರಧ್ವಜ ಹಾರಿಸಿ ದೇಶಕ್ಕೆ ಗೌರವ ಸಲ್ಲಿಸಿದ್ದಾರೆ. ಸಿನಿಮಾ ಕಲಾವಿದರು ಸಹ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಕಲಾವಿದರು ಸಹ ಮನೆಮೇಲೆ ರಾಷ್ಟ್ರ ಧ್ವಜ ಹಾರಿಸಿದ್ದಾರೆ. 

ರಾಕಿಂಗ್ ಸ್ಟಾರ್ ಯಶ್ ಮನೆಮೇಲೆಯೂ ರಾಷ್ಟ್ರಧ್ವಜ ರಾರಾಜಿಸುತ್ತಿದೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗಿಯಾಗಿದ್ದ ಯಶ್ ಎಲ್ಲರಿಗೂ ಧ್ವಜ ಹಾರಿಸುವಂತೆ ಕರೆಕೊಟ್ಟಿದ್ದರು. ಇಂದು   ಸ್ವಾತಂತ್ರ್ಯೋತ್ಸವದ ದಿನ ರಾಷ್ಟ್ರಧ್ವಜ ಕೈಯಲ್ಲಿ ಹಿಡಿದು ದೇಶದ ಜನತೆಗೆ ಶುಭಕೋರಿದ್ದಾರೆ. ಯಶ್ ಜೊತೆಗೆ ಪತ್ನಿ, ನಟಿ ರಾಧಿಕಾ ಪಂಡಿತ್ ಮತ್ತು ಇಬ್ಬರು ಮಕ್ಕಳಾದ ಐರಾ ಮತ್ತು ಯಥರ್ವ್ ಇಬ್ಬರೂ ಸಹ ರಾಷ್ಟ್ರಧ್ವಜ ಹಿಡಿದು ದೇಶಕ್ಕೆ ಗೌರವ ಸಲ್ಲಿಸಿದ್ದಾರೆ. ಯಶ್ ಕುಟುಂಬದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ಕೆಜಿಎಫ್ ಸ್ಟಾರ್ ಧ್ವಜ ಹಾರಿಸುತ್ತಿರುವ ಫೋಟೋ ಶೇರ್ ಮಾಡಿ ಪಸರಿಸಲಿ ವಿಶ್ವಕ್ಕೆಲ್ಲಾ ಭಾರತದ ತ್ರಿವರ್ಣ ಧ್ವಜದ ಹಿರಿಮೆ ಎಂದು ಹೇಳಿದ್ದಾರೆ.

'ಪಸರಿಸಲಿ ವಿಶ್ವಕ್ಕೆಲ್ಲಾ ಭಾರತದ ತ್ರಿವರ್ಣ ಧ್ವಜದ ಹಿರಿಮೆ. ಪ್ರತಿಯೊಬ್ಬ ಭಾರತೀಯ ಹೆಮ್ಮೆಯಿಂದ ಹೇಳುವ 'ಜೈ ಹಿಂದ್' ಎಲ್ಲರಿಗೂ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳು' ಎಂದು ಹೇಳಿದರು.

'ವಂದೇ ಮಾತರಂ' ಗೀತೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ಸ್; ಉಳಿದ ಸಾಧಕರೆಲ್ಲಿ ಎಂದ ಜನ

ಅನೇಕ ಕಲಾವಿದರು ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಸಹ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದಾರೆ. ಇನ್ನು ಬಾಲಿವುಡ್ ನ ಅನೇಕ ಸ್ಟಾರ್ ಕಲಾವಿದರು ಸಹ ರಾಷ್ಟ್ರಧ್ವಜ ಹಾರಿಸಿ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗಿಯಾಗಿದ್ದರು. ಶಾರುಖ್ ಖಾನ್, ಸಲ್ಮಾನ್ ಖಾನ್, ಆಮೀರ್ ಖಾನ್ ಸೇರಿದಂತೆ ಅನೇಕರು ತಿರಂಗಾ ಹಾರಿಸಿ ದೇಶದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. 

Har Ghar Tiranga; ಆಮೀರ್ ಖಾನ್ ಮನೆ ಮೇಲೆ ಹಾರಿದ ತಿರಂಗಾ, ಫೋಟೋ ವೈರಲ್

ನಟ ಶಾರುಖ್ ಖಾನ್ ತನ್ನ ಮನ್ನತ್ ನಿವಾಸದ ಮೇಲೆ ರಾಷ್ಟ್ರಧ್ವಜ ಹಾರಿಸಿ ದೇಶದ ಜನರಿಗೆ ಶುಭಕೋರಿದ್ದಾರೆ. ಶಾರುಖ್ ಜೊತೆ ಪತ್ನಿ ಗೌರಿ  ಮತ್ತು ಇಬ್ಬರು ಮಕ್ಕಳು ಸಹ ಫೋಟೋದಲ್ಲಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಆಮೀರ್ ಖಾನ್ ಮನೆಮೇಲೆ ಧ್ವಜ ಹಾರಿಸಿದ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

 

Follow Us:
Download App:
  • android
  • ios