Asianet Suvarna News Asianet Suvarna News

ಸ್ಯಾಂಡಲ್‌ವುಡ್ ಕಲಾವಿದರ ನೆರವಿಗೆ ರಾಕಿಂಗ್ ಸ್ಟಾರ್, 1.5 ಕೋಟಿ ರೂ. ಸಹಾಯ

* ಕಲಾವಿದರ ನೆರವಿಗೆ ಧಾವಿಸಿದ ರಾಕಿಂಗ್ ಸ್ಟಾರ್
* ಮೂರು ಸಾವಿರ ಮಂದಿಯ ಖಾತೆಗೆ ಹಣ
* ಸಿನಿಮಾ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರ ಅಧಿಕೃತ ಖಾತೆಗಳಿಗೆ ಹಣ

Rocking star yash helps 5000 RS for 3000 Sandalwood people mah
Author
Bengaluru, First Published Jun 1, 2021, 8:35 PM IST

ಬೆಂಗಳೂರು ( ಜೂ. 1) ಕೊರೋನಾ ಸಂಕಷ್ಟದ ಸಂದರ್ಭ ಸಿನಿಮಾ ಕಲಾವಿದರ ನೆರವಿಗೆ ರಾಕಿಂಗ್ ಸ್ಟಾರ್ ಯಶ್ ನಿಂತಿದ್ದಾರೆ.  ಬಡ ಕಲಾವಿದರು ಹಾಗೂ ಕಾರ್ಮಿಕರಿಗೆ ಸಹಾಯ ಮಾಡಲು ನಿಂತಿದ್ದಾರೆ.

"

ಸುಮಾರು 3 ಸಾವಿರಕ್ಕೂ ಹೆಚ್ಚಿನ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರ ರೂ.ಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷ ಸಾ.ರಾ.ಗೋವಿಂದು ಹಾಗೂ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಸೋಶಿಯಲ್ ಮೀಡಿಯಾ ಮುಖೇನ ಮಾಹಿತಿ ನೀಡಿದ್ದಾರೆ

ಸಿನಿಮಾ ಕಲಾವಿದರಿಗೆ ಉಚಿತ ಲಸಿಕೆ

ಸುಮಾರು 3 ಸಾವಿರಕ್ಕೂ ಹೆಚ್ಚು ಸಿನಿಮಾ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರ ರೂ. ಗಳನ್ನು ತಮ್ಮ ಸಂಪಾದನೆಯಿಂದ ನೀಡುವುದಾಗಿ ಘೋಷಿಸಿದ್ದಾರೆ.

ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಹೆಚ್ಚು ಕಡಿಮೆ ಬುಡಮೇಲು ಮಾಡಿದೆ. ಅದರಲ್ಲೂ ಕಳೆದ ಒಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈ ಕಟ್ಟಿ ಕುಳಿತಿದೆ. ಇದು ಬರೀ ಮಾತನಾಡುವ ಸಮಯವಲ್ಲ, ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ ಎಂದಿದ್ದಾರೆ.

ನಮ್ಮ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣ ಇದು ಕಾರ್ಯರೂಪಕ್ಕೆ ಬರಲಿದೆ. ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನ ಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ಸಾರ್ಥಕತೆ ಕಾಣಬೇಕು ಎಂದಿದ್ದಾರೆ. ಇನ್ನೊಂದು ಕಡೆ  ಉಪೇಂದ್ರ ಸಹ ಯಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. 

Follow Us:
Download App:
  • android
  • ios