ಯಶ್ ನಟನೆಯ 'ಟಾಕ್ಸಿಕ್' ಸಿನಿಮಾಗೆ ಸಂಕಷ್ಟ; ಚಿತ್ರೀಕರಣದ ಸೆಟ್ ತೆರವುಗೊಳಿಸಲು ಹೈಕೋರ್ಟ್ ನೋಟೀಸ್!

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಿಗ್ ಬಜೆಟ್ ಸಿನಿಮಾ ಟಾಕ್ಸಿಕ್ ಚಿತ್ರೀಕರಣಕ್ಕೆ ಸಂಕಷ್ಟ ಶುರುವಾಗಿದೆ. ಹೈಕೋರ್ಟ್‌ನಿಂದ ಸಿನಿಮಾ ನಿರ್ಮಾಣ ಸಂಸ್ಥೆಗೆ ನೋಟೀಸ್ ಜಾರಿ ಮಾಡಲಾಗಿದೆ.

Rocking star Yash toxic movie is in trouble High Court Notice to KVN Cinema Production Company sat

ಬೆಂಗಳೂರು (ಜು.25): ಪ್ಯಾನ್ ಇಂಡಿಯಾ ಸ್ಟಾರ್ ರಾಕಿಂಗ್ ಸ್ಟಾರ್ ಯಶ್ (Rocking Star Yash) ನಟನೆಯ ಟಾಕ್ಸಿಕ್ ಸಿನಿಮಾಗೆ  (Toxic Movie) ಈಗ ಸಂಕಷ್ಟ ಶುರುವಾಗಿದೆ. ಅರಣ್ಯ ಭೂಮಿಯಲ್ಲಿ 'ಟಾಕ್ಸಿಕ್' ಸಿನಿಮಾ ಸೆಟ್ ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಅವರು ಹೈಕೋರ್ಟ್‌ಗೆ ಸಾರ್ಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆ ಮಾಡಲಾಗಿದೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಿಗ್ ಬಜೆಟ್ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರದ ಅರಣ್ಯ ಭೂಮಿಯಲ್ಲಿ ಸಿನಿಮಾ ಸೆಟ್ ಹಾಕಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆವಿಎನ್ ಫಿಲ್ಮ್ ನಿರ್ಮಾಣ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ನೀಡಲಾಗಿದೆ. ಇನ್ನು ಅರಣ್ಯ ಭೂಮಿಯಲ್ಲಿ ಸೆಟ್ ಹಾಕಲು ಅವಕಾಶ ಮಾಡಿಕೊಟ್ಟಿರುವ ಸರ್ಕಾರ, ಹೆಚ್ಎಂಟಿ ಕಂಪನಿಗೂ ಹೈಕೋರ್ಟ್ ನಿಂದ ನೋಟಿಸ್ ನೀಡಿದೆ.

ಬೆಂಗಳೂರಿನ ಹೊರ ವಲಯದ ಪೀಣ್ಯ ಪ್ಲಾಂಟೇಷನ್ ಜಮೀನಿನ 20.07 ಎಕರೆಯಲ್ಲಿ ಸಿನಿಮಾ ಸೆಟ್ ಹಾಕಲಾಗಿದೆ. ಅರಣ್ಯ ಭೂಮಿಯಲ್ಲಿ ಅನಧಿಕೃತವಾಗಿ ಸೆಟ್ ನಿರ್ಮಾಣ ಮಾಡಲಾಗಿದೆ ಎಂಬ ಆರೋಪ ಕೆಳಿಬಂದಿದೆ. ಜೊತೆಗೆ, ಸಾರ್ವಜನಿಕ ಹೊತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ ವಕೀಲರು, ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಅನಧಿಕೃತ ನಿರ್ಮಾಣ ಮಾಡಿರುವ ಸೆಟ್‌ ಅನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದಾರೆ. ಇಂದು ಪಿಐಎಲ್ ಅರ್ಜಿಯನ್ನು ವಿಚಾರಣಗೆ ಕೈಗೆತ್ತಿಕೊಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠದಿಂದ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಆಗಸ್ಟ್ 19ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಅಮ್ಮನಿಗೆ ಸಾಲ ಕೊಟ್ಟು ಮಗಳನ್ನು ಪ್ರೀತಿಸಿದ; ಮದುವೆಯಾಗು ಎಂದಿದ್ದಕ್ಕೆ ಕೊಲೆ ಮಾಡಿ ಹೂತು ಹಾಕಿದನು!

ಇನ್ನು ಅರಣ್ಯ ಭೂಮಿಯಲ್ಲಿ ಸಂಸ್ಥೆಯನ್ನು ನಿರ್ಮಾಣ ಮಾಡಿಕೊಂಡಿದ್ದ ಹೆಚ್‌ಎಂಟಿ ಕಂಪನಿಯು ತನ್ನ ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಸಂಬಂಧಪಟ್ಟ ಭೂಮಿಯನ್ನು ಕೆನರಾ ಬ್ಯಾಂಕ್‌ಗೆ ಮಾರಾಟ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಜೊತೆಗೆ, ಕೆನರಾ ಬ್ಯಾಂಕ್ ಸಂಸ್ಥೆಯಿಂದ ಟಾಕ್ಸಿಕ್ ಸಿನಿಮಾ ನಿರ್ಮಾಣ ಮಾಡುತ್ತಿರುವ ಕೆವಿಎನ್ ಸಂಸ್ಥೆಗೆ ಸಿನಿಮಾ ಚಿತ್ರೀಕರಣದ ಸೆಟ್ ಹಾಕಲು ನೀಡಲಾಗಿತ್ತು ಎಂದು ತಿಳಿದುಬಂದಿದೆ. ಆದರೆ, ಈ ಭೂಮಿ ಮೂಲತಃ  ಅರಣ್ಯ ಭೂಮಿಯಾಗಿದೆ ಎಂದು ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ ಮಾಡಿದ ಅರ್ಜಿದಾರರು ವಾದಿಸಿದ್ದಾರೆ.

Latest Videos
Follow Us:
Download App:
  • android
  • ios