Kantara; ರಿಷಬ್ ಶೆಟ್ಟಿ ಸಿನಿಮಾಗೆ ಪ್ರಭಾಸ್ ಫಿದಾ, ಕ್ಲೈಮ್ಯಾಕ್ಸ್ ಬಗ್ಗೆ ಹೇಳಿದ್ದೇನು?
ರಿಷಬ್ ಶೆಟ್ಟಿ ಸಿನಿಮಾವನ್ನು ವೀಕ್ಷಿಸಿದ ಪ್ರಭಾಸ್ ಹಾಡಿ ಹೊಗಳಿದ್ದಾರೆ. ಶೆಟ್ರ ನಟನೆಗೆ ಫಿದಾ ಆಗಿದ್ದಾರೆ. ಈ ಬಗ್ಗೆ ಪ್ರಭಾಸ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಸ್ಯಾಂಡಲ್ ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಅದ್ದೂರಿಯಾಗಿ ರಿಲೀಸ್ ಆಗಿದೆ. ಸೆಪ್ಟಂಬರ್ 30ರಂದು ತೆರೆಗೆ ಬಂದ ಕಾಂತಾರ ಸಿನಿಮಾ ನೋಡಿ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ರಿಷಬ್ ಶೆಟ್ಟ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ವೀಕ್ಷಿಸಿದ ಪ್ರೇಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾದ ಹಾಡು ಹಾಗೂ ಬ್ಯಾಗ್ರೌಂಡ್ ಮ್ಯೂಸಿಕ್ ಕೂಡ ಪ್ರೇಕ್ಷಕರ ಹೃದಯ ಗೆದ್ದಿದೆ. ಟ್ರೈಲರ್ ಮೂಲಕವೇ ಭಾರಿ ನಿರೀಕ್ಷೆ ಹುಟ್ಟಿಹಾಕಿದ್ದ ಕಾಂತಾರಾ ಸಿನಿಮಾ ಈಗ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ.
ಅಂದಹಾಗೆ ಕಾಂತಾರ ಸಿನಿಮಾ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿದೆ. ಇತ್ತೀಚಿನ ಹೆಚ್ಚಿನ ಅದ್ದೂರಿ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಆದರೆ ಕಾಂತಾರ ಕನ್ನಡದಲ್ಲಿ ಮಾತ್ರ ತೆರೆಗೆ ಬಂದಿದೆ. ಅಂದಹಾಗೆ ಕಾಂತಾರ ಸಿನಿಮಾವನ್ನು ಕನ್ನಡ ಪ್ರೇಕ್ಷಕರು ಮಾತ್ರವಲ್ಲದೇ ಸೆಲಬ್ರಿಟಿಗಳು ಸಹ ಹಾಡಿಹೊಗಳಿದ್ದಾರೆ. ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ, ರಮ್ಯಾ ಸೇರಿದಂತೆ ಅನೇಕರು ಸಿನಿಮಾ ನೋಡಿ ಪಟ್ಟಿದ್ದಾರೆ. ಅಂದಹಾಗೆ ಕೇವಲ ಕನ್ನಡ ಸೆಲೆಬ್ರಿಟಿಗಳು ಮಾತ್ರವಲ್ಲದೆ ತೆಲುಗು ಸ್ಟಾರ್ ಪ್ರಭಾಸ್ ಕೂಡ ಮೆಚ್ಚಿಕೊಂಡಿದ್ದಾರೆ.
ರಿಷಬ್ ಶೆಟ್ಟಿ ಸಿನಿಮಾವನ್ನು ವೀಕ್ಷಿಸಿದ ಪ್ರಭಾಸ್ ಹಾಡಿ ಹೊಗಳಿದ್ದಾರೆ. ಶೆಟ್ರ ನಟನೆಗೆ ಫಿದಾ ಆಗಿದ್ದಾರೆ. ಈ ಬಗ್ಗೆ ಪ್ರಭಾಸ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 'ಕಾಂತಾರ ಸಿನಿಮಾವನ್ನ ನಾನು ತುಂಬಾ ಎಂಜಾಯ್ ಮಾಡಿದೆ. ಅದರಲ್ಲೂ ಕ್ಲೈಮ್ಯಾಕ್ಸ್' ಎಂದು ಬರೆದುಕೊಂಡಿದ್ದಾರೆ. ಇನ್ನು ಇಡೀ ತಂಡಕ್ಕೆ ನನ್ನ ಅಭಿನಂದನೆ, ಒಳ್ಳೆಯದಾಗಲಿ' ಎಂದು ಹೇಳಿದ್ದಾರೆ.
ಸಿನಿಮಾ ಉದ್ದಕ್ಕೂ ನಾನು ಬೀಡ ಹಾಕೊಂಡೆ ಇದ್ದೆ; ರಿಷಬ್ ಶೆಟ್ಟಿ
ಅಂದಹಾಗೆ ಪ್ರಭಾಸ್ ಹೊಂಬಾಳೆ ಫಿಲ್ಮ್ಸ್ ಜೊತೆ ಸಲಾರ್ ಸಿನಿಮಾ ಮಾಡುತ್ತಿದ್ದಾರೆ. ಹೊಂಬಾಳೆ ಮತ್ತು ಪ್ರಭಾಸ್ ನಡುವೆ ಉತ್ತಮ ಸ್ನೇಹ ಬಾಂಧವ್ಯವಿದೆ. ಕಾಂತಾರ ಕೂಡ ಹೊಂಬಾಳೆ ಫಿಲ್ಮ್ಸ್ ನಿಂದ ಬಂದ ಚಿತ್ರವಾಗಿದೆ. ಹಾಗಾಗಿ ಪ್ರಭಾಸ್ ಸಿನಿಮಾ ವೀಕ್ಷಿಸಿ ವಮರ್ಶೆ ಮಾಡಿದ್ದಾರೆ. ಪ್ರಭಾಸ್ ಸಿನಿಮಾ ಇಷ್ಟಪಟ್ಟು ಹೊಗಳಿರುವುದು ಚಿತ್ರತಂಡಕ್ಕೆ ಖುಷಿ ತಂದಿದೆ.
Kantara Review: ಕಾಂತಾರ ಒಂದು ವಿಶಿಷ್ಟ ಅನುಭೂತಿ
ಇನ್ನು ಕಾಂತಾರ ಬಗ್ಗೆ ಹೇಳುವುದಾದರೆ ಚಿತ್ರದಲ್ಲಿ ರಿಷಬ್ ಶೆಟ್ಟಿ ಮತ್ತು ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಸಪ್ತಮಿ ಕಾಣಿಸಿಕೊಂಡಿದ್ದಾರೆ. ಕಾಂತಾರ ಸಿನಿಮಾದಲ್ಲಿ ಕಂಬಳ ಕ್ರೀಡೆಯೇ ಹೈಲೆಟ್. ಜೊತೆಗೆ ಭೂತಕೋಲ, ಆಚಾರ, ವಿಚಾರಗಳನ್ನು ಸೂಕ್ಷ್ಮವಾಗಿ ತೋರಿಸಲಾಗಿದೆ. ಕರಾವಳಿಯ ಸಂಸ್ಕೃತಿ ಜೊತೆಗೆ ಕಾಡಿನ ಜೊತೆ ಬದುಕುವ ಜನರು ಮತ್ತು ಸರ್ಕಾರಿ ಅಧಿಕಾರಿಗಳ ಸಂಘರ್ಷ ಕೂಡ ಇದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ನಟಿಸುವ ಜೊತೆಗೆ ನಿರ್ದೇಶನದ ಜಬಾವ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅಜನೀಶ್ ಲೋಕಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.