ಇತ್ತಿಚಿಗಷ್ಟೇ ಕರಾವಳಿ, ಮಲೆನಾಡು ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಕಗೊಂಡಿರುವ ಕನ್ನಡದ ನಟ-ನಿರ್ದೇಶಕ ರಿಷಬ್ ಶೆಟ್ಟಿಯವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿಯವರು ಸಿಎಂ ಡಿಕೆ ಶಿವಕುಮಾರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ.
ಕನ್ನಡದ ನಟ-ನಿರ್ದೇಶಕ, ಕಾಂತಾರ ಸಿನಿಮಾ ಖ್ಯಾತಿಯ ರಿಷಬ್ ಶೆಟ್ಟಿ (Rishab Shetty) ಅವರು ಇತ್ತಿಚಿಗಷ್ಟೇ ಕರಾವಳಿ, ಮಲೆನಾಡು ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಕಗೊಂಡಿರುವ ವಿಷಯ ಗೊತ್ತೇ ಇದೆ. ಈ ವೇಳೆ ರಿಷಬ್ ಶೆಟ್ಟಿಯವರು ಕರಾವಳಿ, ಮಲೆನಾಡು ಪ್ರವಾಸೋದ್ಯಮ ನೀತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್ (DK Shivakumar) ಜೊತೆ ಚರ್ಚೆ ನಡೆಸಿದ್ದಾರೆ.
ಸಿಎಂ ಡಿಕೆ ಶಿವಕುಮಾರ್ ಭೇಟಿಯ ವೇಳೆಯಲ್ಲಿ ರಿಷಬ್ ಶೆಟ್ಟಿಯವರು ಕರಾವಳಿ-ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಕಗೊಂಡಿರುವ ರಿಷಬ್ ಶೆಟ್ಟಿ, ಪ್ರವಾಸೋದ್ಯಮ ನೀತಿ ಹಾಗೂ ಜಾಗತಿಕ ಬ್ಯಾಂಡಿಂಗ್ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಜೊತೆ ಸಮಾಲೋಚನೆ ನಡೆಸಿದ್ದಾರೆ.
ಕರ್ನಾಟಕ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಕೆಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಈ ದಿಕ್ಕಿನಲ್ಲಿ ರಿಷಬ್ ಶೆಟ್ಟಿ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಧ್ಯೆ ಆಗಿರುವ ಈ ಭೇಟಿ ತುಂಬಾ ಮಹತ್ವ ಪಡೆದುಕೊಂಡಿದೆ. ರಿಷಬ್ ಶೆಟ್ಟಿಯವರ ಜನಪ್ರಿಯತೆ ಮತ್ತು ಜಾಗತಿಕ ಮಟ್ಟದಲ್ಲಿ ಅವರ ಚಿತ್ರಗಳಿಗೆ ದೊರೆತ ಮೆಚ್ಚುಗೆಯಿಂದ ಕರ್ನಾಟಕದ ಪ್ರವಾಸೋದ್ಯಮಕ್ಕೆ ಹೊಸ ಗುರುತು ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
ಈ ಭೇಟಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸ ದಿಕ್ಕು ನೀಡುವ ಚರ್ಚೆಯಾಗಿ ಪರಿಗಣಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹಲವು ಮಹತ್ವದ ಯೋಜನೆಗಳು ಘೋಷಣೆಯಾಗುವ ಸಾಧ್ಯತೆಯಿದೆ.


