Jayamma Chinnegowda No More: ವಯೋಸಹಜ ಕಾಯಿಲೆಗಳು ಮತ್ತು ಆರೋಗ್ಯದಲ್ಲಿನ ಏರುಪೇರಿನಿಂದಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದೂ ವಿಧಿವಶರಾಗಿದ್ದಾರೆ.
ಬೆಂಗಳೂರು: ನಟ ವಿಜಯ್ ರಾಘವೇಂದ್ರ ಮತ್ತು ನಟ ಶ್ರೀಮುರಳಿ ಅವರ ತಾಯಿ, ಹಿರಿಯ ನಟಿ ಜಯಮ್ಮ ಚಿನ್ನೇಗೌಡ ನಿಧನರಾಗಿದ್ದಾರೆ. ಜಯಮ್ಮ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಯೋಸಹಜ ಕಾಯಿಲೆಗಳು ಮತ್ತು ಆರೋಗ್ಯದಲ್ಲಿನ ಏರುಪೇರಿನಿಂದಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದೂ ವಿಧಿವಶರಾಗಿದ್ದಾರೆ. ಜಯಮ್ಮನವರು ಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕ ಎ. ಚಿನ್ನೇಗೌಡ ಅವರ ಪತ್ನಿ. ಹಿರಿಯ ನಟ ಡಾ. ರಾಜ್‌ಕುಮಾರ್ ಅವರ ಕುಟುಂಬಕ್ಕೆ ಸಂಬಂಧಿಯಾಗಿದ್ದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
