Asianet Suvarna News Asianet Suvarna News

ಹಿಂದಿ ಹೇರಿಕೆ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಖಡಕ್ ಮಾತು..!

ಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಸಾಕಷ್ಟು ಸೆಲೆಬ್ರಿಟಿಗಳೂ ಬೆಂಬಲ ಸೂಚಿಸಿದ್ದಾರೆ. ಇದೀಗ ಚಾಲೆಂಜ್ ಸ್ಟಾರ್ ದನಿಗೂಡಿಸಿದ್ದಾರೆ.

Sandalwood challenging star darshan reacts On hindi diwas rbj
Author
Bengaluru, First Published Sep 15, 2020, 7:38 PM IST

ಬೆಂಗಳೂರು, (ಸೆ.15): ಹಿಂದಿ ಹೇರಿಕೆ ಮತ್ತು ಹಿಂದಿ ದಿವಸ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿಯೇ ಪರ-ವಿರೋಧಗಳು ರ್ಚೆಯಾಗುತ್ತಿವೆ. ಇದರ ಮಧ್ಯೆ ಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಸಾಕಷ್ಟು ಸೆಲೆಬ್ರಿಟಿಗಳೂ ಬೆಂಬಲ ಸೂಚಿಸಿದ್ದಾರೆ.

ಅದರಲ್ಲೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೂ ಸಹ ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಿದ್ದು, ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ ಎಂದು ಗುಡುಗಿದ್ದಾರೆ.

ಹಿಂದಿ ಭಾಷಿಕರು ಕನ್ನಡ ಕಲಿಯಿರಿ: ವೆಂಕಯ್ಯ ನಾಯ್ಡು!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರು ದರ್ಶನ ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ.  ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇದೆ.  ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. 

ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವುದು ನಮ್ಮ ಭಾರತ ಸಂವಿಧಾನದ ಪ್ರತೀಕವಾಗಿದೆ. 

ಯಾವುದೋ ಉತ್ತರದ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯಕರ ಸಂಗತಿಯೆಂದರೆ ತಪ್ಪಾಗಲಾರದು.  ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ

ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ...

Posted by Darshan Thoogudeepa Srinivas on Tuesday, September 15, 2020
Follow Us:
Download App:
  • android
  • ios