Asianet Suvarna News Asianet Suvarna News

ಚಾರ್ಲಿಗೆ ಮಾತ್ರ ಯಾಕೆ ತೆರಿಗೆ ವಿನಾಯಿತಿ? CM ಬೊಮ್ಮಾಯಿಗೆ ನಿರ್ದೇಶಕ ಮಂಸೋರೆ ಪತ್ರ

ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ 777 ಚಾರ್ಲಿ (777 Charlie) ಸಿನಿಮಾಗೆ ತೆರೆಗೆ ವಿನಾಯಿತಿ ಸಿಕ್ಕಿದೆ. ರಕ್ಷಿತ್ ಶೆಟ್ಟಿ ಅಭಿಯನದ ಚಾರ್ಲಿ 777 ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.  ಮಾಡುತ್ತಿದ್ದಾರೆ. ರಾಜ್ಯದ ತೆರಿಗೆ ವಿನಾಯಿತಿ ತಾರತಮ್ಯದ ಬಗ್ಗೆ ಚಿತ್ರರಂಗದ ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ.  ನಿರ್ದೇಶಕ ಮಂಸೋರೆ (Mansore) ಚಾರ್ಲಿಗೆ ಮಾತ್ರ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ  ಸಿ ಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದನ್ನು ಶೇರ್ ಮಾಡಿದ್ದಾರೆ.

Sandalwood director Mansore writes a letter to CM Basavaraj Bommai about Tax free for 777 Charlie sgk
Author
Bengaluru, First Published Jun 19, 2022, 11:23 AM IST

ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ 777 ಚಾರ್ಲಿ (777 Charlie) ಸಿನಿಮಾಗೆ ತೆರೆಗೆ ವಿನಾಯಿತಿ ಸಿಕ್ಕಿದೆ. ರಕ್ಷಿತ್ ಶೆಟ್ಟಿ ಅಭಿಯನದ ಚಾರ್ಲಿ 777 ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಈ ಮೂಲಕ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಳಿಕ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಪಡೆದ ಎರಡನೇ ಚಿತ್ರ ಇದಾಗಿದೆ. ಸಿಎಂ ಬೊಮ್ಮಾಯಿ ರಾಜ್ಯದ ಜಿಎಸ್‌ಟಿ ಪಾಲಿನಿಂದ ವಿನಾಯಿತಿ ನೀಡಿದ್ದಾರೆ. ಶ್ವಾನ ಪ್ರೀಯ ಬೊಮ್ಮಾಯಿ ಖುದ್ದು ಈ ಚಿತ್ರವನ್ನು ವೀಕ್ಷಿಸಿದ್ದರು. ಬಳಿಕ ಮಾತನಾಡಿದ್ದ ಸಿಎಂ ಬೊಮ್ಮಾಯಿ ತಮ್ಮ ಮುದ್ದಿನ ಶ್ವಾನವನ್ನು ನೆನೆದು ಭಾವುಕರಾಗಿದ್ದರು. ಚಿತ್ರ ವೀಕ್ಷಿಸಿದ ಬಳಿಕ ಎಲ್ಲರೂ ಈ ಚಿತ್ರ ವೀಕ್ಷಿಸಲು ಮನವಿ ಮಾಡಿದ್ದರು. ಇದೀಗ ತೆರಿಗೆ ವಿನಾಯಿತಿ ನೀಡಿರುವ ಬಗ್ಗೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ. ರಾಜ್ಯದ ತೆರಿಗೆ ವಿನಾಯಿತಿ ತಾರತಮ್ಯದ ಬಗ್ಗೆ ಚಿತ್ರರಂಗದ ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ.  ನಿರ್ದೇಶಕ ಮಂಸೋರೆ (Mansore) ಚಾರ್ಲಿಗೆ ಮಾತ್ರ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ  ಸಿ ಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದನ್ನು ಶೇರ್ ಮಾಡಿದ್ದಾರೆ.

ಮಂಸೋರೆ ಬರೆದ ಪತ್ರ 

ಕರ್ನಾಟಕದ ಮುಖ್ಯಮಂತ್ರಿಗಳಾದ Chief Minister of Karnataka ಬಸವರಾಜ ಬೊಮ್ಮಾಯಿ ಅವರಿಗೆ ನಮಸ್ಕಾರ.

ನನ್ ಹೆಸರು 
ಮಂಸೋರೆ 
ಕನ್ನಡ ಸಿನೆಮಾ ನಿರ್ದೇಶಕ.

ತಾವು ಕನ್ನಡ ಸಿನೆಮಾ, ಚಾರ್ಲಿ 777ಗೆ ನಿರ್ಮಾಪಕರ ಕೋರಿಕೆಯ ಮೇರೆಗೆ , ಸದರಿ ಸಿನೆಮಾಗೆ 100 % ಜಿಎಸ್‌ಟಿ ಇಂದ ವಿನಾಯಿತಿ ಕೊಟ್ಟಿರುವುದು ತುಂಬಾ ಸಂತೋಷದ ವಿಷಯ. ಕನ್ನಡ ಸಿನೆಮಾಗಳ ಏಳಿಗೆಗೆ ಇದು ಅತ್ಯವಶ್ಯಕ. ಜೊತೆಗೆ ಈ ಹಿಂದೆ ಯಾವುದೋ ಅನ್ಯ ಭಾಷೆಯ ಸಿನೆಮಾಗು ತಾವು 100 % ಜಿಎಸ್‌ಟಿ ತೆರಿಗೆ ವಿನಾಯಿತಿ ಕೊಟ್ಟಿದ್ದೀರಿ ಎಂದು ಯಾವುದೋ ಸುದ್ದಿ ಪತ್ರಿಕೆಯಲ್ಲಿ ಓದಿದ ನೆನಪು.
ಈಗ ಈ ಪತ್ರವನ್ನು ತಮಗೆ ಬರೆಯುತ್ತಿರುವುದರ ಕಾರಣವನ್ನು ಮೊದಲಿಗೆ ತಮಗೆ ವಿವರಿಸುತ್ತೇನೆ. 

ಚಾರ್ಲಿ 777 ಸಿನಿಮಾಗೆ ಬಂಪರ್ ಗಿಫ್ಟ್, ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ!

ತಾವು ಮುಖ್ಯಮಂತ್ರಿ ಆಗುವ ಮೊದಲು, ತಮ್ಮ ಬಿಜೆಪಿ ಸರ್ಕಾರ ಬರುವ ಮೊದಲು ಕನ್ನಡದ ಸಿನೆಮಾಗಳಿಗೆ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ (ಹೊರ ರಾಜ್ಯದಲ್ಲಿ ಚಿತ್ರೀಕರಣವಾಗುವುದಾದರೆ ಅದಕ್ಕೆ ಸೂಕ್ತ ಕಾರಣ ಕೊಡಬೇಕಿತ್ತು) ಎಲ್ಲಾ ಕನ್ನಡ ಸಿನೆಮಾಗಳಿಗೆ 100 %  ತೆರಿಗೆ ವಿನಾಯಿತಿ ಇತ್ತು ಎಂಬ ವಿಷಯ ತಮಗೆ ಗೊತ್ತಿತ್ತೇ? ಕನ್ನಡದ ಸಿನೆಮಾಗಳಿಗೆ ಇದ್ದ ಈ ವಿನಾಯಿತಿಯನ್ನು ಕನ್ನಡಿಗರ ಕೈಯಿಂದ (ಕನ್ನಡದ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆದು ಕಿತ್ತುಕೊಂಡಿದ್ದು) ನಿಮ್ಮದೇ ಆದ ಬಿಜೆಪಿ ಸರ್ಕಾರ ಎಂಬುದು ನಿಮಗೆ ತಿಳಿದಿದೆಯೇ? ಅದು ಜಿಎಸ್‌ಟಿ ಎಂಬ ಹೆಮ್ಮಾರಿಯ ಹೆಸರಲ್ಲಿ ಎಂಬುದು ತಮಗೆ ತಿಳಿದಿದೆಯೇ? ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ಕನ್ನಡ ಸಿನೆಮಾಗಳ ಮೇಲೆ ಮನರಂಜನಾ ತೆರಿಗೆ ವಿಧಿಸಲು ಹೋದಾಗ, ನಮ್ಮೆಲ್ಲರ ಪಾಲಿನ ಅಣ್ಣಾವ್ರು, ಡಾ. ರಾಜ್ ಕುಮಾರ್ ಅವರು ಕನ್ನಡ ಚಿತ್ರರಂಗವನ್ನೇ ತ್ಯಜಿಸಿ ತಮ್ಮ ಹಳ್ಳಿಗೆ ಹೋಗುವ ನಿರ್ಧಾರ ಮಾಡುತ್ತಾರೆ, ಆಗ ಮುಖ್ಯಮಂತ್ರಿಗಳೇ ಅಣ್ಣಾವ್ರ ಮನೆಗೆ ಹೋಗಿ ಅವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮನವೊಲಿಸಿ ಅವರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಮತೆ ಒಪ್ಪಿಸುತ್ತಾರೆ ಹಾಗು ತೆರಿಗೆ ವಿಧಿಸುವ ತಮ್ಮ ನಿಲುವನ್ನು ಹಿಂತೆಗೆದುಕೊಳ್ಳುತ್ತಾರೆ. (ಹಿರಿಯ ಪತ್ರಕರ್ತರಾದ ಬಿ.ವಿ.ವೈಕುಂಠರಾಜು ರವರ ಸಿನೆಮಾತು ಪುಸ್ತಕದಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ  ಉಲ್ಲೇಖಿಸಲಾಗಿದೆ) ಅದೇ ಮುಂದೆ ಕನ್ನಡ ಹಾಗೂ ಕನ್ನಡ ನೆಲದಲ್ಲಿ ತಯಾರಾಗುವ ಎಲ್ಲಾ ಸಿನೆಮಾಗಳಿಗೂ 100 % ತೆರಿಗೆ ವಿನಾಯಿತಿ ನೀಡಲಾಗುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂತಹ ಮಹಾನುಭಾವರ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದ ಸೌಲಭ್ಯವನ್ನು ಕಿತ್ತುಕೊಂಡಿದ್ದು ಜಿಎಸ್‌ಟಿ ನೆಪದಲ್ಲಿ ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿದೆಯೇ? 

ಈಗ ವಾಪಸ್ಸು ನಿಮ್ಮ ಆಡಳಿತದ ಸರ್ಕಾರದ ವಿಷಯಕ್ಕೆ ಬರುವುದಾದರೆ, ಶ್ವಾನದ ಕಾಳಜಿಯಿಂದ ತಾವು ಆ 'ಒಂದು' ಕನ್ನಡ ಸಿನೆಮಾಗೆ ಮಾತ್ರ 100 % ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಲು ಆ ಹಣವನ್ನು ತಾವು ತಮ್ಮ ಜೇಬಿನಿಂದ ನೀಡುತ್ತಿದ್ದೀರ ಎಂದು ತಿಳಿಯಲು ಡಾ.ಬಿ.ಆರ್.ಅಂಬೇಡ್ಕರ್ ಸರ್ ಬರೆದಿರುವ, ಸಾಂವಿಧಾನಿಕ ಹಕ್ಕನ್ನು ಪಡೆದಿರುವ ಕರ್ನಾಟಕದ ಪ್ರಜೆಗಳಾಗಿ ಕೇಳಿತ್ತಿದ್ದೇನೆ, ದಯವಿಟ್ಟು ತಿಳಿಸಿ. 
ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವಾಗುತ್ತಿರುವ ಅನೇಕ ಕನ್ನಡ ಚಿತ್ರಗಳು ಕನ್ನಡ ನೆಲದಲ್ಲಿ ತಯಾರಾಗುತ್ತಿವೆ. ಉದಾ : ಪೆಡ್ರೋ, ಕೋಳಿತಾಲ್, ಡೊಳ್ಳು, ದಾರಿ ಯಾವುದಯ್ಯ ವೈಕುಂಟಕ್ಕೆ, ಅಮೃತಮತಿ, ನೀಲಿ ಹಕ್ಕಿ ಇನ್ನೂ ಬಹಳಷ್ಟು ಸಿನೆಮಾ ಇದೆ. ಜೊತೆಗೆ ಅಂತರ್ರಾಷ್ಟ್ರೀಯ ಚಿತ್ರೋತ್ಸವಕ್ಕೆ ಹೋಗದಿದ್ದರೂ ಸಹ, ಅನೇಕ ಕನ್ನಡ ಸಿನೆಮಾಗಳು ಅತ್ತ್ಯುತ್ತಮವಾದ ಮಾನವೀಯ ಗುಣವುಳ್ಳ ಸಿನೆಮಾಗಳು ಕಳೆದ ನಾಲ್ಲೈದು ವರ್ಷಗಳಲ್ಲೇ ಸಾಕಷ್ಟಿವೆ, ಅದು ಯಾವುದಕ್ಕೂ ನೀಡದ 100 % ತೆರಿಗೆ ವಿನಾಯಿತಿ ಕೇವಲ ಒಂದು ಸಿನೆಮಾಗೆ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು ಎಂದು ತಮಗೆ ಮನವರಿಕೆ ಮಾಡಲು ಇಚ್ಚಿಸುತ್ತೇನೆ. ಚಾರ್ಲಿ ಸಿನೆಮಾದ ನಿರ್ಮಾಪಕರೂ ಸೇರಿದಂತೆ ಕನ್ನಡದ ಯಾರೊಬ್ಬ ನಿರ್ಮಾಪಕರು ಅಣ್ಣಾವ್ರ ಆಶಯ ಮೀರಿ, ಕನ್ನಡ ಚಿತ್ರರಂಗವನ್ನು ಹೊರಗಿಟ್ಟು, ಸ್ವಾರ್ಥಿಗಳಂತೆ ತಮ್ಮ ಸಿನೆಮಾಗೆ ಮಾತ್ರ 100 % ತೆರಿಗೆ ವಿನಾಯಿತಿ ಕೊಡಬೇಕೆಂದು ಹಂಬಲಿಸಲಾರರು, ತಮ್ಮಲ್ಲಿ ಬೇಡಿಕೊಳ್ಳಲಾರರು ಎಂದು ನನ್ನ ಬಲವಾದ ನಂಬಿಕೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರುವುದರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು ಡಾ. ರಾಜ್ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ, ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನೆಮಾಗೂ ಈ ಹಿಂದೆ ಇದ್ದಂತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ.

ಸಿನೆಮಾ ನಿರ್ದೇಶಕ
//ಮಂಸೋರೆ

Follow Us:
Download App:
  • android
  • ios