‘ದಬಾಂಗ್‌ 3’ ಚಿತ್ರದಲ್ಲಿನ ಅತ್ಯುತ್ತಮ ನಟನೆಗೆ ದೆಹಲಿಯ ದಾದಾ ಸಾಹೇಬ್‌ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸುದೀಪ್‌ ಹೆಸರನ್ನು ಆಯ್ಕೆ ಮಾಡಿದೆ. ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಫಾಲ್ಕೆ ಪ್ರಶಸ್ತಿಯನ್ನು ನಮ್ರತೆಯಿಂದ ಸ್ವೀಕರಿಸಿದ 'ದಾದಾ'- ವಿಡಿಯೋ

ಭಾರತೀಯ ಚಿತ್ರರಂಗದ ಮಟ್ಟಿಗೆ ಇದೊಂದು ಪ್ರತಿಷ್ಟಿತ ಪ್ರಶಸ್ತಿ. ದಾದಾ ಸಾಹೇಬ್‌ ಫಾಲ್ಕೆ ಅವರ ಮೇಲಿನ ಗೌರವಕ್ಕಾಗಿ ಭಾರತೀಯ ಚಿತ್ರರಂಗದ ಗಣ್ಯರು, ತಜ್ಞರು, ಬರಹಗಾರರು ಹುಟ್ಟು ಹಾಕಿರುವ ಪ್ರಶಸ್ತಿ. ಫಾಲ್ಕೆ ಅವರ ಹೆಸರಲ್ಲಿ ಪ್ರತಿ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸಿ ನಟ-ನಟಿಯರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾ ಬರುತ್ತಿದೆ. ಪ್ರತಿ ವರ್ಷವೂ ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಛಾಯಾಗ್ರಾಹಕ, ಅತ್ಯುತ್ತಮ ನಟಿ ಸೇರಿದಂತೆ ಹಲವು ನಿಭಾಗಗಳಲ್ಲಿ ಪ್ರಶಸ್ತಿ ನೀಡುತ್ತಿದೆ. ಈಗ 10ನೇ ವರ್ಷದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂಗವಾಗಿ ಸುದೀಪ್‌ ಅವರನ್ನು ದಬಾಂಗ್‌ 3 ಚಿತ್ರದಲ್ಲಿನ ಅಭಿನಯಕ್ಕಾಗಿ ‘ಭರವಸೆಯ ನಟ’ ಪ್ರಶಸ್ತಿಗೆ ಸಮಿತಿ ಆಯ್ಕೆ ಮಾಡಿರುವುದು ವಿಶೇಷ.

ಫೆಬ್ರವರಿ 20ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮಹಾರಾಷ್ಟ್ರ ರಾಜ್ಯಪಾಲರು ಸೇರಿದಂತೆ ಭಾರತೀಯ ಚಿತ್ರರಂಗದ ಗಣ್ಯರು, ಕೇಂದ್ರ ಸಚಿವರು ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆನ್ನಲಾಗಿದೆ.ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವಡೇಕರ್‌ ಶುಭ ಕೋರಿ ಪತ್ರ ಬರೆದಿದ್ದಾರೆ. ಸಮಾರಂಭ ದೊಡ್ಡ ಮಟ್ಟದಲ್ಲಿ ನಡೆಯಲಿದೆ. ಬಾಲಿವುಡ್‌ನ ಹೆಸರಾಂತ ಕಲಾವಿದರು ಭಾಗವಹಿಸುತ್ತಿದ್ದಾರೆ.

ಈ ವ್ಯಕ್ತಿಗಾಗಿ 15 ವರ್ಷ ಬಳಿಕ 'ಪ್ರೈಡ್‌ ಆಫ್‌ ಕನ್ನಡ ಸಿನಿಮಾ' ಅವಾರ್ಡ್‌ ಸ್ವೀಕರಿಸಿದ ಕಿಚ್ಚ!