Asianet Suvarna News Asianet Suvarna News

ಸ್ಯಾಂಡಲ್‌ವುಡ್ ಹಿರಿಯ ನಟ ಮನ್‌ದೀಪ್ ರಾಯ್‌ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್‌ನ ಹಿರಿಯ ನಟ ಮನ್​ದೀಪ್​ ರಾಯ್​ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 

Sandalwood senior Actor Mandeep roy Admitted to Hospital due to heart attack sgk
Author
First Published Dec 5, 2022, 2:32 PM IST

ಸ್ಯಾಂಡಲ್‌ವುಡ್‌ನ ಹಿರಿಯ ನಟ ಮನ್​ದೀಪ್​ ರಾಯ್​ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಹೃದಯಾಘಾತ ಸಂಭವಿಸಿದ್ದು ಬೆಂಗಳೂರಿನ ಶೇಷಾದ್ರಿಪುರನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮನ್​ದೀಪ್​ ರಾಯ್ ಆರೋಗ್ಯದ ಬಗ್ಗೆ ಇನ್ನೂ  ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಮಧ್ಯಾಹ್ನ ಹೆಲ್ತ್ ಬುಲೇಟಿನ್ ರಿಲೀಸ್ ಮಾಡುವ ಸಾಧ್ಯತೆ ಇದೆ.

'ಮನ್‌ದೀಪ್ ರಾಯ್ ಕಂಡೀಷನ್ ಸ್ಟೇಬಲ್ ಆಗಿದೆ. ಮಧ್ಯಾಹ್ನದ ನಂತರ ಪ್ರೇಸ್ ನೋಟ್ ರಿಲೀಸ್ ಮಾಡಲಾಗುತ್ತೆ.  ಸ್ಕ್ಯಾನಿಂಗ್ ಸೇರಿದಂತೆ ಎಲ್ಲವನ್ನೂ ಮಾಡಿದ್ದೇವೆ. ಬೇಕಾದ ಚಿಕಿತ್ಸೆಯನ್ನೂ ನೀಡುತ್ತಿದ್ದೀವಿ' ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. 

ಆಸ್ಪತ್ರೆಗೆ ದಾಖಲಾದ ಖ್ಯಾತ ಗಾಯಕ ಜುಬಿನ್‌; ಫೋಟೋ ಶೇರ್ ಮಾಡಿ ಹೇಳಿದ್ದೇನು?

ಕನ್ನಡದ ಹಿರಿಯ ನಟ ಮನ್‌ದೀಪ್ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಇಂದು ಅವರ ಚಿಕಿತ್ಸೆಗೆ ಹಣಕಾಸಿನ ಸಮಸ್ಯೆ ಎದುರಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎನ್ನಲಾಗಿದೆ. ಮನ್​ದೀಪ್​ ರಾಯ್​ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅಭಿಮಾನಿಗಳು, ಸ್ನೇಹಿತರು ಸೇರಿದಂತೆ ಅನೇಕರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

KGF ತಾತ ಕೃಷ್ಣ ಜಿ.ರಾವ್ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿತಿ ಗಂಭೀರ

ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿರುವ ಮನ್‌ದೀಪ್ ಅವರು ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ದಶಕಗಳಿಂದ ಹಾಸ್ಯ ಕಲಾವಿದರಾಗಿ ಮಿಂಚಿರುವ ಮನದೀಪ್ ರಾಯ್, ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು. ಶಂಕರ್ ನಾಗ್ ಅವರ ಮಾಲ್ಗುಡಿ ಡೇಸ್ ಧಾರಾವಾಹಿಯಲ್ಲಿ ಮನ್ ದೀಪ್ ರಾಯ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ, ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪ, ಖುಷಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣು ವರ್ಧನ್ ಸೇರಿದಂತೆ ಬಹುತೇಕ ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.


 

Follow Us:
Download App:
  • android
  • ios