ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ ಚಿತ್ರದ ಟೀಸರ್ ‘ವ್ಲಾಗ್-1 ದಿ ಲೂಪ್’ ಹೆಸರಿನಲ್ಲಿ ಬಿಡುಗಡೆ ಆಗಿದೆ. ಇದೊಂದು ಕಾರ್ಡ್ ಕಾಮಿಡಿ, ಹಾರರ್ ಮತ್ತು ಥ್ರಿಲ್ಲರ್ ಜಾನರ್ ಸಿನಿಮಾ ಆಗಿದೆ.
ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ ಚಿತ್ರದ ಟೀಸರ್ ‘ವ್ಲಾಗ್-1 ದಿ ಲೂಪ್’ ಹೆಸರಿನಲ್ಲಿ ಬಿಡುಗಡೆ ಆಗಿದೆ. ಇದೊಂದು ಕಾರ್ಡ್ ಕಾಮಿಡಿ, ಹಾರರ್ ಮತ್ತು ಥ್ರಿಲ್ಲರ್ ಜಾನರ್ ಸಿನಿಮಾ ಆಗಿದೆ. ಚೇತನ್ ಶೆಟ್ಟಿ ‘ಸೀಟ್ ಎಡ್ಜ್’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಎನ್. ಆರ್. ಸಿನಿಮಾ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಗಿರಿಧರ ಟಿ. ವಸಂತಪುರ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ತನ್ನ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ‘ಸೀಟ್ ಎಡ್ಜ್’ ಚಿತ್ರತಂಡ, ಇದೀಗ ‘ವ್ಲಾಗ್-1 ದಿ ಲೂಪ್’ ಎಂಬ ಹೆಸರಿನಲ್ಲಿ ‘ಸೀಟ್ ಎಡ್ಜ್’ ಸಿನಿಮಾದ ಟೀಸರ್ ಮತ್ತು ಕಂಟೆಂಟ್ ಝಲಕ್ ಅನ್ನು ಬಿಡುಗಡೆ ಮಾಡಿದೆ.
ಈ ಸಿನಿಮಾದಲ್ಲಿ ಮೊದಲ ಬಾರಿಗೆ ನಾನೂಬ್ಬ ಯೂಟ್ಯೂಬ್ ವ್ಲಾಗರ್ ಆಗಿ ಕಾಣಿಸಿಕೊಂಡಿದ್ದೇನೆ. ಘೋಸ್ಟ್ ಟೌನ್‌ಗೆ ಹೋಗಿ ಘೋಸ್ಟ್ ಹಂಟಿಂಗ್ ವೀಡಿಯೋ ಮಾಡಲು ನಿರ್ಧರಿಸುತ್ತೇನೆ. ಕೊನೆಗೆ ನಾನು ಅಂದುಕೊಂಡಂತೆ ಘೋಸ್ಟ್ ಹಂಟಿಂಗ್ ವಿಡಿಯೋ ಮಾಡಿ ಆಡಿಯನ್ಸ್‌ಗೆ ತೋರಿಸುತ್ತೇನಾ..? ಇಲ್ಲವಾ..? ಈ ಘೋಸ್ಟ್ ಹಂಟಿಂಗ್ ಅನ್ನೋದು ಹೇಗಿರುತ್ತದೆ ಎಂಬುದೇ ನನ್ನ ಪಾತ್ರ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು. ‘ಸೀಟ್ ಎಡ್ಜ್’ ಚಿತ್ರದ ನಾಯಕ ನಟ ಸಿದ್ಧು ಮೂಲಿಮನಿ. ನಾನು ಈ ಸಿನಿಮಾದಲ್ಲಿ ಮಧ್ಯಮ ವರ್ಗದ ಕಾಲೇಜ್ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಘೋಸ್ಟ್ ಹಂಟಿಂಗ್‌ಗೆ ಹೋಗುವ ಯು-ಟ್ಯೂಬರ್ ಜೊತೆಗೆ ನಾನು ಕೂಡ ತೊಂದರೆಗೆ ಸಿಲುಕಿಕೊಳ್ಳುತ್ತೇನೆ. ಎರಡು ಶೇಡ್‌ಗಳಿರುವಂಥ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ ಎಂದು ನಾಯಕಿ ರವೀಕ್ಷಾ ಶೆಟ್ಟಿ ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅತಿಹೆಚ್ಚು ವೀವ್ಸ್ ಪಡೆಯಲು, ಜನಪ್ರಿಯರಾಗಲು ಯೂಟ್ಯೂಬರ್ಸ್ ಮತ್ತು ವ್ಲಾಗರ್ಸ್ ಏನೇನು ಸಾಹಸಗಳನ್ನು ಮಾಡುತ್ತಾರೆ ಎಂಬ ಎಳೆಯನ್ನು ಇಟ್ಟುಕೊಂಡೆ ಈ ಸಿನಿಮಾ ಮಾಡಿದ್ದೇವೆ. ಇದು ಎಲ್ಲಾ ಥರದ ಆಡಿಯನ್ಸ್‌ಗೂ ಕನೆಕ್ಟ್ ಆಗುವಂಥ ಸಿನಿಮಾ. ನಮಗೆ ಗೊತ್ತಿಲ್ಲದ ವಿಷಯದಲ್ಲಿ ದುಸ್ಸಾಹಸಕ್ಕೆ ಕೈಹಾಕಿದರೆ, ಏನೇನು ಆಗಬಹುದು ಎಂಬುದನ್ನು ಈ ಸಿನಿಮಾದಲ್ಲಿ ಹೇಳಿದ್ದೇವೆ. ಡಾರ್ಕ್ ಕಾಮಿಡಿಯ ಜೊತೆಗೆ ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ ಎಂದು ನಿರ್ದೇಶಕ ಚೇತನ್ ಶೆಟ್ಟಿ ಹೇಳಿದರು.
ನಿರ್ಮಾಪಕ ಗಿರಿಧರ ಟಿ. ವಸಂತಪುರ, ನಟರಾದ ರಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಸಂಗೀತ ನಿರ್ದೇಶಕ ಆಕಾಶ್ ಪರ್ವ, ಛಾಯಾಗ್ರಹಕ ದೀಪಕ್ ಕುಮಾರ್ ಜೆ. ಕೆ ಮೊದಲಾದವರು ‘ಸೀಟ್ ಎಡ್ಜ್’ ಚಿತ್ರದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಸುತ್ತಮುತ್ತ ಸುಮಾರು 45 ದಿನಗಳ ಕಾಲ 45 ‘ಸೀಟ್ ಎಡ್ಜ್’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಅರ್ಮನ್ ಮಲ್ಲಿಕ್, ಟಿಪ್ಪು ಮೊದಲಾದ ಗಾಯಕರು ‘ಸೀಟ್ ಎಡ್ಜ್’ ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಇನ್ನು ರಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಕಿರಣ್, ಪುನೀತ್ ಬಾಬು, ತೇಜು ಪೊನ್ನಪ್ಪ ನಟಿಸಿದ್ದಾರೆ.
