ಎಲ್ಲವೂ ಸತ್ಯವಲ್ಲ, ಈ 4 ಚಿತ್ರಗಳು ನಿದ್ದೆ ಇಲ್ಲದಂತೆ ಮಾಡಿವೆ; ರಕ್ಷಿತ್ ಶೆಟ್ಟಿ ಟ್ವೀಟ್ ವೈರಲ್
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾಗಳ ಬಗ್ಗೆ ಬಹಿರಂಗ ಪಡಿಸಿದ್ದಾರೆ. ಹರಿದಾಡುತ್ತಿರುವುದೆಲ್ಲವೂ ಸತ್ಯವಲ್ಲ ಎಂದು ಹೇಳಿದ್ದಾರೆ.
ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ 777 ಚಾರ್ಲಿ ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬಂದಿಲ್ಲ. ಆದರೆ ಸಿಂಪಲ್ ಸ್ಟಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ ಜೊತೆಗೆ ನಿರ್ದೇಶನದಲ್ಲೂ ರಕ್ಷಿತ್ ತೊಡಗಿಕೊಂಡಿದ್ದಾರೆ. 777 ಚಾರ್ಲಿ ಬಳಿಕ ರಕ್ಷಿತ್ ಸಾಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ಬ್ಯುಸಿಯಾಗಿದ್ದರು. ಈ ಸಿನಿಮಾ ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾಗಳ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿತ್ತು. ಆಲ್ಲದೇ ಅನೇಕ ಸುದ್ದಿಗಳು ಹರಿದಾಡುತ್ತಿತ್ತು. ಕನ್ನಡ ಸಿನಿಮಾಗಳ ಜೊತೆಗ ರಕ್ಷಿತ್ ತಮಿಳು ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ, ದಳಪತಿ ವಿಜಯ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಇದೀಗ ರಕ್ಷಿತ್ ಅವರೇ ಟ್ವೀಟ್ ಮಾಡುವ ಮೂಲಕ ಹರಿದಾಡುತ್ತಿದ್ದ ಸುದ್ದಿಗೆ ಬ್ರೇಕ್ ಹಾಕಿದ್ದಾರೆ.
ರಕ್ಷಿತ್ ಶೆಟ್ಟಿ ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಜೊತೆ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ದಿನಗಳ ಹಿಂದೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ನಿರ್ದೇಶಕ ಲೋಕೇಶ್ ಕನಗರಾಜ್ ಮತ್ತು ದಳಪತಿ ಕಾಂಬಿನೇಷನ್‌ನಲ್ಲಿ ಸಿನಿಮಾ ಮೂಡಿಬರುತ್ತಿದೆ. ನಿರೀಕ್ಷೆಯ ಸಿನಿಮಾದಲ್ಲಿ ರಕ್ಷಿತ್ ಕಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೀಗ ರಕ್ಷಿತ್ ತನ್ನ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ಬಹಿರಂಗ ಪಡಿಸುವ ಮೂಲಕ ತಮಿಳು ಸಿನಿಮಾ ಮಾಡುವ ವದಂತಿಗೆ ಬ್ರೇಕ್ ಹಾಕಿದ್ದಾರೆ. ಇದೆಲ್ಲ ಊಹಾಪೂಹಗಳು ಅಷ್ಟೆ ಎಂದು ಹೇಳಿದ್ದಾರೆ.
ಸಿಂಪಲ್ ಸ್ಟಾರ್ ಟ್ವೀಟ್ ಮಾಡಿದ್ದು ತನ್ನ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಬಳಿಕ ರಕ್ಷಿತ್ ರಿಚರ್ಡ್ ಆಂಟನಿ (RA), ಪುಣ್ಯಕೋಟಿ ಪಾರ್ಟ್ 1 ಮತ್ತು 2 (PK 1 And 2), ಮಿಡ್ ವೇ ಟು ಮೋಕ್ಷ ( M2M) ಸಿನಿಮಾಗಳಲ್ಲಿ ಬ್ಯುಸಿಯಾಗಿರುವುದಾಗಿ ಹೇಳಿದ್ದಾರೆ. ಅಲ್ಲದೇ ಈ ಸಿನಿಮಾಗಳು ನಿದ್ದೆ ಇಲ್ಲದಂತೆ ಮಾಡಿವೆ ಎಂದು ರಕ್ಷಿತ್ ಶೆಟ್ಟಿ ಬಹಿರಂಗ ಪಡಿಸಿದರು. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸತ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ರಕ್ಷಿತ್ ಶೆಟ್ಟಿ ಬಗ್ಗೆ ಹೀಗೊಂದು ಸುದ್ದಿ ವೈರಲ್; ದಳಪತಿ ವಿಜಯ್ ಸಿನಿಮಾದಲ್ಲಿ ಸಿಂಪಲ್ ಸ್ಟಾರ್
SSE ಸಿನಿಮಾ ಬಳಿಕ ನನ್ನ ಲೈಪ್ ಅಪ್ ಸ್ಪಷ್ಟವಾಗಿವೆ. RA, PK 1 ಮತ್ತು 2, M2M. ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ಈ ನಾಲ್ಕು ಚಿತ್ರಗಳು ಮಾತ್ರ. KP2 ಕೂಡ ಸದ್ಯಕ್ಕೆ ಇಲ್ಲ. ಆದರೆ KP2 ಗಾಗಿ ನಾನು ವಿಭಿನ್ನ ಪ್ಲಾನ್ ಹೊಂದಿದ್ದೇನೆ. ನೋಡೋಣ. ನೀವು ಅಂತರ್ಜಾಲದಲ್ಲಿ ಓದುವ ಯಾವುದೂ ನಿಜವಲ್ಲ. ಎಂದಿಗೂ ನಿಜವಾಗಿರಲಿಲ್ಲ. ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ' ಎಂದು ಬರೆದುಕೊಂಡಿದ್ದಾರೆ.
ಮಗುವಿನ ನಗು, ಸಂತಸ, ಕಾಡು; ರಿಷಬ್ ಮತ್ತು ಸ್ನೇಹಿತರ ಜೊತೆ ರಕ್ಷಿತ್ ಶೆಟ್ಟಿ ಪ್ರವಾಸ, ಫೋಟೋ ವೈರಲ್
ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾಗಳ ಬಗ್ಗೆ ಟ್ವೀಟ್ ಮಾಡುವ ಮೂಲಕ ಪುಣ್ಯಕೋಟಿ ಸಿನಿಮಾ ಪಾರ್ಟ್ 2 ಬಗ್ಗೆಯೂ ರಿವೀಲ್ ಮಾಡಿದ್ದಾರೆ. ಈ ಸುದ್ದಿ ಅಭಿಮಾನಿಗಳಿಗೆ ಸಖತ್ ಥ್ರಿಲ್ ಆಗಿದೆ. ರಕ್ಷಿತ್ ಟ್ವೀಟ್ ನೋಡಿ ಅನೇಕರು ಸಂತಸದ ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಬೇಗ ಯಾವುದಾದರೂ ಒಂದು ಸಿನಿಮಾ ರಿಲೀಸ್ ಮಾಡಿ ಎಂದು ಕೇಳಿಕೊಂಡಿದ್ದಾರೆ. ನಿಮ್ಮನ್ನು ತೆರೆಮೇಲೆ ನೋಡದೆ ಅನೇಕ ದಿನಗಳಾಗಿದೆ ಬೇಡ ಬನ್ನಿ ಎಂದು ಹೇಳುತ್ತಿದ್ದಾರೆ. ಸದ್ಯ ರಕ್ಷಿತ್ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುವ ಸಾಧ್ಯತೆ ಇದೆ. ಆದರೆ ಯಾವಾಗ ಎಂದು ಕಾದುನೋಡಬೇಕಿದೆ.