ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ: ಕಿಚ್ಚ ಸುದೀಪ್ ಸ್ಪಷ್ಟನೆ

ಅಭಿನಯ ಚರ್ಕವರ್ತಿ ಕಿಚ್ಚ ಸುದೀಪ್ ರಾಜಕೀಯ ಎಂಟ್ರಿ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸುದೀಪ್ ಹೇಳಿದ್ದಾರೆ.

Sudeep first reaction About joining BJP sgk

ಅಭಿನಯ ಚರ್ಕವರ್ತಿ ಕಿಚ್ಚ ಸುದೀಪ್ ರಾಜಕೀಯ ಎಂಟ್ರಿ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸುದೀಪ್ ಹೇಳಿದ್ದಾರೆ. ಜೆಪಿ ನಗರದ ತಮ್ಮ ನಿವಾಸದ ಬಳಿ ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುದೀಪ್, 'ಯಾವ ಪಕ್ಷದಿಂದಲೂ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ. ನನ್ನ ಸ್ನೇಹಿತರಿಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ, ಚುನಾವಣೆ, ರಾಜಕಾರಣ ನನಗೆ ಇಷ್ಟವಿಲ್ಲ. ನಾನು ಯಾರ ಪರವಾಗಿಯೂ ಚುನಾವಣೆಯಲ್ಲಿ ಟಿಕೆಟ್‌ ಕೇಳಿಲ್ಲ. ಕೆಲವು ಸ್ನೇಹಿತರು, ಆತ್ಮೀಯರ ಪರವಾಗಿ ಪ್ರಚಾರ ಮಾಡಲಿದ್ದೇನೆ' ಎಂದು ಸುದೀಪ್ ಹೇಳಿದ್ದಾರೆ. ಈ ಮೂಲಕ ಕಿಚ್ಚ ತನ್ನ ರಾಜಕೀಯ ನಡೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 'ಈ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ಎಲ್ಲಾ ಸ್ಪಷ್ಟನೆ ನೀಡುತ್ತೇನೆ' ಎಂದು ಸುದೀಪ್ ಹೇಳಿದ್ದಾರೆ. 

ಇದೇ ವೇಳೆ ಮಾತನಾಡಿದ ಸುದೀಪ್ ಬೆದರಿಕೆ ಕರೆಯ ಬಗ್ಗೆಯೂ ಪ್ರತಿಕ್ರಿಯಿಸಿದರು. ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಪತ್ರ ಬಂದಿರುವ ಬಗ್ಗೆ ಮಾತನಾಡಿದ ಸುದೀಪ್ ಯಾವುದೇ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಸುದೀಪ್ ಹೇಳಿದ್ದಾರೆ. ಕೆಲವು ವಿಷಯಗಳನ್ನು ಇಲ್ಲಿ ಹೇಳಲು ಸಾಧ್ಯವಿಲ್ಲ, ನಾನೊಂದು ನಿಲುವು ತೆಗೆದುಕೊಂಡಿದ್ದೇನೆ ಅದನ್ನು ಸುದ್ಧಿಗೋಷ್ಠಿಯಲ್ಲಿ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ. 


ಸುದೀಪ್ ಬಿಜೆಪಿಗೆ; ಸುಳ್ಳು ಸುದ್ದಿ, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದ ಪ್ರಕಾಶ್ ರಾಜ್

ಸುದೀಪ್ ಬಿಜೆಪಿಗೆ ಸೇರ್ತಾರೆ ಎನ್ನುವ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇಂದು ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಸುದ್ದಿಗೋಷ್ಠಿ ನಡೆಸಲಿದ್ದು ಸುದೀಪ್ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಮಧ್ಯಾಹ್ನ 1.30 ಕ್ಕೆ ಸುದ್ದಿಗೋಷ್ಠಿ ನಡೆಯಲಿದ್ದು ಅಧಿಕೃತವಾಗಿ ಸುದೀಪ್ ಬಿಜೆಪಿ ಸೇರಲಿದ್ದಾರೆ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುದೀಪ್‌ ‌ಬಿಜೆಪಿಗೆ ಸೇರುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೀಗ ಸುದೀಪ್ ಬಿಜೆಪಿ ಸೇರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೂಲಕ ಕುತೂಹಲಕ್ಕೆ ತೆರೆ ಎಳೆದರು. 
 

Latest Videos
Follow Us:
Download App:
  • android
  • ios