Asianet Suvarna News Asianet Suvarna News

ನಿರ್ಮಾಪಕ MN ಕುಮಾರ್ ವಿವಾದ: ಫಿಲ್ಮ್ ಚೇಂಬರ್‌ಗೆ ದೀರ್ಘ ಪತ್ರ ಬರೆದ ಕಿಚ್ಚ ಸುದೀಪ್

ನಿರ್ಮಾಪಕ MN ಕುಮಾರ್ ವಿವಾದದ ಬಗ್ಗೆ ಕಿಚ್ಚ ಸುದೀಪ್ ಫಿಲ್ಮ್ ಚೇಂಬರ್‌ಗೆ ದೀರ್ಘವಾದ ಪತ್ರ ಬರೆದಿದ್ದಾರೆ. ಸುದೀಪ್ ಬರೆದ ಪತ್ರದಲ್ಲಿ ಏನಿದೆ ನೋಡಿ.  

Sudeep pens note on Kannada film Chamber sgk
Author
First Published Jul 10, 2023, 5:26 PM IST

ನಿರ್ಮಾಪಕ ಎಮ್ ಎನ್ ಕುಮಾರ್ ಮತ್ತು ಕಿಚ್ಚ ಸುದೀಪ್ ಅವರ ವಿವಾದ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಸುದೀಪ್ ಆಪ್ತ ಜಾಕ್ ಮಂಜು ಪ್ರೆಸ್‌ಮೀಟ್ ಮಾಡಿ ಸ್ಪಷ್ಟನೆ ನೀಡಿದರೂ ಸಹ ಕಿಚ್ಚ ಸುದೀಪ್ ದೀರ್ಘವಾದ ಪೋಸ್ಟ್ ಶೇರ್ ಮಾಡಿದ್ದಾರೆ. 

ಸುದೀಪ್ ಪೋಸ್ಟ್ 

ಎಲ್ಲರಿಗೂ ನಮಸ್ಕಾರ ಕನ್ನಡ ಚಿತ್ರರಂಗ ಮಹಾನ್ ಸಾಧಕರಿಂದ ಬೆಳೆದು ನಿಂತಿದೆ. ಅವರೆಲ್ಲರ ಸಾಧನೆಯ ನಡುವೆ, ನನ್ನದೂ ಒಂದು ಅಳಿಲು ಸೇವೆ ಇದೆ ಅಂತಹ ಮಹಾನ್ ಸಾಧಕರೆದುರು ನಾನು ತುಂಬಾ ಕಿರಿಯವ ಈ ಕಳೆದ 27 ವರ್ಷಗಳಲ್ಲಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ಕಲಾವಿದನಾಗಿ, ಬರಹಗಾರ, ಗಾಯಕ, ಇತ್ಯಾದಿ ಇತ್ಯಾದಿ ಆಗಿ ನಾನು ಈ ಪತ್ರವನ್ನು ನಿಮಗೆ ಬರೆಯುತ್ತಿಲ್ಲ. ಚಿತ್ರೋದ್ಯಮದಲ್ಲಿ ಆ 27 ವರ್ಷಗಳ ಕಾಲ ಕಾವಾಡಿಕೊಂಡು ಬಂದ ಒಳ್ಳೆಯತನ ಮತ್ತು ಮಾನವೀಯತೆಯ ಆಧಾರದಲ್ಲಿ ಈ ಮೇಲ್ಕಂಡ ಸಂಸ್ಥೆಗಳ ಮೇಲಿವ ಗೌರವಾಧಾರದ ಮೇಲೆ ಈ ಪತ್ರವನ್ನು ಬರೆಯುತ್ತಿದ್ದೇನೆ.

ವಾಣಿಜ್ಯ ಮಂಡಳಿಗೆ ನಿರ್ಮಾಪಕರೊಬ್ಬರು ಮೊರೆ ಬಂದಿರುವುದು ಸರಿ ಅಷ್ಟೇ. ಸ್ಪಂದಿಸಬೇಕಾದುದು ನಿಮ್ಮ ಕರ್ತವ್ಯ ನೀವು ಸ್ಪಂದಿಸಿದ್ದೀರಿ. ಆ ಬಗ್ಗೆ ನನಗೆ ಯಾವುದೂ ತಕರಾರು ಇರುವುದಿಲ್ಲ. ಆದರೂ, ಯಾವುದೇ ನಿರ್ಮಾಪಕರು, ಯಾರೇ ಕಲಾವಿದರ ತಂತ್ರಜ್ಞರ ಮೇಲೆ ನಿರಾಧಾರ ಸುಳ್ಳು ಆರೋಪಗಳನ್ನು ಮಾಡುವಾಗ, ಕನಿಷ್ಠ ದಾಖಲಾತಿಗಳನ್ನು ಪರಿವೀಕ್ಷಿಸುವುದು ಮಾತ್ರ ಸಂಸ್ಥೆಗಳಾದ ನಿಮ್ಮದೂ ಜವಾಬ್ದಾರಿ ಆಗಿರುತ್ತದೆಂದು ನಮ್ಮತ ಇಂದ ಮನವಿ ಮಾಡುತ್ತೇವೆ. ಈ ಹಿಂದೆ ನೀವು ಇದನ್ನೆಲ್ಲ ಪರಿಶೀಲಿಸಲಿಲ್ಲವೆಂದಲ್ಲ. ಈ ಬಾರಿ ನನ್ನ ವಿಚಾರದಲ್ಲಿ ಅದೇಕೋ ನಡೆಯುತ್ತಿಲ್ಲ, ಕಾರಣವೂ ನನಗೆ ತಿಳಿಯುತ್ತಿಲ್ಲ.

ಅಲ್ಲದೆ ಈಗಾಗಲೇ ಒಂದು ಪತ್ರದ ಮೂಲಕ ಮತ್ತು ನನ್ನ ಮನೆಯಲ್ಲಿ ನಡೆದ ಸುದೀರ್ಘ ಚರ್ಚೆಯಲ್ಲಿ ನನ್ನ ಕಡೆಯಿಂದ ಕೊಡಬೇಕಾದ ಅಷ್ಟೂ ವಿವರಣೆಗಳನ್ನು ಅತ್ಯಂತ ಸಂಯಮದಿಂದ ತಮ್ಮ ಮುಂದೆ ಇಟ್ಟಿದ್ದೇನ ಆ ಬಗ್ಗೆ ಬಹಿರಂಗವಾಗಿ ವಿವರಿಸುವುದಾದರೆ - ಏನ್ ಎಂ ಕುಮಾರ್ ಅವರನ್ನು ನಾನು ಹಲವು ಬಾರಿ ಮುಖತಃ ಭೇಟಿಯಾಗಿದ್ದೇನೆ ಒಂದು ಅನುಕಂಪದ ಆಧಾರದಲ್ಲಿ ಅವರಿಗೆ ಸಹಾಯ ಮಾಡಲು ವುಯತ್ನಿಸಿದನ ನಾನಷ್ಟೇ ಪ್ರಯತ್ನ ಪಟ್ಟರೂ ಅವರ ಹಲವಾರು ಕಾರಣಗಳಿಂದ ಸಾಧ್ಯವಾಗಲಿಲ್ಲ. ಅವರು ನನ್ನ ವಿರುದ್ಧ ವದಂತಿಗಳನ್ನು ಹಬ್ಬಿಸಲು ಶುರುಮಾಡಿದಾಗ ಕುಮಾರ್ ಅವರನ್ನು ಮುಖತಃ ಭೇಟಿಯಾಗುವುದನ್ನು ನಿಲ್ಲಿಸಿದ ಇದೆಲ್ಲವನ್ನೂ ತಮಗೆ ವಿವರಿಸಿದೆ. ಅದಾದ ನಂತರವೂ, ಮಂಡಳಿಯ ಕಚೇರಿಯಲ್ಲಿ, ನನ್ನ ವಿರುದ್ಧ ಸುಳ್ಳು ನಿರಾಧಾರ ಆರೋಪಗಳ ಪತ್ರಿಕಾ ಗೋಷ್ಠಿ ನಡೆಯಿತು. ಆ ಅಭಿವ್ಯಕ್ತಿ ಸ್ವಾತಂತ್ರುವನ್ನೂ ನಾನು ಗೌರವಿಸುತ್ತೇನೆ ಜೊತೆಗೆ ಸಂಧಾನ ಎಂಬ ಮಹತ್ತರ ಬೆಳವಣಿಗೆಯ ವದವೊಂದು ಹುಟ್ಟಿ ಕೊಂಡಿತು. ಸಂಧಾನವೆಂದರೇನು? ಆ ನಿರ್ಮಾಪಕರು, ಅವರಲ್ಲಾ ಕಷ್ಟಗಳಿಗೆ ನನ್ನನ್ನೇ ಹೊಣೆಗಾರನನ್ನಾಗಿಸಿ, ಬಲವಂತವಾಗಿ ಹಣ ಪಡೆಯುವುದು, ನಾನು ಈ ಸುದೀರ್ಘ ವರ್ಷಗಳ ಕಾಲ ಕಾವಾಡಿಕೊಂಡು ಬಂದ ನೈತಿಕತೆ ಹೊಣೆಗಾರಿಕೆ ವ್ಯಕ್ತಿತ್ವದ ಕಾರಣಕ್ಕೆ ಹಣ ಕೊಡಬೇಕಾಗಿಲ್ಲವೆಂಬ ನನ್ನ ನಿಲುವಿಗೆ ನಾನು ಬದ್ಧವಾಗುವುದು.

ಇದನ್ನು ಒಂದು ಉದಾಹರಣೆಯಾಗಿ ತಮಗೆ ಅರ್ಥ ಮಾಡಿಸುವುದಾದರೆ ಒಂದು ದಾಂಪತ್ಯದಲ್ಲಿ ಬಿರುಕು ಬಂದರೆ ಆ ಕುಟುಂಬದ ಸ್ನೇಹಿತರು ಯಾರ ಪರವಾಗಿ ನಿಲ್ಲಬೇಕೆಂದು ಸಂಕಟ ಪಡುತ್ತಾರೆ ಆ ಸಂಧಿಗ್ಧತೆಯಲ್ಲಿ ಒಬ್ಬರ ಪರ ನಿಲ್ಲುವುದು ಸಮಂಜಸವೂ ಆಗಿರುವುದಿಲ್ಲ. ಅಂತಹದೇ ಒಂದು ಒತ್ತಡ, ಸಂದಿಗ್ಧತೆ ಈಗ ನಮ್ಮ ಮಾತ್ರ ಸಂಸ್ಥೆಗಳನ್ನು ಆ ಒತ್ತಡ, ಸಂಕವ್ಯಕ್ತಿ ನೀವುಗಳು ಸಿಲುಕಬಾರದಂದು ನಾನು ನ್ಯಾಯಾಲಯದ ಮೊರ ಹೋಗಿದ್ದು.

೨೭ ವರ್ಷಗಳ ಕಾಲ ನಾನು ಎಂದಾದರೂ ಒಂದೇ ಒಂದು ಕಪ್ಪು ಚುಕ್ಕೆ ಬೀಳುವಂತೆ ನಡೆದುಕೊಂಡಿಲ್ಲ. ೮೦ ವರ್ಷಗಳ ಕಾಲ ಚಿತ್ರರಂಗದ ರಥ ಎಳೆದು ಬಂದಿರುವುದು, ಈ ನಂಬಿಕೆ ಎಂಬ ಹಗ್ಗದ ಮೇಲೆಯೇ ಆ ನಂಬಿಕೆಯ ಹಗ್ಗದ ಮೇಲೆಯೇ ನಾನು ವಿಶೇಷ ಪಾತ್ರಗಳನ್ನು ಹೊರತು ಪಡಿಸಿ ೪೫ ಸಿನೆಮಾಗಳಲ್ಲಿ ದಾಖಲೆಯಾಗಿ ಉಳಿದಿದ್ದೇನೆ. ನನಗೂ ಬಹುಪಾಲು ನಿರ್ಮಾಪಕರಿಂದ ಹಣ ಬರಬೇಕಿದೆ. ಎಂದಾದರೂ ಮಂಡಳಿಯ ಕದ ತಟ್ಟಿದ್ದೇನೆಯೇ? ಈ ವರೆಗೂ ಈ ನಿಮ್ಮ ಪ್ರೀತಿಯ ಸುದೀಪ ಒಳ್ಳೆತನಕ್ಕೆ ಉದಾಹರಣೆ ಆಗಿದ್ದಾನೆ ಹೊರತು ಕೆಟ್ಟ ತನಕಲ್ಲ.

ಯಾಕೆ ನಿಮ್ಮ ಬಳಿ ಆಗ ಬರಲಿಲ್ಲವೆಂದರ, ಚಿತ್ರರಂಗದಲ್ಲಿ ಬಹುಪಾಲು ಸಂದರ್ಭಗಳಲ್ಲಿ ಬರಬೇಕಾದ ಹಣ ಬಂದಿಲ್ಲ. ಹಲವಾರು ಕಡೆ ಬಂದಿದೆ. ನಾನವರಿಗೆ ಋಣಿ ಆಗಿದ್ದೇನೆ. ಕೆಲವರು ತಲೆ ಮರೆಸಿಕೊಂಡಿದ್ದಾರೆ ಕಲವರು ವದಂತಿಗಳನ್ನು ಹಬ್ಬಿಸುವುದರಲ್ಲಿ ಕಳೆದು ಹೋದರ ಇಂತಹ ಎಲ್ಲ ಸಂದರ್ಭಗಳು ನಡೆದಿದ್ದು, ಆ ನಂಬಿಕೆ ಇಂದಲೇ ದಾಖಲೆಗಳಿದ್ದಲ್ಲಿ ತಮ್ಮ ಬಳಿ ನಾನೇ ಬರುತ್ತಿದೆ. ಇಂತಹ ಸಂದರ್ಭಗಳಲ್ಲಿ ಸ್ನೇಹ, ಅನುಕಂಪ, ಪ್ರೀತಿಗೆ ತಲೆ ಬಾಗಿದ್ದನ ಹಲವು ಬಾರಿ ನನ್ನ ದಡ್ಡತನದಿಂದ ನಾನೇ ಪಾಠ ಕಲಿತಿದ್ದೇನ.

ಒಂದು ಮಾತು ನಿಮ್ಮ ಪತ್ರಿಕಾ ಘೋಷ್ಟಿಯಲ್ಲಿ ಹೊರಬಂತು. ಅದು ನನಗೆ ತೀವು ನೋವು ಉಂಟು ಮಾಡಿತು. ದುಃಖ ಉಂಟು ಮಾಡಿತು. ಶ್ರೀಯುತ ಸುರೇಶ್ ನನಗೂ ಪರಿಚಿತರು ಎದುರಾದಾಗ ಕುಶಲ ಕ್ಷೇಮ ಮಾತನಾಡುವಷ್ಟು ಸಲಿಗೆ ಉಳ್ಳವರು ನಿರ್ಮಾಪಕರೂ ಆದ ಅವರು, ಓರ್ವ ನಿರ್ಮಾಪಕರ ಪರ ನಿಲ್ಲಬೇಕೆಂಬ ಸೀಮಿತವಾದ ಕಾರಣಕ್ಕೆ, ಕುಮಾರ್ ಅವರು ಮೂರ್ ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಹಾಗೇನಾದರೂ ಅವರಿಗೆ ಪ್ರಾಣಾಪಾಯವಾದರೆ, ಸುದೀಪ್ ಹೊಣೆ ಅಂದರು ನನಗಲ್ಲ, ಇಡೀ ಸಮಾಜಕ್ಕೆ ಕೊಟ್ಟ ಅಪಾಯಕಾರಿ ಸಂದೇಶ ಯಾವಾಗಿನಿಂದ ಕನ್ನಡ ಚಿತ್ರರಂಗದಲ್ಲಿ ಈ ಕೆಟ್ನ ಬೆಳವಣಿಗೆ.

ಕ್ಯಾನ್ಸರ್‌ನಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾದ ಕಿಚ್ಚ ಸುದೀಪ್‌

ರಂಗದವರೋ ಅಲ್ಲವೋ, ಸಹಕಲಾವಿದರೋ, ತಂತ್ರಜ್ಞರೋ ಯಾರೇ ಬಂದು ಸಹಾಯ ಕೇಳಿದಾಗಲೂ ದೇವರು ಕೊಟ್ಟಿರುವ ಶಕ್ತಿಯಲ್ಲಿ ನನ್ನ ಕೈಲಾದಷ್ಟೂ ಸಹಾಯ ಮಾಡಿದ್ದೇನೆ. ಯಾರದ್ದೋ ಆಗಲಿ ಜೀವನ-ಜೀವ ಉಳಿಸಲು ಪ್ರಯತ್ನಿಸಿದ್ದೇನೇ ಹೊರತು ಯಾರ ಜೀವ ಹೋಗಲೂ ನಾನು ಬದುಕಿನುದ್ದಕ್ಕೂ ಸಾಕ್ಷಿಯಾಗಲಾರೆ.

ಎಲ್ಲ ನಿರ್ಮಾಪಕರ ಬಗ್ಗೆ ಗೌರವವಿಲ್ಲದೆ, ನಂಬಿಕೆ ಇಲ್ಲದೆ, ಇಷ್ಟರ ವರೆಗೆ ನಾನು ಚಿತ್ರರಂಗದಲ್ಲಿ ನೆಲೆನಿಂತೇನೆ? ನನ್ನ ಮನೆಯಲ್ಲೂ ವೃದ್ಧ ಪೋಷಕರಿದ್ದಾರೆ. ನಂಗೂ ಕಣ್ಣೀರಿದೆ, ದುಃಖ ದುಮ್ಮಾನಗಳಿವೆ. ನಮ್ಮಲಿ ಯಾರಿಗೇ ತೊಂದರೆಯಾದರೂ, ಮಂಡಳಿಯೇ ಅಥವಾ ಯಾವುದೇ ನಿರ್ದಿಷ್ಟ ವ್ಯಕ್ತಿ ಹೋಣೆಗಾರ ಎನ್ನಲಾದೀತೆ? ಎಂದಾದರೂ ಹಾಗೆ ನಡೆದುಕೊಂಡಿದ್ದೇನೆಯೇ?

ಇನ್ನು, ರಾಜರಾಜೇಶ್ವರಿ ನಗರದ ಮನೆಯ ವಿಷಯದಲ್ಲಿ ಒಂದು ಸ್ಪಷ್ಟನೆ ತಮಗೆ ವಯಕ್ತಿಕವಾಗಿ ನೀಡುತ್ತೇನೆ. ನಾನು ತುಂಬಾ ಆಸ್ತಿವಂತ ಅಲ್ಲದ ಇರಬಹುದು. ಆದರೆ ಸಂಪಾದಿಸಿದ ಆಸ್ತಿಯಲ್ಲಿ ನನ್ನ ಬೆವರಿದ, ಶ್ರಮವಿದೆ, 95% ಅಷ್ಟು ಬ್ಯಾಂಕ್ ಲೋನ್ ಪಡೆದು ಆ ಮನೆ ಖರೀದಿಸಿದ್ದೇನೆ. ಈ ಎಲ್ಲ ವಿವರಗಳನ್ನು ನ್ಯಾಯಾಲಯಕ್ಕೆ ನೀಡಬಲ್ಲೆ ಎಂಬ ನೈತಿಕ ಶಕ್ತಿಯ ಮೇರೆಗೆ, ಈ ಕಠಿಣ ನಿಲುವು ಹೊಂದಿದ್ದೇನೆ.

ಸುದೀಪ್ - MN ಕುಮಾರ್​ ವಿವಾದ: ಕುಮಾರ್ ಭುಜದ ಮೇಲೆ ಗನ್ ಇಟ್ಟು ಹೊಡಿತ್ತಿದ್ದಾರೆ- ಜಾಕ್ ಮಂಜು ಕಿಡಿ

ದಯಮಾಡಿ ತಾವು ಸಂದಿಗ್ಧತೆಗೆ ಒಳಗಾಗದೆ, ನನ್ನ ಮೇಲೂ ಬಲವಂತದ ಒತ್ತಡ ಹಾಕದೆ, ನ್ಯಾಯಾಲಯದಲ್ಲೇ ಇದನ್ನು ಬಗೆಹರಿಸಿಕೊಳ್ಳಲು ಬಿಡಿ. ನಾನೇನಾದರೂ ತಪ್ಪು ಮಾಡಿದರೆ ನ್ಯಾಯಾಲಯದಲ್ಲೇ ಶಿರಬಾಗಿ ಒಪ್ಪಿಕೊಂಡು ದಂಡ ಕಟ್ಟುತ್ತೇನೆ. ನಾನು ಸರಿ ಇದ್ದೇನೆ. ನ್ಯಾಯ ಮತ್ತು ಸತ್ಯ ನನ್ನೊಂದಿಗಿದೆ ಎಂದು ಸಾಬೀತು ಮಾಡಿಕೊಳ್ಳಲು ನಂಗೊಂದಿಷ್ಟು ಅವಕಾಶ ಕೊಡಿ ಎಂದು ಪ್ರೀತಿಯಿಂದ ಕೇಳಿಕೊಳ್ಳುತ್ತಾ.

ಎಂದಂದಿಗೂ ನಿಮ್ಮವ, 

Follow Us:
Download App:
  • android
  • ios