ಯಾರ ಕನಸ ಕನ್ಯೆಯೋ ಹಾಡಿಗೆ ಸುಧಾರಾಣಿ ವಿಭಿನ್ನ ರೀತಿಯ ಸೀರೆಯಲ್ಲಿ ಮಿಂಚುತ್ತಿದ್ದರೆ, ಅಭಿಮಾನಿಗಳಿಗೆ ತುಳಸಿ ಗರ್ಭಿಣಿಯಾಗಿದ್ದೇ ಚಿಂತೆ. ಅವ್ರು ಹೇಳ್ತಿರೋದೇನು?  

ವಯಸ್ಸು 51 ಆದರೂ ನಟಿ ಸುಧಾರಾಣಿ ಇನ್ನೂ 21ರ ಯುವತಿಯೇ. ಅದೇ ಚೆಲುವು, ಅದೇ ಮೈಮಾಟವನ್ನು ಮೆಂಟೇನ್​ ಮಾಡಿದ್ದಾರೆ ನಟಿ. ಅವರಿನ್ನೂ ಸಿಂಪಲ್​ ಬ್ಯೂಟಿ. ವಯಸ್ಸು ಎನ್ನುವುದು ಒಂದು ಸಂಖ್ಯೆಯಷ್ಟೇ ಎನ್ನುವುದು ಸುಧಾರಾಣಿ ಅವರಿಗೆ ನೋಡಿದರೆ ತಿಳಿಯುತ್ತದೆ. ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗ್ತಿರೋ ಶ್ರೀರಸ್ತು-ಶುಭಮಸ್ತುವಿನಲ್ಲಿ ಎಲ್ಲರ ಬಾಯಲ್ಲೂ ತುಳಸಿಯಮ್ಮಾನೇ ಆಗಿದ್ದಾರೆ. ರಿಯಲ್​ ಲೈಫ್​ನಲ್ಲಿ ಓರ್ವ ಮಗಳಿದ್ದರೆ, ಸೀರಿಯಲ್​ನಲ್ಲಿ ಮದುವೆಯಾದ ಮಕ್ಕಳ ಅಮ್ಮ. ಇನ್ನೇನು ಅಜ್ಜಿಯಾಗುವ ಕಾಲ. ತಮ್ಮ ಅದ್ಭುತ ನಟನೆಯಿಂದ ಮನಸೂರೆಗೊಳ್ಳುತ್ತಿದ್ದಾರೆ ನಟಿ ಸುಧಾರಾಣಿ. ಶೂಟಿಂಗ್​ನಿಂದ ಬಿಡುವು ಸಿಕ್ಕಾಗ ಇತ್ತೀಚೆಗೆ ಸೋಷಿಯಲ್​ ಮೀಡಿಯಾಗಳಲ್ಲಿಯೂ ಆ್ಯಕ್ಟೀವ್​ ಆಗಿರುತ್ತಾರೆ ನಟಿ. ಇದಾಗಲೇ ಕೆಲವು ವಿಡಿಯೋಗಳನ್ನು ಅವರು ಶೇರ್​ ಮಾಡಿಕೊಂಡಿದ್ದು, ಇವುಗಳಿಗೆ ಸಕತ್​ ರೆಸ್ಪಾನ್ಸ್​ ಸಿಗುತ್ತಿದೆ.

Add Asianetnews Kannada as a Preferred SourcegooglePreferred


ಇದೀಗ ಅವರು, ರಾಜಾ ನನ್ನ ರಾಜಾ ಚಿತ್ರದ ಯಾರ ಕನಸ ಕನ್ಯೆಯೋ, ಶೃಂಗಾರ ಕಾವ್ಯವೋ... ಈ ಹೊಳೆವ ಕಣ್ಣ ನೋಟ, ಮುಂಗುರುಳ ತೂಗುವಾಟ, ಈ ಚೆಲುವ ಮೈಯ ಮಾಟ, ಬಂಗಾರದ ಸಿಂಗಾರಿ ಕಂಡು ಮೂಕನಾದೆನು... ಹಾಡಿಗೆ ವಿಭಿನ್ನ ರೀತಿಯ ಸೀರೆಯುಟ್ಟು ಪೋಸ್​ ಕೊಟ್ಟಿದ್ದಾರೆ. ಇವರ ಸೌಂದರ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದು, ಥರಹೇವಾರಿ ಕಮೆಂಟ್​ಗಳ ಸುರಿಮಳೆಯಾಗುತ್ತಿದೆ. ನೀವು ನಮ್ಮ ಎವರ್​ಗ್ರೀನ್​ ತಾರೆ ಎನ್ನುತ್ತಿದ್ದಾರೆ ಅಭಿಮಾನಿಗಳು. ಆದರೆ ಇವೆಲ್ಲವುಗಳ ಹೊರತಾಗಿಯೂ ಯಾಕೋ ಶ್ರೀರಸ್ತು ಶುಭಮಸ್ತುವಿನ ತುಳಸಿ ಗರ್ಭಿಣಿಯಾಗುವುದನ್ನು ಸುಧಾರಾಣಿ ಅಭಿಮಾನಿಗಳು ಸಹಿಸುತ್ತಿಲ್ಲ. ಇದು ಸೀರಿಯಲ್​ ಎಂದು ಗೊತ್ತಿದ್ದರೂ, ಯಾಕೋ ಅವರಿಗೆ ಸುಧಾರಾಣಿ ಇದನ್ನು ಒಪ್ಪಿಕೊಳ್ಳಬಾರದಿತ್ತು ಎಂದೇ ಎನ್ನಿಸುತ್ತಿದೆ. ಇದೀಗ ಈ ವಿಡಿಯೋದಲ್ಲಿಯೂ ಕೂಡ ಅದೇ ವಿಷಯವನ್ನು ನೆಟ್ಟಿಗರು ಕೆದಕಿದ್ದಾರೆ. ಪ್ಲೀಸ್​ ಮಗುವನ್ನು ಅಬಾರ್ಟ್​ ಮಾಡಿಸಿಕೊಳ್ಳಿ, ನೀವು ಗರ್ಭಿಣಿಯಾಗಿದ್ದು ನಮಗೆ ಸರಿ ಕಾಣಿಸ್ತಿಲ್ಲ ಎಂದು ಹೇಳುತ್ತಿದ್ದಾರೆ! ಒಟ್ಟಿನಲ್ಲಿ ರೀಲ್​ ಮತ್ತು ರಿಯಲ್​ ಲೈಫ್​ ಎರಡನ್ನೂ ಅಭಿಮಾನಿಗಳು ಎಷ್ಟೊಂದು ಮನಸ್ಸಿಗೆ ತೆಗೆದುಕೊಳ್ಳುತ್ತಾರೆ ಎನ್ನುವುದು ಇದನ್ನು ನೋಡಿದರೆ ತಿಳಿದು ಬರುತ್ತದೆ. 

ಸುಧಾರಾಣಿ ಅಣ್ಣ ನಾಗರಹಾವು ಸಾಕಿದ್ರಂತೆ! ತೆಂಗಿನಚಿಪ್ಪಲ್ಲಿ ಹಾಲು ಕುಡೀತಿದ್ದ ಅಚ್ಚರಿ ವಿಷ್ಯ ರಿವೀಲ್​

ಇನ್ನು ಸುಧಾರಾಣಿ ಅವರ ಕುರಿತು ಹೇಳುವುದಾದರೆ, ಈಕೆ ಭರತನಾಟ್ಯ ಕಲಾವಿದೆ ಕೂಡ ಹೌದು. ಭರತನಾಟ್ಯ ಮಾತ್ರವಲ್ಲದೇ ಕೂಚುಪುಡಿ ಕಲಾವಿದೆ ಕೂಡ. ಇವರು ಕನ್ನಡ ಚಿತ್ರರಂಗವಲ್ಲದೇ, ಮಲಯಾಳಂ, ತೆಲುಗು ಹಾಗೂ ತಮಿಳಿನಲ್ಲೂ ನಟಿಸಿದ್ದಾರೆ. 'ಕಿಲಾಡಿ ಕಿಟ್ಟು', 'ರಂಗನಾಯಕಿ' ಮುಂತಾದ ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿರುವ ಇವರು ಕೂಚಿಪುಡಿ ಹಾಗೂ ಭರತನಾಟ್ಯ ಕಲಾವಿದೆ. ತಮ್ಮ 13ನೇ ವಯಸ್ಸಿನಲ್ಲೇ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಟಿ ರಾಜ್ ನಿರ್ಮಾಣ ಸಂಸ್ಥೆಯ ಮೂಲಕವಾಗಿ ಶಿವರಾಜಕುಮಾರ್ ನಟನೆಯ 'ಆನಂದ್' ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು. ಮನ ಮೆಚ್ಚಿದ ಹುಡುಗಿ, ಆಸೆಗೊಬ್ಬ ಮೀಸೆಗೊಬ್ಬ, ಸಿರಿಗಂಧ, ಪಂಚಮವೇದ, ಮನೆದೇವ್ರು, ಅರಗಿಣಿ, ಸ್ವಾತಿ, ಅವನೇ ನನ್ನ ಗಂಡ, ಮೈಸೂರು ಮಲ್ಲಿಗೆ, ಮಿಡಿದ ಶೃತಿ, ಮಹಾಕ್ಷತ್ರಿಯ, ಅನುರಾಗ ಸಂಗಮ, ದೇವತಾ ಮನುಷ್ಯ, ಜೀವನ ಚೈತ್ರ, ಮನ ಮೆಚ್ಚಿದ ಹುಡುಗಿ, ಸಮರ, ಅಸೆಗೊಬ್ಬ ಮೀಸೆಗೊಬ್ಬ ಮುಂತಾದ ಹಲವಾರು ಯಶಸ್ವಿ ಚಿತ್ರಗಳಲ್ಲಿ ಸುಧಾರಾಣಿ ನಟಿಸಿದ್ದಾರೆ.

ಸುಧಾರಾಣಿ ಮತ್ತು ಗೋವರ್ಧನ್ ವಿವಾಹ 2000 ನೇ ಇಸವಿಯಲ್ಲಿ ನಡೆಯಿತು. 2001ರಲ್ಲಿ ಜನಿಸಿದ ಪುತ್ರಿ ನಿಧಿ ಜನಿಸಿದ್ದು, ಕಳೆದ ವರ್ಷವಷ್ಟೇ ಅವರ ಭರತನಾಟ್ಯ ರಂಗಪ್ರವೇಶ ಆಗಿದೆ. ಸುಧಾರಾಣಿಯವರು ತಮ್ಮ ಮುದ್ದಿನ ಮಗಳನ್ನು ಪ್ರೀತಿಯಿಂದ ಸುಬ್ಬಿ ಕುಟ್ಟಿ ಎನ್ನುತ್ತಾರೆ. ಸಂಗೀತ, ನೃತ್ಯದಲ್ಲಿ ಪ್ರವೀಣೇಯಾಗಿದ್ದಾರೆ. ಇದೀಗ ಶ್ರೀರಸ್ತು ಶುಭಮಸ್ತು ಸೀರಿಯಲ್​ನಲ್ಲಿ ಸುಧಾರಾಣಿಯವರು ಮಗ ಅಭಿಗಾಗಿ ಡ್ರೈವಿಂಗ್​, ನೃತ್ಯ, ಇಂಗ್ಲಿಷ್​ ಎಲ್ಲಾ ಕಲಿತು ಸೀರಿಯಲ್​ ಪ್ರೇಮಿಗಳ ಮನಸ್ಸನ್ನು ಕದಿಯುತ್ತಿದ್ದಾರೆ. ಇವೆಲ್ಲಕ್ಕೂ ಭೇಷ್​ ಎಂದಿದ್ದ ಅಭಿಮಾನಿಗಳಿಗೆ ಗರ್ಭಿಣಿಯಾಗಿದ್ದು ಮಾತ್ರ ಸಹಿಸಿಕೊಳ್ಳಲು ಆಗ್ತಿಲ್ಲ. 

ಪಾರ್ವತಮ್ಮನವ್ರು ಹಾಗೆ ಯಾಕೆ ಮಾಡಿದ್ರಂತ ಕೊನೆಗೂ ಗೊತ್ತಾಗ್ಲೇ ಇಲ್ಲ! ಸುಧಾರಾಣಿ ಹೇಳಿದ್ದೇನು?

View post on Instagram