ಕನ್ನಡ ಚಿತ್ರರಂಗದ ಕಾರ್ಮಿಕರಿಗೆ, ಸಿನಿಮಾ ಪತ್ರಕರ್ತರಿಗೆ ಹಾಗೂ ಸಿನಿಮಾ ಪ್ರಚಾರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ನಟಿ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಮಗದ ಅಧ್ಯಕ್ಷೆ ತಾರಾ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಬಿಗ್‌ಬಾಸ್‌ ಮನೆ, ಕಂಠೀರವ ಸ್ಟುಡಿಯೋನ ಕೋವಿಡ್‌ ಸೆಂಟರ್ ಮಾಡಿ: ಭಾ.ಮಾ ಹರೀಶ್ 

ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ತಾರಾ ಅವರು ಈ ಕುರಿತು ಮನವಿ ಸಲ್ಲಿದ್ದಾರೆ. ಕೊರೋನಾ ಕಾರಣಕ್ಕೆ ಸೆಮಿ ಲಾಕ್‌ಡೌನ್ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಂತೆ ಚಿತ್ರರಂಗದ ಕಾರ್ಮಿಕರು, ಸಿನಿಮಾ ಪತ್ರಕರ್ತರು, ಪ್ರಚಾರಕರ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮನವಿಪತ್ರ ಸಲ್ಲಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಎನ್ ಎಂ ಸುರೇಶ್ ಹಾಗೂ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು ಅವರು ಹಾಜರಿದ್ದರು. ತಾರಾ ಅವರಿಂದ ಮನವಿ ಸ್ವೀಕರಿಸಿರುವ ಮುಖ್ಯಮಂತ್ರಿಗಳು ಈ ಕುರಿತು ಪರಿಶೀಲನೆ ಮಾಡಿ ಸೂಕ್ತ ರೀತಿಯಲ್ಲಿ ಸ್ಪಂಧಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.