ಬಾಲಿವುಡ್ ಪರ ನಿಲ್ಲುವ ಸಮಯ ಬಂದಿದೆ ಎಂದು ನಟ ಕಿಶೋರ್ ಹೇಳಿದ್ದಾರೆ.
2022 ಬಾಲಿವುಡ್ ಬಾಲಿವುಗೆ ತುಂಬಾ ನಿರಾಸೆಯ ವರ್ಷವಾಗಿದೆ. ಕಳೆದ ವರ್ಷ ರಿಲೀಸ್ ಆದ ಹಿಂದಿ ಸಿನಿಮಾಗಳು ಹೆಚ್ಚು ಸಕ್ಸಸ್ ಕಂಡಿಲ್ಲ. ಕೆಲವು ಬೆರಳೆಣಿಕೆಯ ಸಿನಿಮಾಗಳು ಬಿಟ್ಟರೆ ಬೇರೆ ಯಾವುದೇ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಿಲ್ಲ. 2023 ಕೂಡ ಹಾಗೆ ಆಗುತ್ತಾ ಎಂದು ಆತಂಕದಲ್ಲಿದೆ ಬಾಲಿವುಡ್. ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸದಾ ಬೈಕಾಟ್ ಟ್ರೆಂಡ್ ವೈರಲ್ ಆಗುತ್ತಿರುತ್ತದೆ. ಇತ್ತೀಚಿಗಷ್ಟೆ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದ ವಿವಾದ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಬೇಷರಂ ರಂಗ್ ಹಾಡು ರಿಲೀಸ್ ಆದ ಬೆನ್ನಲ್ಲೇ ಬಾಲಿವುಡ್ ಬಹಿಷ್ಕರಿಸುವಂತೆ, ಸಿನಿಮಾ ಬಹಿಷ್ಕರಿಸುವಂತೆ ಒತ್ತಾಯ ಕೇಳಿಬರುತ್ತಿದೆ. ಈ ನಡುವೆ ಬಾಲಿವುಡ್ ಸ್ಟಾರ್ ಸುನಿಲ್ ಶೆಟ್ಟಿ ಯುಪಿ ಸಿಎಂ ಬಳಿ ಮಾತನಾಡಿ #BoycottBollywood ಪದ ತೆಗೆದುಹಾಕುವಂತೆ ಮನವಿ ಮಾಡಿದರು.
ಸುನಿಲ್ ಶೆಟ್ಟಿ ಹೇಳಿಕೆಯನ್ನು ಶೇರ್ ಮಾಡಿರುವ ನಟ ಕಿಶೋರ್ ಬಾಲಿವುಡ್ ಪರ ನಿಲ್ಲುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾದ ಪೋಸ್ಟ್ ಮಾಡಿದ್ದಾರೆ. 'ಇಡೀ ದೇಶದ ಚಿತ್ರರಂಗ ಒಕ್ಕೊರಲಿನಿಂದ ಬಾಲಿವುಡ್ ನ ವಿರುದ್ಧ ನಡೆಯುತ್ತಿರುವ ಬಾಯ್ಕಾಟ್ ಟ್ರೆಂಡನ್ನು, ಮತಾಂಧ ಗೂಂಡಾಗಿರಿಯನ್ನು, ದ್ವೇಷದ ರಾಜಕೀಯವನ್ನು ಖಂಡಿಸಿ ಬಾಲಿವುಡ್ ನ ಪರವಾಗಿ ನಿಲ್ಲುವ ಕಾಲ ಬಂದಿದೆ' ಎಂದು ಹೇಳಿದ್ದಾರೆ.
ನಿಜವಾದ ಸಮಸ್ಯೆಗಳು ಹಲವಾರಿವೆ, ಮೈಂಡ್‌ಲೆಸ್ ನನ್ನ ಪದವಲ್ಲ; 'KGF'ಬಗ್ಗೆ ಹೇಳಿಕೆಗೆ ನಟ ಕಿಶೋರ್ ಸ್ಪಷ್ಟನೆ
'ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಒಂದು ವ್ಯಾಪಾರ ಅಥವಾ ಉದ್ಯಮದ ಸುರಕ್ಷತೆಯನ್ನು ಖಚಿತಪಡಿಸಲು ಸಾಧ್ಯವಾಗದಿರುವುದು ಸರ್ಕಾರಗಳ ವೈಫಲ್ಯಕ್ಕೆ ಸಾಕ್ಷಿ. ಇಷ್ಟಾದರೂ ಚಿತ್ರರಂಗದವರು ಮಾತನಾಡದೇ ಕೂತಿರುವ ಹೆದರಿಕೆಯ ವಾತಾವರಣ ಸೃಷ್ಟಿಯಾಗಿರುವುದು, ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತ ಸರ್ಕಾರಿ ಅಧಿಕಾರಿಗಳಿಗೆ ನಾಚಿಕೆಗೇಡಿನ ಸಂಗತಿ. ಇದು ಸಮಾಜವನ್ನು ವಿಷಪೂರಿತಗೊಳಿಸುವ ಸ್ಪಷ್ಟ ಕಾನೂನು ಉಲ್ಲಂಘನೆಯಾಗಿದ್ದು, ಇದನ್ನು ತಡೆಯಬೇಕಿದೆ, ಶಿಕ್ಷಿಸಬೇಕಾಗಿದೆ. ದ್ವೇಷದ ಈ ಬೆಂಕಿ ಸ್ಥಳೀಯ ಚಿತ್ರೋದ್ಯಮಗಳಿಗೂ ವ್ಯಾಪಿಸುವ ಮುನ್ನ' ಎಂದು ಹೇಳಿದ್ದಾರೆ.
ಬಾಲಿವುಡ್‌ಲ್ಲಿ ಎಲ್ಲರೂ ಡ್ರಗ್ಸ್ ತಗೊಳಲ್ಲ; ಮೋದಿಗೆ ತಿಳಿಸಿ ಎಂದು ಯೋಗಿ ಆದಿತ್ಯನಾಥ್‌ಗೆ ಸುನಿಲ್ ಶೆಟ್ಟಿ ಮನವಿ
ಸುನಿಲ್ ಶೆಟ್ಟಿ ಮನವಿ
ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜೊತೆಗಿನ ಸಂವಾದದಲ್ಲಿ ಮಾತನಾಡಿದ ನಟ ಸುನಿಲ್ ಶೆಟ್ಟಿ ಬಾಲಿವುಡ್‌ನಲ್ಲಿ 99ರಷ್ಟು ಮಂದಿ ಒಳ್ಳೆಯವವರು, ಎಲ್ಲರೂ ಡ್ರಗ್ಸ್ ತೆಗೆದುಕೊಳ್ಳುವುದಿಲ್ಲ, ಕಠಿಣ ಶ್ರಮದ ಕಡೆ ಗಮನ ಹರಿಸುತ್ತಾರೆ ಹಾಗಾಗಿ ಸದ್ಯ ಟ್ರೆಂಡಿಂಗ್‌ನಲ್ಲಿರುವ #BoycottBollywood ಪದ ತೆಗೆದುಹಾಕುವಂತೆ ಮನವಿ ಮಾಡಿದ್ದರು. ಇದರಿಂದ ಬಾಲಿವುಡ್ ಇಮೇಜ್ ಅನ್ನು ಮತ್ತೆ ಪಡೆಯಲು ಸಾಧ್ಯ ಎಂದು ಹೇಳಿದ್ದಾರೆ. 'ಟ್ರೆಂಡಿಂಗ್‌ನಲ್ಲಿರುವ ಹ್ಯಾಷ್ ಟ್ಯಾಗ್ ಅನ್ನು ತೆಗೆದು ಹಾಕಬೇಕಿದೆ. ನಮ್ಮ ಕಥೆ, ನಮ್ಮ ಸಂಗೀತ ಜಗತ್ತಿಗೆ ಸಂಪರ್ಕ ಹೊಂದಿದೆ. ಹಾಗಾಗಿ ಬಾಲಿವುಡ್‌ಗೆ ಅಂಟಿರುವ ಕಳಂಕ ತೊಡೆದು ಹಾಕಬೇಕಿದೆ. ದಯವಿಟ್ಟು ಈ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಲುಪಿಸಿ' ಎಂದು ನಟ ಸುನಿಲ್ ಶೆಟ್ಟಿ ಯೋಗಿ ಆದಿತ್ಯನಾಥ್ ಅವರಿಗೆ ಹೇಳಿದರು.
