Asianet Suvarna News Asianet Suvarna News

ಸಿಲಿಕಾನ್ ಸಿಟಿಯಲ್ಲಿ '45' ಚಿತ್ರೀಕರಣ; ಅರ್ಜುನ್ ಜನ್ಯ ಚಿತ್ರದಲ್ಲಿ ಉಪೇಂದ್ರ, ಶಿವಣ್ಣಗೆ 'ಮೊಟ್ಟೆ' ಹೀರೋ ಸಾಥ್

ಬನ್ನೇರುಘಟ್ಟದ ಶ್ರೀಚಂಪಕಧಾಮ ಸ್ವಾಮಿ ದೇವಸ್ಥಾನದ ಬಳಿ ಚಿತ್ರದ ಅದ್ದೂರಿ ಸನ್ನಿವೇಶವೊಂದರ ಚಿತ್ರೀಕರಣ ನಡೆದಿದೆ. ಸುಮಾರು ಒಂದು ಸಾವಿರಕ್ಕೂ ಅಧಿಕ ಜನರು ಈ ಸನ್ನಿವೇಶದಲ್ಲಿ ಪಾಲ್ಗೊಂಡಿದ್ದರು. 

Upendra Shiva Rajkumar Raj b shetty starrer movie 45 shooting going on at Bangalore srb
Author
First Published Jan 15, 2024, 2:39 PM IST | Last Updated Jan 15, 2024, 2:44 PM IST

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ ಮಲ್ಟಿಸ್ಟಾರರ್ ಸಿನಿಮಾ '45'. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ "45" ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಅಪಾರ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣ ಅದ್ದೂರಿಯಾಗಿ ಸಾಗಿದೆ.

ಇತ್ತೀಚಿಗೆ ಬನ್ನೇರುಘಟ್ಟದ ಶ್ರೀಚಂಪಕಧಾಮ ಸ್ವಾಮಿ ದೇವಸ್ಥಾನದ ಬಳಿ ಚಿತ್ರದ ಅದ್ದೂರಿ ಸನ್ನಿವೇಶವೊಂದರ ಚಿತ್ರೀಕರಣ ನಡೆದಿದೆ. ಸುಮಾರು ಒಂದು ಸಾವಿರಕ್ಕೂ ಅಧಿಕ ಜನರು ಈ ಸನ್ನಿವೇಶದಲ್ಲಿ ಪಾಲ್ಗೊಂಡಿದ್ದರು. ಮೋಕೋಬೋಲ್ಟ್, ರೋಪ್ ಕ್ಯಾಮೆರಾ ಸೇರಿದಂತೆ ಇನ್ನೂ ಹಲವು ದುಬಾರಿ ಸಲಕರಣೆಗಳ ಬಳಸಿ ಈ ದೃಶ್ಯವನ್ನು ಚಿತ್ರಿಸಲಾಗಿದೆ. ಒಂದು ಸನ್ನಿವೇಶಕ್ಕಾಗಿ 418 ಕ್ಕೂ ಹೆಚ್ಚು ಕಲರ್ ಬಾಂಬ್ ಗಳನ್ನು ಬಳಸಿರುವುದು ಕನ್ನಡದಲ್ಲಿ ಇದೇ ಮೊದಲು. ಈ ಅದ್ದೂರಿ ಸನ್ನಿವೇಶಕ್ಕೆ ಭಾರತ ಚಿತ್ರರಂಗದ ಜನಪ್ರಿಯ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್ ಅವರು ಕೊರಿಯೋಗ್ರಫಿ ಮಾಡಿರುವುದು ವಿಶೇಷ. 

ಹೊಸ ಆಲೋಚನೆ, ವಿಭಿನ್ನ ಕಥೆಯ 'ಕಥಾ `ಸಾರಾಂಶ'ಕ್ಕೆ ಕೌಟ್‌ಡೌನ್; ಮತ್ತೆ ಬರುತ್ತಿದ್ದಾರೆ ಶೃತಿ ಹರಿಹರನ್!

ಸತ್ಯ ಹೆಗಡೆ ಅವರ ಛಾಯಾಗ್ರಹಣ ಈ ಅದ್ದೂರಿ ಸನ್ನಿವೇಶದ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ಸೂರಜ್ ಪ್ರೊಡಕ್ಷನ್ಸ್ ಮೂಲಕ 'ಗಾಳಿಪಟ 2' ಸೇರಿದಂತೆ ಅನೇಕ ಅದ್ದೂರಿ ಹಾಗೂ ಸದಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿರುವ ರಮೇಶ್ ರೆಡ್ಡಿ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಬಿಡುಗಡೆಗೆ ಕನ್ನಡ ಕಲಾರಸಿಕರು ಕಾತುರದಿಂದ ಕಾಯುತ್ತಿದ್ದಾರೆ.‌ 

ನರೇಂದ್ರ ಮೋದಿ ತವರಲ್ಲಿ 'ಜಸ್ಟ್ ಪಾಸ್' ಹಾಡಿನ ಮೋಡಿ; 'ನೋಡಿದ ಕೂಡಲೇ' ಏನಾಯ್ತು ಹೇಳ್ತೀರಾ!?

ಇನ್ನೂ ಸಂಗೀತದಲ್ಲಿ ಜನರ ಮನ ಗೆದ್ದಿರುವ ಅರ್ಜುನ್ ಜನ್ಯ ಅವರು ನಿರ್ದೇಶಕನಾಗಿಯೂ ಜನಪ್ರಿಯತೆ ಪಡೆಯುವುದು ಖಂಡಿತ ಎನ್ನುವುದು ಅಭಿಮಾನಿಗಳ ಮಾತು. ಇದರೊಟ್ಟಿಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರಂತಹ ಅದ್ಭುತ ಕಲಾವಿದರನ್ನು ಒಂದೇ ಚಿತ್ರದಲ್ಲಿ ನೋಡುವುದು ಸಿನಿರಸಿಕರಿಗಂತೂ ಹಬ್ಬವೇ ಸರಿ.

Latest Videos
Follow Us:
Download App:
  • android
  • ios