ಇಂದು ನಾನು ವೈಯಕ್ತಿಕವಾಗಿ ಹೋಗಿ ನನ್ನ ದೂರನ್ನು ಪರಿಶೀಲಿಸಲು ಇನ್ನೂ ಕಾಯುತ್ತಿದ್ದೇನೆ ಎಂದು ಅವರಿಗೆ ನೆನಪಿಸಬೇಕಾಯಿತು. ಈ ವಿಳಂಬವು ಯಾವುದೇ ಬಾಹ್ಯ ಒತ್ತಡ ಅಥವಾ ಪ್ರಭಾವದಿಂದಲ್ಲ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ. ನ್ಯಾಯವು ಯಾರು ಭಾಗಿಯಾಗಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿರಬಾರದು. 

ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಪತ್ನಿ ಪೋಸ್ಟ್ ಮಾಡಿ ಗಮನಸೆಳೆದಿದ್ದಾರೆ. ಕೆಲವು ದಿನಗಳ ಹಿಂದೆ ವಿಜಯಲಕ್ಷ್ಮೀ ದರ್ಶನ್ ಅವರು ತಮಗೆ ಸೋಷಿಯಲ್ ಮೀಡಿಯಾದಲ್ಲಿ ಬಂದ ಕೆಟ್ಟ ಕಾಮೆಂಟ್‌ಗಳ ವಿರುದ್ಧ ಪೊಲೀಸ್ ಕಂಪ್ಲೆಂಟ್ ಕೊಟ್ಟಿದ್ದರು. ಆದರೆ, ಅದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಜಯಲಕ್ಷ್ಮೀ ದರ್ಶನ್ ಅವರು ಇದೀಗ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿ ತಮ್ಮ ಬೇಸರ ಹೊರಹಾಕಿದ್ದಾರೆ.

'ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೇನೆ. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಅನುಭವವು ಆ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ. ನನಗೆ ಆಶ್ಚರ್ಯವೆಂದರೆ, ನಾನು ಸಲ್ಲಿಸಿದ ದೂರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ,

ಆದರೆ ಬೇರೆ ಮಹಿಳೆ ನೀಡಿದ ಮತ್ತೊಂದು ದೂರಿನ ಮೇಲೆ ಒಂದು ದಿನದೊಳಗೆ ಕ್ರಮ ಕೈಗೊಳ್ಳಲಾಗಿದೆ. ಇದು ನಿಜವಾಗಿಯೂ ನನ್ನನ್ನು ಆಶ್ಚರ್ಯಗೊಳಿಸುತ್ತದೆ, ನನ್ನ ವಕೀಲರು ನಿರಂತರವಾಗಿ ಪರಿಶೀಲನೆ ನಡೆಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಇಂದು ನಾನು ವೈಯಕ್ತಿಕವಾಗಿ ಹೋಗಿ ನನ್ನ ದೂರನ್ನು ಪರಿಶೀಲಿಸಲು ಇನ್ನೂ ಕಾಯುತ್ತಿದ್ದೇನೆ ಎಂದು ಅವರಿಗೆ ನೆನಪಿಸಬೇಕಾಯಿತು. ಈ ವಿಳಂಬವು ಯಾವುದೇ ಬಾಹ್ಯ ಒತ್ತಡ ಅಥವಾ ಪ್ರಭಾವದಿಂದಲ್ಲ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ. ನ್ಯಾಯವು ಯಾರು ಭಾಗಿಯಾಗಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿರಬಾರದು. ನಾನು ಇನ್ನೂ ಕಾಯುತ್ತಿದ್ದೇನೆ. ಮತ್ತು ನಾನು ಇದನ್ನು ಸುಮ್ಮನೆ ಬಿಡುವುದಿಲ್ಲ' ಎಂದು ತಮ್ಮ ಪೋಸ್ಟ್‌ ಮೂಲಕ ಅಭಿಪ್ರಾಯವನ್ನು ಜಗತ್ತಿನೊಂದಿಗೆ ಹಂಚಿಕೊಂಡಿದ್ದಾರೆ.

ಯಾಕೆ ಹೀಗೆ?

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯವಾಗಿ ಮೆಸೇಜ್ ಮಾಡಿದವರ ವಿರುದ್ಧ ಯಾಕೆ ಕ್ರಮಕೈಗೊಳ್ಳಲಿಲ್ಲ ಪೊಲೀಸ್ ಇಲಾಖೆ. ವಿಜಯಲಕ್ಷ್ಮಿ ಕೊಟ್ಟ ದೂರನ್ನ ನಿರ್ಲಕ್ಷಿಸಿದ್ರಾ ಪೊಲೀಸರು? ಹೌದು, ಎಂಬರ್ಥದಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪೋಸ್ಟ್ ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ಪೊಲೀಸ್ ಇಲಾಖೆಯ ಮೇಲೆ ತಮ್ಮ ಬೇಸರ ಹೊರಹಾಕಿದ್ದಾರೆ ದರ್ಶನ್ ಪತ್ನಿ ವಿಜಯಲಕ್ಷ್ಮಿ.

 ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಸರ್ಕಾರ, ಗೃಹಸಚಿವ ಜಿ.ಪರಮೇಶ್ವರ್, ಬೆಂಗಳೂರು ಸಿಟಿ ಪೊಲೀಸ್ ರಿಗೆ ಟ್ಯಾಗ್ ಮಾಡಿ ಈ ಪೋಸ್ಟ್ ಮಾಡಿದ್ದಾರೆ.