ಸ್ಯಾಂಡಲ್‌ವುಡ್‌ ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಮೊದಲ ಚಿತ್ರ ಬಿಡುಗಡೆಯಾಗುವ ಮುನ್ನವೇ ಎರಡನೇ ಚಿತ್ರಕ್ಕೆ ಸಹಿ ಮಾಡಿದ್ದಾರೆ. ಮಲಯಾಳಂ ಮತ್ತು ಕನ್ನಡ ಚಿತ್ರರಂಗದಲ್ಲಿ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿರುವ ಮನು ನಾಗ್‌ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲ್ಲಿದ್ದಾರೆ.

ಸ್ಯಾಂಡಲ್‌ವುಡ್‌ನಲ್ಲಿ ಶುರುವಾಯ್ತು 'ತ್ರಿವಿಕ್ರಮ'ನ ಆಟ; ವಿಶೇಷತೆಗಳು ಇಲ್ಲಿವೆ!

ತಂದೆ-ತಾಯಿ ಹಾಗೂ ಮಗನ ಸುತ್ತ ಸುತ್ತುವ ಈ ಚಿತ್ರಕಥೆಯಲ್ಲಿ ನಟ ವಿಕ್ರಮ್ ಮಾಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಷಕರ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ, ಚಿತ್ರೀಕರಣ ಯಾವಾಗ  ಆರಂಭವಾಗಲಿದೆ ಎಂಬ ಮಾಹಿತಿಯನ್ನು ನಿರ್ದೇಶಕರು ಶೀಘ್ರದಲ್ಲಿ ಬಿಡುಗಡೆ ಮಾಡಲಿದ್ದಾರೆ. 

ವಿಕ್ರಮ್ ಮಾಸ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರಣ ಪಾತ್ರಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಬಾಡಿ ವರ್ಕೌಟ್‌ ಮೇಲೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ವಿಕ್ರಮ್‌ಗೆ ನಟಿಯಾಗಿ ಯಾರು ಅಭಿನಯಿಸಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.