Asianet Suvarna News Asianet Suvarna News

'ಉತ್ತರಕಾಂಡ' ಸೇರಿಕೊಂಡ ಚೈತ್ರ ಆಚಾರ್, ದಿಗಂತ್ & ಯೋಗರಾಜ್ ಭಟ್; ರಮ್ಯಾ ಜಾಗಕ್ಕೆ ಈ ಲಚ್ಚಿ?

ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಉತ್ತರಾಕಾಂಡದಲ್ಲಿ ನಟಿಸಲಿದ್ದಾರೆ‌. 'ಪಾಟೀಲ' ಎಂಬ  ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,‌ ಇದೀಗ ವಿಭಿನ್ನವಾಗಿ ಆಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ‌. 'ಉತ್ತರಕಾಂಡ' ಒಂದು ಆಕ್ಷನ್ ಡ್ರಾಮಾ..

Yogaraj Bhat Chitra Achar and Diganth acts in Dhananjaya lead Uttarakaanda movie srb
Author
First Published Apr 20, 2024, 4:35 PM IST

ಖ್ಯಾತ ನಿರ್ದೇಶಕ ಯೋಗರಾಜ್ ಭಟ್  (Yogaraj Baht) 'ಉತ್ತರಾಕಾಂಡ'ದಲ್ಲಿ ನಟಿಸಲಿದ್ದಾರೆ‌. 'ಪಾಟೀಲ' ಎಂಬ  ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,‌ ಇದೀಗ ವಿಭಿನ್ನವಾಗಿ ಆಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ‌. 'ಉತ್ತರಕಾಂಡ (Uttarakaana)' ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ರೋಹಿತ್ ಪದಕಿ ನಿರ್ದೇಶಕರು.  ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಈ ಚಿತ್ರದಲ್ಲಿ ನಟ ದಿಗಂತ್ ಹಾಗು ರಂಗಾಯಣ ರಘು ಕೂಡ ನಟಿಸಲಿದ್ದಾರೆ. ನಟ ದಿಗಂತ್ ಮಲ್ಲಿಗೆ ಎಂಬ ಪಾತ್ರದಲ್ಲಿ ಕಾಣಿಸಿಕೊಂಡರೆ, ನಟ ರಂಗಾಯಣ ರಘು 'ಬಂಡೆ ಖಾರಾ' ಪಾತ್ರದಲ್ಲಿ ನಟಿಸಲಿದ್ದಾರೆ. ಏಪ್ರಿಲ್ 15ರಿಂದ ಉತ್ತರಕಾಂಡ ಶೂಟಿಂಗ್ ಶುರುವಾಗಿದ್ದು, ಸದ್ಯ ನಟಿ ಚೈತ್ರಾ ಆಚಾರ್ (Chaitra Achar) ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. 

ಬಹುನಿರೀಕ್ಷಿತ ಕನ್ನಡ ಚಿತ್ರ 'ಉತ್ತರಕಾಂಡ  ಚಿತ್ರೀಕರಣ ಏಪ್ರಿಲ್ 15ರಿಂದ ಪ್ರಾರಂಭವಾಗಿದೆ. 15 ದಿನಗಳ ಪ್ರಥಮ ಶೆಟ್ಯೂಲ್ ವಿಜಯಪುರದಲ್ಲಿ ಚಿತ್ರೀಕರಣಗೊಳ್ಳಲಿದೆ. 'ಉತ್ತರಕಾಂಡ' ದ ಮುಹೂರ್ತ 2022ರಲ್ಲಿ‌ ಆಗಿದ್ದು, ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ,‌ ಹಾಗೂ ಚಿತ್ರವು ಉತ್ತರಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲಾನಿಂಗ್ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೇ,‌ ಇದೀಗ ಸರ್ವ ಸಿದ್ಧತೆಗಳೊಂದಿಗೆ ಇತ್ತೀಚೆಗಷ್ಟೇ ಚಿತ್ರೀಕರಣ ಆರಂಭಗೊಂಡಿದೆ. 

ಚಿತ್ರದ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, 'ಚಿತ್ರವನ್ನು ಈಗ ಪ್ರಾರಂಭಿಸಿರುವುದರಿಂದ ನಾನು ಖುಷಿಯಾಗಿದ್ದೇನೆ. ಈ ಚಿತ್ರಕ್ಕೆ ನಿಖರವಾದ ಪ್ಲಾನಿಂಗ್, ತಯಾರಿ ಮತ್ತು ಸಂಶೋಧನೆ ಅಗತ್ಯವಿತ್ತು. ನಾನು ಮತ್ತು ನಿರ್ಮಾಪಕರು ನಿದ್ದೆಗೆಟ್ಟು ಇದನ್ನು ಕಾರ್ಯರೂಪಕ್ಕೆ ತರವುದರಲ್ಲಿ ಶ್ರಮಿಸಿದ್ದೇವೆ. ಶಿವಣ್ಣ ಮತ್ತು ಧನಂಜಯ್ ಪಾತ್ರ ವಹಿಸಿರುವ  ಬಹು ದೊಡ್ಡ ತಾರಾಗಣದ ಚಿತ್ರಕಥೆಯನ್ನು ಸಿನಿ ಪ್ರೇಕ್ಷಕರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ಈ‌ ಕುರಿತು ಕುಂದು ಕೊರತೆ ಬರದಂತೆ ನಾನು ಮತ್ತು ಕೆ.ಆರ್.ಜಿ ಕೆಲಸ ಮಾಡಲಿದ್ದೇವೆ' ಎಂದರು.

ಚಿತ್ರದ ನಿರ್ಮಾಪಕ, ಕಾರ್ತಿಕ್ ಗೌಡ ಮಾತನಾಡಿ, 'ಉತ್ತರಕಾಂಡ ಚಿತ್ರವು ಕೆ.ಆರ್.ಜಿ.ಯ ಹೆಮ್ಮೆ ಎಂದರೆ ಉತ್ಪ್ರೇಕ್ಷೆಯಲ್ಲ. ಕೇವಲ ನಾವಷ್ಟೇ ಅಲ್ಲದೆ ಇಡೀ ಕನ್ನಡ ಚಿತ್ರರಂಗವೇ ಹೆಮ್ಮೆ ಪಡುವಂತೆ ಉತ್ತರಕಾಂಡ ಮುಂಬರಲಿದೆ' ಎಂದು ಭರವಸೆ ನೀಡಿದರು. 'ಉತ್ತರಕಾಂಡ' ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shiva Rajkumar) ಮತ್ತು ಡಾಲಿ ಧನಂಜಯ್ (Dolly Dhananjay) ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ರೋಹಿತ್ ಪದಕಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದು, ಚಿತ್ರವನ್ನು  ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ನಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ನಿರ್ಮಿಸಲಿದ್ದಾರೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಚಿತ್ರಕ್ಕೆ ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಲಿದ್ದಾರೆ. ಬಹು ದೊಡ್ಡ ತಾರಾಬಳಗವನ್ನು ಹೊಂದಿರುವ ಈ ಚಿತ್ರದ ತಾರಾಬಳಗವನ್ನು ಒಬ್ಬೊಬ್ಬರಾಗಿ ಸೇರಿಕೊಳ್ಳುತ್ತಿದ್ದಾರೆ. 

Follow Us:
Download App:
  • android
  • ios