ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಮ್ಮಿಕೊಂಡಿರುವ ಹಾಗೂ ವಿಶ್ವವೇ ಎದುರು ನೋಡುತ್ತಿರುವ ಮಹತ್ವಾಕಾಂಕ್ಷಿ ಚಂದ್ರಯಾನ ಇಂದು ಸಾಕಾರಗೊಳ್ಳಲಿದೆ.

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಮ್ಮಿಕೊಂಡಿರುವ ಹಾಗೂ ವಿಶ್ವವೇ ಎದುರು ನೋಡುತ್ತಿರುವ ಮಹತ್ವಾಕಾಂಕ್ಷಿ ಚಂದ್ರಯಾನ ಇಂದು ಸಾಕಾರಗೊಳ್ಳಲಿದೆ. ಚಂದ್ರಯಾನ-3 ವ್ಯೋಮನೌಕೆಯನ್ನು ಹೊತ್ತ ಎಲ್‌ವಿಎಂ-3 ರಾಕೆಟ್‌, ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿಂದ ಇಂದು ಮಧ್ಯಾಹ್ನ 2.35ಕ್ಕೆ ನಭಕ್ಕೆ ನೆಗೆಯಲಿದೆ. ಇದು ಭಾರತದ 3ನೇ ಚಂದ್ರಯಾನವಾಗಿದೆ. ಇದಕ್ಕೆ ಸಂಬಂಧಿಸಿದ 25.30 ಗಂಟೆಗಳ ಕೌಂಟ್‌ಡೌನ್‌ ಗುರುವಾರ ಮಧ್ಯಾಹ್ನವೇ ಆರಂಭವಾಗಿದೆ. ಸುಗಮ ಉಡ್ಡಯನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚಂದ್ರನ ಮೇಲೆ ಸುರಕ್ಷಿತವಾಗಿ ಚಂದ್ರಯಾನ-3ದ ವಿಕ್ರಮ್‌ ಲ್ಯಾಂಡರ್‌ ಅನ್ನು ಸುರಕ್ಷಿತವಾಗಿ ಇಳಿಸುವುದಕ್ಕೆ ಮೊದಲು ಆದ್ಯತೆ ನೀಡಲಾಗುತ್ತದೆ ಹಾಗೂ ನಂತರ ಚಂದ್ರನ ಮೇಲೆ ಪ್ರಗ್ಯಾನ್‌ ಹೆಸರಿನ ರೋವರ್‌ ಸುತ್ತಲಿದೆ ಹಾಗೂ ಇತ್ತೀಚಿನ ಪರಿಸ್ಥಿತಿ ಹಾಗೂ ತರಹೇವಾರಿ ಕುತೂಹಲಕರ ಮಾಹಿತಿಯನ್ನು ವಿಜ್ಞಾನಿಗಳಿಗೆ ನೀಡಲಿದೆ. ಈಗ ಅಂದುಕೊಂಡಿರುವ ಪ್ರಕಾರ ಆ.23 ಅಥವಾ 24ರಂದು ಚಂದ್ರನ ಮೇಲೆ ವ್ಯೋಮನೌಕೆ ಲ್ಯಾಂಡ್‌ ಆಗಲಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಕೆಗೆ ಮೊದಲು ಆದ್ಯತೆ ನೀಡಲಾಗುತ್ತದೆ. ನೌಕೆ ಲ್ಯಾಂಡ್‌ ಆಗುವಲ್ಲಿ ವೈಪರೀತ್ಯಗಳ ಕಾರಣ ವ್ಯತ್ಯಾಸವಾದರೂ ಆದರೆ, ಪರ್ಯಾಯ ಮಾರ್ಗಗಳನ್ನು ಇಸ್ರೋ ಕಂಡುಕೊಂಡಿದ್ದು, ಒಂದಿಲ್ಲೊಂದು ಪರ್ಯಾಯ ಸ್ಥಳಗಳಲ್ಲಿ ನೌಕೆಯ ಭೂಸ್ಪರ್ಶಕ್ಕೆ ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ ಸಾಕಷ್ಟು ಇಂಧನ ವ್ಯವಸ್ಥೆಯನ್ನೂ ಲ್ಯಾಂಡರ್‌ಗೆ ಮಾಡಲಾಗಿದೆ. ಅದಕ್ಕೆಂದೇ ಮುಂಜಾಗ್ರತಾ ಕ್ರಮವಾಗಿ ‘ವೈಫಲ್ಯ ಆಧರಿತ ವಿನ್ಯಾಸ’ ಮಾಡಲಾಗಿದೆ.

ಚಂದ್ರಯಾನ-3ಗೆ ಕೌಂಟ್‌ಡೌನ್‌: ನೌಕೆಯ ಮಾಡೆಲ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಇಸ್ರೋ ಸಿಬ್ಬಂದಿ

2019ರಲ್ಲಿ ಚಂದ್ರಯಾನ-2 ವ್ಯೋಮನೌಕೆ ಕ್ರಾಶ್‌ಲ್ಯಾಂಡ್‌ ಆಗಿತ್ತು. ಹೀಗಾಗಿ ಈ ಸಲ ಹಾಗಾಗದಂತೆ ವಿಜ್ಞಾನಿಗಳು ಎಚ್ಚರಿಕೆ ವಹಿಸಿದ್ದಾರೆ. ಚಂದ್ರಯಾನದ ನೌಕೆ ಸಾಫ್ಟ್ ಲ್ಯಾಂಡಿಂಗ್‌ ಆದರೆ ಈ ಯಶಸ್ಸು ಕಂಡ ವಿಶ್ವದ 4ನೇ ದೇಶ ಎಂಬ ಕೀರ್ತಿಗೆ ಭಾರತ ಭಾಜನವಾಗಲಿದೆ. ಈ ಮುಂಚೆ ಅಮೆರಿಕ, ಚೀನಾ ಹಾಗೂ ಸೋವಿಯತ್‌ ರಷ್ಯಾಗಳು ಸಾಫ್ಟ್‌ ಲ್ಯಾಂಡಿಂಗ್‌ನಲ್ಲಿ ಯಶ ಕಂಡಿದ್ದವು.

ಈ ಬಾರಿ ಚಂದ್ರಯಾನದಲ್ಲಿ ಫೇಲ್ಯೂರ್‌ ಆಧರಿತ ವಿನ್ಯಾಸ: 2019ರ ಸೋಲಿನಿಂದ ಎಚ್ಚೆತ್ತು ಇಸ್ರೋ ಲ್ಯಾಂಡರ್‌ ನಿರ್ಮಾಣ