ಇಸ್ರೋದಿಂದ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಯಶಸ್ವಿ ಪ್ರಯೋಗ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಕರ್ನಾಟಕದ ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದಲ್ಲಿ ಈ ಯಶಸ್ವಿ ಪ್ರಯೋಗ ನಡೆದಿದೆ.
ಬೆಂಗಳೂರು/ಚಿತ್ರದುರ್ಗ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಕರ್ನಾಟಕದ ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದಲ್ಲಿ ಈ ಯಶಸ್ವಿ ಪ್ರಯೋಗ ನಡೆದಿದೆ. ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಸ್ವಾಯತ್ತ ಲ್ಯಾಂಡಿಂಗ್ ಮಿಷನ್ ಅನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ.
ಇಂದು ಬೆಳಗ್ಗೆ ಏರೋನಾಟಿಕಲ್ ಟೆಸ್ಟ್ ರೇಂಜ್ (ATR) ನಿಂದ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಸ್ವಾಯತ್ತ ಲ್ಯಾಂಡಿಂಗ್ ಮಿಷನ್ (RLV LEX) ಅನ್ನು ಯಶಸ್ವಿಯಾಗಿ ಪ್ರಯೋಗ ನಡೆಸಲಾಯಿತು. ವಿಶ್ವದಲ್ಲಿಯೇ ಮೊದಲ ಬಾರಿಗೆ, ರೆಕ್ಕೆಯುಳ್ಳ ದೇಹವನ್ನು ಹೆಲಿಕಾಪ್ಟರ್ ಮೂಲಕ 4.5 ಕಿಮೀ ಎತ್ತರಕ್ಕೆ ಕೊಂಡೊಯ್ಯಲಾಯಿತು ಅಲ್ಲದೇ ರನ್‌ವೇಯಲ್ಲಿ ಸ್ವಯಂ ಲ್ಯಾಂಡಿಂಗ್ ಮಾಡಲು ಬಿಡಲಾಯಿತು ಎಂದು ಇಸ್ರೋ ಟ್ವೀಟ್ ಮಾಡಿದೆ.