ಇಸ್ರೋದ PSLV-C61 ರಾಕೆಟ್ ಉಡಾವಣೆ ವಿಫಲವಾಗಿದೆ. ರಾಕೆಟ್ ಮೂರನೇ ಹಂತವನ್ನು ತಲುಪುವಲ್ಲಿ ಸಾಧ್ಯವಾಗಲಿಲ್ಲ ಎಂದು ಇಸ್ರೋ ಮುಖ್ಯಸ್ಥರು ತಿಳಿಸಿದ್ದಾರೆ. EOS-09 ಉಪಗ್ರಹವು ಭೂಮಿಯ ಚಿತ್ರಗಳನ್ನು ಕಳುಹಿಸುವ ಉದ್ದೇಶ ಹೊಂದಿತ್ತು.

ಶ್ರೀಹರಿಕೋಟ: ಇಂದು ಬೆಳಗ್ಗೆ 5.59ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್ (FLP) ನಿಂದ PSLV-C61 ರಾಕೆಟ್ ಉಡಾವಣೆ ಮಾಡಲಾಗಿತ್ತು. ಆದ್ರೆ PSLV-C61 ರಾಕೆಟ್ ಮೂರನೇ ಹಂತವನ್ನು ತಲಪುವಲ್ಲಿ ವಿಫಲವಾಗಿದೆ ಎಂದು ಇಸ್ರೋ ಮುಖ್ಯಸ್ಥ ವಿ. ನಾರಾಯಣನ್ ಮಾಹಿತಿ ನೀಡಿದ್ದಾರೆ. PSLV-C61 ಉಪಗ್ರಹವು EOS-04 ಅನ್ನು ಹೋಲುತ್ತಿದ್ದು, ಇದರ ಕೆಲಸ ಭೂಮಿಯ ಚಿತ್ರಗಳು ಮತ್ತು ಮಾಹಿತಿಯನ್ನು ಕಳುಹಿಸುವುದಾಗಿತ್ತು. ಇದರಿಂದ ಪ್ರಮುಖ ಕಾರ್ಯಗಳಿಗೆ ಡೇಟಾವನ್ನು ಪಡೆಯಬಹುದು. PSLV-C61 ಉಪಗ್ರಹವು ಸಹಾಯದಿಂದ, ಗಡಿಯಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡಲಾಯಿತು.

ಈ ರಾಕೆಟ್ EOS-09 ಅನ್ನು ಸೂರ್ಯ ಸಿಂಕ್ರೊನಸ್ ಪೋಲಾರ್ ಆರ್ಬಿಟ್ (SSPO) ಗೆ ಸಾಗಿಸಿತು. 'ಸಿ-ಬ್ಯಾಂಡ್ ಸಿಂಥೆಟಿಕ್ ಅಪರ್ಚರ್ ರಾಡಾರ್' ಹೊಂದಿದ EOS-09, ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಯಾವುದೇ ಸಮಯದಲ್ಲಿ ಭೂಮಿಯ ಮೇಲ್ಮೈಯ ಹೆಚ್ಚಿನ ರೆಸಲ್ಯೂಶನ್ ಚಿತ್ರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತಿತ್ತು. 

ಉಪಗ್ರಹದ ವಿಶೇಷತೆ:
ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಈ ಉಪಗ್ರಹವು ವಿಶೇಷ ಪಾತ್ರ ವಹಿಸಲಿದ್ದು, ಭೂಮಿಯ ಮೇಲ್ಮೈನ ಹೆಚ್ಚಿನ ರೆಸಲ್ಯೂಶನ್ ಚಿತ್ರ ಸೆರೆಹಿಡಿಯಲು ಅನುವು ಮಾಡಿಕೊಡುತ್ತದೆ. ಈ ಉಪಗ್ರಹವು ಸಿ-ಬ್ಯಾಂಡ್ ಸಿಂಥೆಟಿಕ್ ಅಪರ್ಚರ್ ರಡಾರ್ ಹೊಂದಿದ್ದು, ಎಲ್ಲಾ ಹವಾಮಾನದಲ್ಲೂ ಮತ್ತು ಕಡಿಮೆ ಬೆಳಕಿನಲ್ಲಿ ಭೂಪ್ರದೇಶದ ಸ್ಪಷ್ಟ ಚಿತ್ರಗಳನ್ನು ಸೆರೆಹಿಡಿದುಕೊಡುತ್ತದೆ. ದೇಶದ ಗಡಿಗಳಲ್ಲಿ ಶತ್ರುಗಳ ಚಲನವಲನ ಸೇರಿದಂತೆ ಭದ್ರತಾ ಪರಿಶೀಲನೆಗೆ ನೆರವಾಗಲಿದೆ.

‘ದೇಶದ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಕನಿಷ್ಠ 10 ಉಪಗ್ರಹಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ. ರಾಷ್ಟ್ರವು ತನ್ನ 7,000 ಕಿ.ಮೀ. ಸಮುದ್ರ ತೀರ ಪ್ರದೇಶಗಳು ಮತ್ತು ಸಂಪೂರ್ಣ ಉತ್ತರ ಭಾಗವನ್ನು ಮೇಲ್ವಿಚಾರಣೆ ಮಾಡಬೇಕು. ಉಪಗ್ರಹ ಮತ್ತು ಡ್ರೋನ್ ತಂತ್ರಜ್ಞಾನವಿಲ್ಲದೆ, ದೇಶವು ಅದನ್ನು ಸಾಧಿಸಲು ಸಾಧ್ಯವಿಲ್ಲ’ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ತಿಳಿಸಿದ್ದಾರೆ.

Scroll to load tweet…
Scroll to load tweet…
Scroll to load tweet…
Scroll to load tweet…