ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿ.ವಿಯ ಬಿ.ಜೆ.ಗಿರೀಶ್ ಮತ್ತು ಬಿ.ಇ. ಕುಮಾರಸ್ವಾಮಿ ಸ್ಥಾನ    ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಮತ್ತು ಎಲ್ಸೇವಿಯರ್ ವಿ.ವಿ ಹೊರತಂದಿರುವ ವಿಶ್ವದ ಟಾಪ್ 02% ವಿಜ್ಞಾನಿಗಳ ಪಟ್ಟಿ

 ಶಿವಮೊಗ್ಗ (ಅ.24): ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ (Scientist) ಪಟ್ಟಿಯಲ್ಲಿ ಕುವೆಂಪು ವಿ.ವಿಯ (Kuvempu VV) ಬಿ.ಜೆ.ಗಿರೀಶ್ (BJ Girish) ಮತ್ತು ಬಿ.ಇ. ಕುಮಾರಸ್ವಾಮಿ (BE Kumaraswamy) ಸ್ಥಾನ ಪಡೆದುಕೊಂಡಿದ್ದಾರೆ.

 ಅಮೆರಿಕಾದ (America) ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ (stanford University) ಮತ್ತು ಎಲ್ಸೇವಿಯರ್ ವಿ.ವಿ (Elsevier BV) ಹೊರತಂದಿರುವ ವಿಶ್ವದ ಟಾಪ್ 02% ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿ.ವಿಯ ಬಿ.ಜೆ.ಗಿರೀಶ್ (BJ Girish) ಮತ್ತು ಬಿ.ಇ. ಕುಮಾರಸ್ವಾಮಿಗೆ (BE Kumaraswamy) ಸ್ಥಾನ ದೊರಕಿದೆ. 

ಬೆಂಗ್ಳೂರಲ್ಲಿ ದೇಶದ ಮೊದಲ 'ಡಾಟಾ ಸಮುದ್ರ' ಆರಂಭ

ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿವಿಯ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡ ಸಿದ್ಧಪಡಿಸಿರುವ ಪಟ್ಟಿಯಲ್ಲಿ ವಿಶ್ವದ ಟಾಪ್ 02% ವಿಜ್ಞಾನಿಗಳ ಡೇಟಾಬೇಸ್‌(Data Base) ಅಕ್ಟೋಬರ್ 19ರಂದು ಬಿಡುಗಡೆ ಮಾಡಲಾಗಿದೆ. 

ಸಂಶೋಧನಾ ತಂಡವು ವಿಶ್ವದ ಸಂಶೋಧಕರು ಅಂತಾರಾಷ್ಟ್ರೀಯ ಮಟ್ಟದಲ್ಲಿ (Inter National Level ) ಕೈಗೊಂಡ ಸಂಶೋಧನಾ ಪ್ರಕಟಣೆಗಳು ಹಾಗು ಅವರ ಸಾಧನೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್-ಇಂಡೆಕ್ಸ್ (H index) ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿಕೊಂಡಿದೆ. ಇವುಗಳನ್ನು ಪರಿಗಣಿಸಿ ಅವರಿಗೆ ಪ್ರತಿಷ್ಟಿತ ಸ್ಥಾನಮಾನವನ್ನು ನೀಡಲಾಗುತ್ತದೆ. 

ಮತ್ತೆ ನಾಲ್ವರ ಬಾಹ್ಯಾಕಾಶ ಪ್ರಯಾಣಕ್ಕೆ ಸ್ಪೇಸ್‌ಎಕ್ಸ್ ಸಿದ್ಧ, ಯಾರೀ ನಾಲ್ವರು?

ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಮತ್ತು ಎಲ್ಸೇವಿಯರ್ ವಿ.ವಿ ಜಾಗತಿಕವಾಗಿ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶ ಪ್ರಕಟಣೆ ಮಾಡಿವೆ. 

ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 176 ಉಪ ವಿಜ್ಞಾನ ವಿಷಯಗಳನ್ನು ವಿಂಗಡಿಸಿ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳ ಪಟ್ಟಿಯನ್ನು ರಚಿಸಲಾಗಿದೆ. ವೃತ್ತಿಜೀವಮಾನ ಸಾಧಕರು ಮತ್ತು 2021ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳನ್ನು ಈ ಪಟ್ಟಿಯು ಒಳಗೊಂಡಿದೆ. 

2021ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 54,804ನೇ ಸ್ಥಾನವನ್ನು ಕುವೆಂಪು ವಿವಿಯ ಗಣಿತ ವಿಜ್ಞಾನ ಸಹ ಪ್ರಾಧ್ಯಾಪಕ ಡಾ. ಬಿ.ಜೆ. ಗಿರೀಶ್ (BJ Girish) ಪಡೆದಿದ್ದಾರೆ. 

 ಇಂಜಿನಿಯರಿಂಗ್ (Engineering), ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್‌ ವಿಷಯಗಳ ಕುರಿತ ಸಂಶೋಧನಾ ವಿಚಾರಗಳಿಗೆ ಸಂಬಂಧಿಸಿದ ಅನೇಕ ಲೇಖನಗಳನ್ನು ಡಾ. ಬಿ.ಜೆ. ಗಿರೀಶ್ ಪ್ರಕಟಿಸಿದ್ದಾರೆ. 

ಇನ್ನು ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಧ್ಯಾಪಕ ಡಾ. ಬಿ. ಇ. ಕುಮಾರಸ್ವಾಮಿ 1,65,713ನೇ ಸ್ಥಾನದಲ್ಲಿದ್ದಾರೆ. 

ಈ ವರ್ಷದ ಪಟ್ಟಿಯಲ್ಲಿ ಭಾರತದ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2042 ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ 1900 ವಿಜ್ಞಾನಿಗಳು ಸ್ಥಾನ ಪಡೆದಿದ್ದರು.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (IISc.) 114 ವಿಜ್ಞಾನಿಗಳು ಈ ಪಟ್ಟಿಯಲ್ಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ವಿವಿಯ ಸಂಶೋಧನಾ ಸಾಧನೆಗೆ ಪೂರಕವಾದ ಕಾರ್ಯ ಮಾಡುತ್ತಿರುವ ಈ ಇಬ್ಬರು ಅಧ್ಯಾಪಕರ ಸಾಧನೆ ಇದೀಗ ಗುರುತಿಸಲ್ಪಟ್ಟಿದ್ದು, ಶ್ರೇಷ್ಠ ವಿಜ್ಞಾನಿಗಳೆನಿಸಿಕೊಂಡಿದ್ದಾರೆ.