ರಾಜ್ಯ ತೀವ್ರ ಪ್ರವಾಹ ಪರಿಸ್ಥಿತಿಯಿಂದ ತತ್ತರಿಸಿದ್ದು ಇದೇ ಸಮಯದಲ್ಲಿ ಜಗದೀಶ್ ಶೆಟ್ಟರ್ ಕುಟುಂಬ ವಿದೇಶ ಪ್ರವಾಸಕ್ಕೆ ತೆರಳುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.
state Nov 1, 2019, 8:04 AM IST
ಕೇವಲ 40 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆದ್ರೆ, ಅರ್ಜಿ ಸಲ್ಲಿಸಿ ಬೆಳಗಾವಿಗೆ ಬಂದವರು ಸಾವಿರಾರು ಉದ್ಯೋಗ ಆಕಾಂಕ್ಷಿಗಳು. ಈ ಮ ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.
Jobs Oct 31, 2019, 10:09 PM IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬರುವ ನವೆಂಬರ್ 2 ರಂದು ಮೊದಲ 100 ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಉದ್ದೇಶಿಸಲಾಗಿದೆ.
Bengaluru-Urban Oct 30, 2019, 9:08 AM IST
ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೊಡಗಿನಲ್ಲಿ ಭಾರಿ ಮಳೆಯಿಂದ ಪ್ರವಾಹ ಬಂದಾಗ ನೆರೆ ಸಂತ್ರಸ್ತರಿಗೆ ನೀಡಿರುವ ಪರಿಹಾರದ ಮಾದರಿಯಲ್ಲಿ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಪರಿಹಾರ ಧನ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದರು.
Belagavi Oct 29, 2019, 12:52 PM IST
ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರವಾಗಿ 1200 ಕೋಟಿ ರು. ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಆದರೆ, ಜಿಲ್ಲೆಯ ಬಾದಾಮಿ ತಾಲೂಕಿನ ಕಗಲಗೊಂಬ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ವೆಂಕಟೇಶ್ ಜಂಬಗಿ ಎಂಬುವರು ಸಿಎಂ ಯಡಿಯೂರಪ್ಪ ಅವರಿಗೆ ಟ್ವೀಟ್ ಮಾಡಿ ಮಾನ್ಯ ಬಿಎಸ್ವೈಯವರೇ, ಕೇಂದ್ರ ನೆರೆ ಪರಿಹಾರ 1200 ಕೋಟಿ ನೀಡಿದೆ ಅಂತೀರಾ,ಆದ್ರೆ ಎಲ್ಲೂ ಸಂತ್ರಸ್ತರಿಗೆ ಪರಿಹಾರ ವಿತರಣೆ ಆಗಿಲ್ಲ ಎಂದು ಬರೆದುಕೊಂಡಿದ್ದಾರೆ.
Bagalkot Oct 29, 2019, 12:32 PM IST
ಜಿಲ್ಲೆಯಾದ್ಯಂತ ಎಲ್ಲರೂ ದೀಪಾವಳಿಯ ಸಂಭ್ರಮದಲ್ಲಿದ್ದರೆ ಈರುಳ್ಳಿ ಬೆಳೆದ ರೈತರು ಮಾತ್ರ ತೀವ್ರ ನೋವಿನಲ್ಲಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಕೊರಗಿನಲ್ಲಿಯೇ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಅತಿಯಾದ ಮಳೆಯಿಂದಾಗಿ ಈರುಳ್ಳಿ ಬೆಳೆಯೆಲ್ಲ ಸಂಪೂರ್ಣ ಕೊಳತೇ ಹೋಗಿದೆ.
Gadag Oct 29, 2019, 12:12 PM IST
ಯಾವುದೇ ಸರ್ಕಾರ ಇದ್ದರೂ ರಾತ್ರೋ ರಾತ್ರಿ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ. ಸರ್ಕಾರಕ್ಕೆ ಎರಡು ತಿಂಗಳು ಸಮಯಾವಕಾಶ ನೀಡಲಾಗಿದೆ. ಇನ್ನು ಮತ್ತೆ ಸಮಯ ನೀಡಲು ಆಗದು. 15 ದಿನದಿಂದ ಒಂದು ತಿಂಗಳೊಳಗೆ ಪರಿಹಾರ ದೊರಕಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Haveri Oct 29, 2019, 10:12 AM IST
ನೆರೆಯಿಂದಾಗಿ ಸಂಕಷ್ಟ ಎದುರಿಸುತ್ತಿರುವ ಕುಟುಂಬದವರಿಗೆ ಎನ್ಡಿಆರ್ಎಫ್ ನಿಧಿಯಿಂದ ನೀಡುವ ಹಣ ಸಾಲುತ್ತಿಲ್ಲ. ಸರ್ಕಾರ ಕೂಡಲೇ ಈ ನಿಯಮವನ್ನು ಕೈ ಬಿಟ್ಟು ವಿಶೇಷ ಯೋಜನೆಯಡಿಯಲ್ಲಿ ಹೆಚ್ಚಿನ ಪರಿಹಾರ ನೀಡಲು ಒತ್ತಾಯಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Haveri Oct 29, 2019, 7:28 AM IST
ಭೀಕರ ಪ್ರವಾಹದಿಂದ ತತ್ತರಿಸಿದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಳಂಬ ನೀತಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಖಂಡಿಸಿದಿದ್ದಾರೆ.
Bidar Oct 28, 2019, 3:03 PM IST
ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
Dharwad Oct 28, 2019, 1:58 PM IST
ಕಂದಾಯ ಸಚಿವ ಆರ್.ಅಶೋಕ ಅವರು ಎಲ್ಲವೂ ಮುಗಿದ ಮೇಲೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿದ್ದಾರೆ. ಸತತ ಮೂರನೇ ಬಾರಿಗೆ ನೆರೆ ಪ್ರವಾಹಕ್ಕೆ ಸಿಕ್ಕು ನಲುಗಿದ ಮೇಲೆ ಜಿಲ್ಲೆಗೆ ಸಚಿವ ಅಶೋಕ ಅವರು ಆಗಮಿಸಿದ್ದಾರೆ.
Belagavi Oct 28, 2019, 1:21 PM IST
ಅತಿವೃಷ್ಟಿಯಿಂದ ರಾಜ್ಯದಲ್ಲಿ ಸಾಕಷ್ಟು ಅವಾಂತರಗಳಾಗಿವೆ. ಮಳೆಯಿಂದಾಗಿ ದೊಡ್ಡಮಟ್ಟದ ಹಾನಿಯಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಕ್ಕೆ ಸ್ವಲ್ಪ ಸಮಯ ಕೊಡಬೇಕಾಗುತ್ತೆ. ಯಾವುದೇ ಸರ್ಕಾರವಿದ್ದರೂ ಒಂದೇ ರಾತ್ರಿಯಲ್ಲಿ ಎಲ್ಲವನ್ನೂ ಬಗೆಹರಿಸಲು ಆಗಲ್ಲ. ನನ್ನ ಅನಿಸಿಕೆ ಪ್ರಕಾರ ರಾಜ್ಯದಲ್ಲಿ ಹಣದ ಕೊರತೆಯಿಲ್ಲ. ಮಂತ್ರಿಗಳು ದಿನಕ್ಕೊಂದು ಹೇಳಿಕೆ ಕೊಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
Dharwad Oct 28, 2019, 10:38 AM IST
ಪ್ರವಾಹ ಇಳಿಮುಖವಾದ ಹಿನ್ನಲೆಯಲ್ಲಿ ಜಿಲ್ಲೆಯ ಬಾದಾಮಿ ತಾಲೂಕಿನ ಹುಬ್ಬಳ್ಳಿ- ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಆದರೆ, ಗೋವಿನಕೊಪ್ಪ ಸೇತುವೆ ಮೇಲೆ ಸಂಚರಿಸಲು ವಾಹನಗಳು ಪರದಾಡಿದ ಘಟನೆ ಭಾನುವಾರ ನಡೆದಿದೆ.
Bagalkot Oct 28, 2019, 10:16 AM IST
ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರೈತರ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ. ಹೀಗಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಕೂಡಲೇ ತ್ವರಿತವಾಗಿ ರೈತರ ನಷ್ಟದ ಅಂದಾಜು ಮಾಡಿ ಪರಿಹಾರ ನೀಡಬೇಕು ಹಾಗೂ ಮನೆಯನ್ನು ಕಳೆದುಕೊಂಡವರಿಗೆ ಸೂರನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಹುಚ್ಚವ್ವನಹಳ್ಳಿ ಮಂಜುನಾಥ ಬಣದ ಬಳ್ಳಾರಿ ಜಿಲ್ಲಾಧ್ಯಕ್ಷ ದೇವರಮನಿ ಮಹೇಶ ಅವರು ತಹಸೀಲ್ದಾರ್ ಮೂಲಕ ಮನವಿ ಪತ್ರ ನೀಡಿದರು.
Ballari Oct 27, 2019, 2:32 PM IST
ಬೆಣ್ಣಿಹಳ್ಳದ ಪ್ರವಾಹದಲ್ಲಿ ಇಬ್ಬರು ಕೊಚ್ಚಿ ಹೋದ ಘಟನೆ ಶನಿವಾರ ಸಂಜೆ ಗದಗ ಜಿಲ್ಲೆ ರೋಣ ತಾಲೂಕಿನ ಮಾಳವಾಡ ಸಮೀಪದಲ್ಲಿ ನಡೆದಿದೆ. ಪ್ರವಾಹದಲ್ಲಿ ಕೊಚ್ಚಿ ಹೋದವರನ್ನು ನರಗುಂದ ತಾಲೂಕಿನ ಹದ್ಲಿ ಗ್ರಾಮದ ಕಳಸಪ್ಪ ಬೈಲಪ್ಪ ವಿಟ್ಟಪ್ಪನವರ(30), ಈರಣ್ಣ ಶಿವರುದ್ರಪ್ಪ ವಿಟ್ಟಪ್ಪನವರ(15) ಎಂದು ಗುರುತಿಸಲಾಗಿದೆ.
Gadag Oct 27, 2019, 2:13 PM IST