ಮೋದಿ ಅವರು ಹೇಳಿರುವ ಯಾವ ಭರವಸೆಯೂ ಈಡೇರಿಲ್ಲ. ಆದರೂ ಯುವಕರು ಭ್ರಮೆಯಲ್ಲಿ ತೇಲುತ್ತ ಮೋದಿ ಮೋದಿ ಎನ್ನುತ್ತಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಅಜಗಜಾಂತರವಾಗಿ ಏರಿದೆ. ಸದ್ಯ ಚುನಾವಣಾ ಬಾಂಡ್ ಹಗರಣದಿಂದ ಮೋದಿಯವರ ಒಳ ಮರ್ಮ ಹೊರ ಬಂದಿದೆ ಎಂದ ಸಚಿವ ಎಂ.ಬಿ.ಪಾಟೀಲ
Politics Apr 11, 2024, 11:52 AM IST
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಐದು ರೀತಿಯ ನ್ಯಾಯವನ್ನು ಉಲ್ಲೇಖ ಮಾಡಿದೆ. ಕನಿಷ್ಠ ಕೂಲಿಯನ್ನು 400 ರೂಪಾಯಿಗೆ ಏರಿಕೆ. 40 ಲಕ್ಷ ಸರ್ಕಾರಿ ಉದ್ಯೋಗ, ಬಡ ಮಹಿಳೆಯರಿಗೆ 1 ಲಕ್ಷ ನೆರವು, ತರಬೇತಿಗೆ 1 ಲಕ್ಷ ನೆರವು, ನಗರ ಉದ್ಯೋಗ ಖಾತ್ರಿ ಯೋಜನೆ ತರುವ ಭರವಸೆ ನೀಡಲಾಗಿದೆ.
India Apr 5, 2024, 1:03 PM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಅಧಿವೇಶನದ ಬಳಿಕ ವಿಶ್ರಮಿಸದೇ ರೈತರ ಸಾಲಮನ್ನಾ ಮಾಡುವವರೆಗೆ ಹಾಗೂ ಕಾಂಗ್ರೆಸ್ ಆಡಳಿತದಿಂದ ಕೆಳಗಿಳಿಯುವವರೆಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಹೋರಾಟ ಮಾಡಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದರು.
Politics Dec 15, 2023, 12:38 PM IST
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ಸರ್ಕಾರವು ಧಾವಿಸಬೇಕಾದ ಅಗತ್ಯವಿದ್ದು, ಎರಡು ಲಕ್ಷ ರು.ವರೆಗಿನ ಕೃಷಿ ಸಾಲಮನ್ನಾ ಮಾಡುವುದರ ಜತೆಗೆ ತಕ್ಷಣ 10 ಸಾವಿರ ಕೋಟಿ ರು. ಅನುದಾನವನ್ನು ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
Politics Dec 8, 2023, 4:23 AM IST
ಕರ್ನಾಟಕದಂತೆ ಹಿಂದಿ ರಾಜ್ಯದಲ್ಲೂ ಉಚಿತಗಳ ಭರವಸೆ, ಮಹಿಳೆಯರಿಗೆ 1500, ಎಲ್ಪಿಜಿಗೆ 500, ವಿದ್ಯುತ್ ಉಚಿತ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ 500 ರು.ಗೆ ಎಲ್ಪಿಜಿ ಸಿಲಿಂಡರ್, ರೈತರ ಕೃಷಿ ಸಾಲ ಮನ್ನಾ, ಸಾಮಾಜಿಕ ಸಬಲೀಕರಣಕ್ಕಾಗಿ ಜಾತಿ ಗಣತಿ, ಮನೆಯ ಯಜಮಾನತಿಗೆ ಪ್ರತಿ ತಿಂಗಳು 1500 ರುಪಾಯಿ ಸಹಾಯಧನ, ಎಲ್ಲ ಮನೆಗಳಿಗೂ ಪ್ರತಿ ತಿಂಗಳು 100 ಯುನಿಟ್ವರೆಗೆ ವಿದ್ಯುತ್ ಉಚಿತ, ರಾಜ್ಯದ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮರುಜಾರಿ, ಸಂತ ರವಿದಾಸರ ಹೆಸರಿನಲ್ಲಿ ಸಾಗರ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ.
Politics Aug 23, 2023, 4:35 AM IST
ಕೃಷಿ ಸಹಕಾರ ಸಂಘಗಳು ಹಾಗೂ ಬ್ಯಾಂಕುಗಳಲ್ಲಿ ಮಾಡಿರುವ ಸಾಲವನ್ನು ಸರ್ಕಾರ ಮನ್ನಾ ಮಾಡುತ್ತದೆ ಎಂಬ ಮನೋಭಾವನೆಯನ್ನು ರೈತರು ಬಿಡಬೇಕು. ನಿಗದಿತ ಅವಧಿಯಲ್ಲಿ ಸಾಲ ಮರು ಪಾವತಿಸಿದರೆ ಸಹಕಾರ ಸಂಘಗಳು ಮತ್ತಷ್ಟು ವೃದ್ದಿಯಾಗುತ್ತವೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
Karnataka Districts Aug 11, 2023, 5:50 PM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡಿದೆ ಎಂಬುದನ್ನು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸವಾಲು ಹಾಕಿದ್ದಾರೆ.
Politics Aug 6, 2023, 10:58 PM IST
ಗಡಿ ಭಾಗದ ಅರಣ್ಯದಲ್ಲಿ ನಿರ್ಮಾಣಕ್ಕೆ ಅವಕಾ ನೀಡುವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ಮತ್ತೊಂದೆಡೆ ಮಧ್ಯಪ್ರದೇಶ ಕಾಂಗ್ರೆಸ್ ಚುನಾವಣಾ ಹೊಸ್ತಿಲಲ್ಲಿ ರೈತರಿಗೆ ಬಂಪರ್ ಆಫರ್ ನೀಡಿದೆ, ಸಾಲಮನ್ನಾ ಹಾಗೂ ವಿದ್ಯುತ್ ಬಿಲ್ ಬಾಕಿ ಮನ್ನಾದ ಭರವಸೆ ನೀಡಿದೆ.
India Jul 27, 2023, 9:51 AM IST
ಸಹಕಾರ ಸಂಘಗಳಲ್ಲಿ ಸಾಲ ಪಡೆದ ರೈತರು ಬೆಳೆ ಹಾಳಾಗಿ ಅಸಲು ಸಹ ಕಟ್ಟಲಾಗದೆ ಸುಸ್ತಿದಾರರಾಗಿರುವವರು ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡುವ ಬಗ್ಗೆ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಶಾಸಕ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.
state Jul 2, 2023, 11:34 AM IST
ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಜಾರಿಗೆ ಹಣ ಹೊಂದಿಸುವುದು ಕಷ್ಟಕರ ಆಗಿರುವುದರಿಂದ ಮುಂದಿನ ವರ್ಷ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
Politics Jun 29, 2023, 4:00 AM IST
ಚುನಾವಣೆ ಸಮಯದಲ್ಲಿ ಕಾಂಗ್ರೇಸ್ ಸರ್ಕಾರವು ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡುವುದಾಗಿ ಮತ ಹಾಕಿಸಿಕೊಂಡು ಈಗ ಸಾಲ ಮನ್ನಾ ಮಾಡುತ್ತಿಲ್ಲ ಎಂದು ಮಾಲೂರು ತಾಲೂಕಿನ ರಾಜೇನಹಳ್ಳಿ ಗ್ರಾಮದ ಸ್ತ್ರೀಶಕ್ತಿ ಸಂಘದ ಮಹಿಳೆಯರು ಸಾಲ ವಸೂಲಿಗೆ ಹೋದ ದಿನ್ನೇರಿಹಾರೋಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಎಚ್.ವಿ.ತಿರುಮೇಗೌಡ ಹಾಗೂ ಸಿಬ್ಬಂದಿಯನ್ನು ಗ್ರಾಮದಿಂದ ಹೊರ ಹಾಕಿದ ಘಟನೆ ಶನಿವಾರ ನಡೆದಿದೆ.
Karnataka Districts Jun 18, 2023, 4:01 PM IST
ಪ್ರಜಾಯಾತ್ರೆ ಸಮಾವೇಶಗಳಲ್ಲಿ ಭಾಷಣ ಮಾಡುವಾಗ ನಮ್ಮ ಪಕ್ಷಕ್ಕೆ ಮತ ನೀಡಿದರೆ ಸಹಕಾರ ಬ್ಯಾಂಕ್ಗಳಲ್ಲಿ ಪಡೆದಿರುವ ಸ್ತ್ರೀಶಕ್ತಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿ ಮತ ಪಡೆದ ಸಿದ್ದರಾಮಯ್ಯನವರು ಈ ಸಾಲ ಮನ್ನಾ ಮಾಡಿದೆ ಮಹಿಳೆಯರಿಗೆ ದ್ರೋಹ ಮಾಡಿದ್ದಾರೆಂದು ರೈತ ಸಂಘದ ಮುಖಂಡೆ ನಳಿನಿಗೌಡ ಆರೋಪಿಸಿದರು.
state Jun 13, 2023, 8:38 PM IST
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸಿದ್ದರಾಮಯ್ಯ ಅವರು ನೀಡಿದ್ದ ಐದು ಗ್ಯಾರಂಟಿ ಭರವಸೆಗಳ ಜೊತೆಗೆ ಮಹಿಳೆಯರಿಗೆ ನೀಡಿದ್ದ ಮತ್ತೊಂದು ಭರವಸೆ ಈಗ ಸಖತ್ ಸದ್ದು ಮಾಡುತ್ತಿದೆ, ಡಿಸಿಸಿ ಬ್ಯಾಂಕ್ ನಿಂದ ಕೊಟ್ಟಿರುವ ಸಾಲ ಕೇಳಲು ಹೋದ ಅಧಿಕಾರಿಗಳಿಗೆ ಮಹಿಳೆಯರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.ಈ ವಿಚಾರ ಸಿಎಂ ಸಿದ್ದರಾಮಯ್ಯನವರಿಗೆ ತಲೆನೋವು ತಂದಿದೆ.ಅದ್ಯಾಕೆ ಅನ್ನೋದನ್ನು ತೋರಿಸ್ತೀವಿ ನೋಡಿ.
state Jun 9, 2023, 12:13 PM IST
ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ಪಕ್ಷದ ಪೂರ್ವಭಾವಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಹೇಳಿದ್ದಾರೆ.
India May 22, 2023, 5:06 PM IST
ರೈತರ ಸಾಲ 26 ಸಾವಿರ ಕೋಟಿ ರುಪಾಯಿ ಮನ್ನಾ ಮಾಡಿರುವ ಒಬ್ಬನೇ ಒಬ್ಬ ಕಾಂಗ್ರೆಸ್ ಅಥವಾ ಬಿಜೆಪಿ ಮುಖ್ಯಮಂತ್ರಿಯನ್ನು ತೋರಿಸಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸವಾಲು ಹಾಕಿದರು.
Politics May 9, 2023, 3:27 AM IST