ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಇದು 2ನೇ ಹಾಗೂ ಕೊನೇ ಹಂತದ ಚುನಾವಣೆ. ಈ ಬಾರಿ ಉತ್ತರ, ಮಧ್ಯ ಕರ್ನಾಟಕ ಒಳಗೊಂಡ 13 ಜಿಲ್ಲೆ ಹಾಗೂ ಕರಾವಳಿಯ ಉತ್ತರ ಕನ್ನಡಕ್ಕೆ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲ ಒಕ್ಕಲಿಗರ ಪ್ರಾಬಲ್ಯ ಇರುವಂತೆ ಉತ್ತರ ಕರ್ನಾಟಕದ ಚುನಾವಣೆಯಲ್ಲಿ ಲಿಂಗಾಯತರ ಪ್ರಾಬಲ್ಯ ಹೆಚ್ಚಿದೆ. 2019ರ ಚುನಾವಣೆಯಲ್ಲಿ ಇಲ್ಲಿನ ಎಲ್ಲಾ 14 ಕ್ಷೇತ್ರಗಳನ್ನೂ ಬಿಜೆಪಿ ಗೆದ್ದಿತ್ತು. ಒಟ್ಟು 2.59 ಕೋಟಿ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದು, ಚುನಾವಣಾ ಆಯೋಗದಿಂದ 28,269 ಮತಗಟ್ಟೆಗಳನ್ನು ತೆರೆಯಲಾಗಿದೆ. ಒಟ್ಟು 227 ಅಭ್ಯರ್ಥಿಗಳ ಹಣೆಬರಹ ಮಂಗಳವಾರ ಇವಿಎಂನಲ್ಲಿ ಭದ್ರವಾಗಲಿದ್ದು, ಇದರಲ್ಲಿ 206 ಪುರುಷರು ಇದ್ದರೆ, 21 ಮಂದಿ ಮಹಿಳೆಯರು ಅಭ್ಯರ್ಥಿಗಳಾಗಿದ್ದಾರೆ. ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ, ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ, ನಟ ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಕಣದಲ್ಲಿರುವ ಪ್ರಮುಖರಾಗಿದ್ದಾರೆ.
India May 7, 2024, 7:00 AM IST
ಬ್ರಹ್ಮಾಂಡ ಭ್ರಷ್ಟಾಚಾರಿಗಳಾದ ಕಾಂಗ್ರೆಸ್ಸಿಗರಿಗೆ ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಖರಿ ಟೀಕಿಸುವ ಹಕ್ಕಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು
Politics May 4, 2024, 6:27 AM IST
ರಾಜ್ಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಇದೆ. ರೈತರು ಸಂಕಷ್ಟದಲ್ಲಿದ್ದರೂ ಈ ಸರಕಾರ ಕೈಕಟ್ಟಿ ಕೂತಿದೆ. ಬೇಜವಾಬ್ದಾರಿ ಸರ್ಕಾರವಿದೆ ಎಂದುಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
Politics Apr 29, 2024, 6:18 PM IST
ನ್ಯುಮೋನಿಯಾದಿಂದ ಬಳಲುತ್ತಿದ್ದ 78 ವರ್ಷದ ಮಹಿಳೆಯೊಬ್ಬರು ಇಂದು ಕರ್ನಾಟಕದಲ್ಲಿ ಆಕ್ಸಿಜನ್ ಸಪೋರ್ಟ್ನಲ್ಲಿಯೇ ಬಂದು ಮತದಾನ ಮಾಡಿದರು.
state Apr 26, 2024, 4:31 PM IST
Lok Sabha Election Karnataka 2024: ರಾಜ್ಯದಲ್ಲಿ ಸಂಜೆ 5 ಗಂಟೆ ವೇಳೆಗೆ ಶೇ. 63.90 ರಷ್ಟು ಮತದಾನವಾಗಿದೆ. ಮಂಡ್ಯದಲ್ಲಿ ಗರಿಷ್ಠ ಶೇ 74.87 ರಷ್ಟು ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಮತದಾನವಾಗಿದೆ.
Politics Apr 26, 2024, 11:56 AM IST
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ಮತದಾನವಾಗಿದೆ. ಸಂಜೆ 5ಗಂಟೆ ವೇಳೆಗೆ ಶೇ.71.83ರಷ್ಟು ಮತದಾನ
Politics Apr 26, 2024, 10:18 AM IST
ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ರಾಜವಂಶದ ಕುಡಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯ ಪ್ರತಿಷ್ಠೆ ಉಳಿಸಿಕೊಳ್ಳುವ ಕಣವಾಗಿ ಮಾರ್ಪಟ್ಟಿದೆ.
Politics Apr 26, 2024, 9:11 AM IST
ಉಡುಪಿ ಚಿಕ್ಕಮಗಳೂರಿನಲ್ಲಿ ಮತದಾನ ಬಿರುಸುಗೊಂಡಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆಯ ಬದಲು ಕಣಕ್ಕೆ ಇಳಿದಿರುವ ಕೋಟ ಶ್ರೀನಿವಾಸ್ ಪೂಜಾರಿಗೆ ಕಾಂಗ್ರೆಸ್ನ ಜಯಪ್ರಕಾಶ್ ಹೆಗ್ಡೆ ಸವಾಲು ನೀಡಿದ್ದಾರೆ.
Politics Apr 26, 2024, 8:40 AM IST
ಒಕ್ಕಲಿಗರ ಭದ್ರಕೋಟೆ ಬೆಂಗಳೂರು ಉತ್ತರದಲ್ಲಿ ಗೆಲ್ಲೋರಾರು; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕಾಂಗ್ರೆಸ್ನಿಂದ ಪ್ರೊಫೆಸರ್ ರಾಜೀವ್ಗೌಡ ಸವಾಲೊಡ್ಡಿದ್ದಾರೆ. ಇಲ್ಲಿದೆ ಮತದಾನದ ಅಪ್ಡೇಟ್ಸ್ ವಿವರ..
Politics Apr 26, 2024, 8:31 AM IST
ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ, ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಶಾಂತಿಯುತವಾಗಿ ನಡೆದಿದೆ. ಇದುವರಿಗಿನ ಮಾಹಿತಿಯಂತೆ ಶೇ.70 ಮತದಾನವಾಗಿದ್ದು, ಸ್ಪಷ್ಟ ಚಿತ್ರಣವಿನ್ನೂ ಸಿಕ್ಕಿಲ್ಲ. ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಮಂಡ್ಯ, ಮೈಸೂರು, ಹಾಸನ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೆ ಚುನಾವಣೆ ನಡೆದಿದೆ. 2.88 ಕೋಟಿ ಮತದಾರರಿಗೆ, 30602 ಮತಗಟ್ಟೆ ತೆರೆಯಲಾಗಿತ್ತು. ಚುನಾವಣಾ ಕಾರ್ಯಕ್ಕೆ 1.4 ಲಕ್ಷ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಶುಕ್ರವಾರ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಕಚೇರಿ, ಶಾಲೆ, ಕಾಲೇಜು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಿಗೆ ವೇತನ ಸಹಿತ ರಜೆ ಘೋಷಿಸಲಾಗಿತ್ತು ಉತ್ತರ ಕರ್ನಾಟಕದ ಉಳಿದ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ.
Politics Apr 26, 2024, 7:02 AM IST
ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
Karnataka Districts Apr 25, 2024, 6:22 PM IST
ಈಶ್ವರಪ್ಪ ಅವರನ್ನು ಮನವೊಲಿಸುವ ಸಾಕಷ್ಟು ಪ್ರಯತ್ನದ ಹೊರತಾಗಿಯೂ ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ. ಹೀಗಾಗಿ, ಬಿಜೆಪಿಯ ಶಿಸ್ತು ಸಮಿತಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಇದಕ್ಕೆ ಈಶ್ವರಪ್ಪ ಸಹ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
Politics Apr 24, 2024, 5:36 AM IST
ಶಿವಮೊಗ್ಗದಲ್ಲಿ ರಾಘಣ್ಣ ಜನತೆ ಅಪೇಕ್ಷೆ ಪಟ್ಟ ನೂರಕ್ಕೆ 95 ರಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳ ಹಿನ್ನೆಲೆ ರಾಘವೇಂದ್ರ ಹೆಚ್ಚಿನ ಮತಗಳ ಅಂತರದಿಂದದ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
Politics Apr 22, 2024, 7:08 PM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೋವಿಂದ ಕಾರಜೋಳ ಗೆದ್ದಾಗಿದೆ. ಈ ಬಾರಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನುಡಿದರು.
Politics Apr 21, 2024, 7:45 PM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ ರ್ಯಾಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯದ 28 ಕ್ಷೇತ್ರ ಗೆಲ್ಲಿಸಿಕೊಡುವ ಭರವಸೆಯನ್ನು ಮೋದಿಗೆ ನೀಡಿದ್ದಾರೆ. ಯಡಿಯೂರಪ್ಪ ಭಾಷಣದ ವಿವರ ಇಲ್ಲಿದೆ
state Apr 20, 2024, 5:17 PM IST