ಡಿ.ರೂಪಾ ಮೌದ್ಗಿಲ್ ಫೇಸ್ಬುಕ್, ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಆದ್ದರಿಂದ, ಒಂದು ಕೋಟಿ ಹಣವನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಕೋರಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ.
state Mar 1, 2023, 6:58 AM IST
ಪರಸ್ಪರ ಆರೋಪ-ಪ್ರತ್ಯಾರೋಪದ ಹೇಳಿಕೆಗಳನ್ನು ಯಾವುದೇ ರೂಪದಲ್ಲೂ ನೀಡದಂತೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ ಬಳಿಕವೂ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ‘ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿ....’ ಎಂದು ಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
state Feb 27, 2023, 9:47 AM IST
ಹಿರಿಯ ಮಹಿಳಾ ಅಧಿಕಾರಿಗಳ ಕಿತ್ತಾಟ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಇಲಾಖಾ ವಿಚಾರಣೆಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.
state Feb 25, 2023, 6:42 AM IST
ರಾಜ್ಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗು ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ನಡುವಿನ ಬೀದಿ ರಂಪಾಟ ಇನ್ನೂ ತಾರ್ಕಿಕ ಅಂತ್ಯ ಕಂಡಿಲ್ಲ. ಸದ್ಯ ಈ ವಿವಾದ ಕೋರ್ಟ್ನಲ್ಲಿದೆ. ಈ ನಡುವೆ ಡಿಕೆ ರವಿ ಅವರು ರೋಹಿಣಿ ಸಿಂಧೂರಿಗೆ ಕಳಿಸಿದ ಕೊನೆಯ ಮೆಸೇಜ್ ಆಧಾರದಲ್ಲಿ ರೋಹಿಣಿ ವಿರುದ್ಧ ತನಿಖೆ ನಡೆಸುವಂತೆ ಆಗ್ರಹ ಕೇಳಿಬಂದಿದೆ.
state Feb 24, 2023, 5:38 PM IST
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಆಕ್ಷೇಪಾರ್ಹ ಹಾಗೂ ಮಾನಹಾನಿ ಹೇಳಿಕೆ ನೀಡದಂತೆ ನಗರದ ಸಿಟಿ ಹಾಗೂ ಸೆಷನ್ಸ್ ನ್ಯಾಯಾಲಯ ತಾಕೀತು ಮಾಡಿದೆ.
state Feb 24, 2023, 6:39 AM IST
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ಮಾನಹಾನಿಕರ ಪೋಸ್ಟ್ ಹಾಗೂ ಬರಹಗಳನ್ನು ಹಂಚಿಕೊಳ್ಳದಂತೆ ಮಾಧ್ಯಮಗಳು ಹಾಗೂ ಐಪಿಎಸ್ ಅಧಿಕಾರಿ ರೂಪಾ ಅವರಿಗೆ ತಡೆಯಾಜ್ಞೆ ತರುವಲ್ಲಿ ಯಶಸ್ವಿ ಆಗಿದ್ದಾರೆ
state Feb 23, 2023, 4:01 PM IST
ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ತಿಕ್ಕಾಟ ಇದೀಗ ಕೌಟುಂಬಿಕ ಸಂಘರ್ಷದ ಸ್ವರೂಪ ಪಡೆದಿದೆ.
state Feb 23, 2023, 6:23 AM IST
ರೂಪಾ ಹಾಗೂ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟಕ್ಕೆ ವೈಯಕ್ತಿಕ ವಿಚಾರ ಕಾರಣ ಎನ್ನುವುದು ಗೊತ್ತಾಗಿದೆ. ಈ ನಡುವೆ ಡಿ ರೂಪಾ ಅವರು ತಮ್ಮ ಪರಿ ಮನೀಷ್ ಮೌದ್ಗಿಲ್ ಅವರ ಕಚೇರಿಯನ್ನು ತಮ್ಮ ಬೇಹುಗಾರರನ್ನು ಇಟ್ಟುಕೊಂಡಿದ್ದರು ಅನ್ನೋ ಅನುಮಾನವೂ ಕಾಡಲು ಆರಂಭಿಸಿದೆ.
state Feb 22, 2023, 11:18 PM IST
ನಿರೀಕ್ಷೆಯಂತೆಯೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಐಪಿಎಸ್ ಅಧಿಕಾರಿ ಡಿ ರೂಪಾ ವಿರುದ್ಧ ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದಾರೆ. ವಕೀಲ ಸಿವಿ ನಾಗೇಶ್ ಅವರ ಮೂಲಕ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.
state Feb 22, 2023, 8:50 PM IST
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಕೋರ್ಟ್ ಮೆಟ್ಟಿಲೇರಿದ್ದು, ಡಿ. ರೂಪಾ ಹಾಗೂ ಮಾಧ್ಯಮಗಳ ವಿರುದ್ಧ ತಮ್ಮ ಬಗ್ಗೆ ಯಾವುದೇ ವಿಷಯಗಳನ್ನು ಮುನ್ನೆಲೆಗೆ ತರದಂತೆ ತಡೆಯಾಜ್ಞೆ ಹೊರಡಿಸುವಂತೆ ಮನವಿ ಮಾಡಿದ್ದಾರೆ.
state Feb 22, 2023, 4:17 PM IST
ರೋಹಿಣಿ ಸಿಂಧೂರಿ ಹೆಸರೇಳದೇ, ಅವರಿಂದ ಕರ್ನಾಟಕದಲ್ಲಿ ಐಎಎಸ್, ತಮಿಳುನಾಡಿನಲ್ಲಿ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಒಂದು ಐಪಿಎಸ್ ದಂಪತಿ ಜೋಡಿ ವಿಚ್ಛೇದನ ಪಡೆದಿದ್ದಾರೆ ಎಂದು ಐಪಿಎಸ್ ಡಿ.ರೂಪಾ ಆರೋಪಿಸಿದ್ದಾರೆ.
state Feb 22, 2023, 1:35 PM IST
ಡಿ. ರೂಪಾ ಮತ್ತು ರೋಹಿಣಿ ಸಿಂಧೂರಿ ನಡುವಿನ ಸಮರ ಸರ್ಕಾರಕ್ಕೆ ಮುಜುಗರ ತಂದಿದ್ದು, ಅದರ ಹಿಂದಿನ ಕತೆ ಬೇರೆ ಇದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
Mixed bag Feb 22, 2023, 1:23 PM IST
ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಆಡಿಯೋ ಬಾಂಬ್ ಬಗ್ಗೆ ಐಪಿಎಸ್ ಅಧಿಕಾರಿ ಡಿ. ರೂಪಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
state Feb 22, 2023, 11:28 AM IST
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಟಾಕ್ ವಾರ್ ಮುಂದುವರಿದಿದ್ದು, ರೋಹಿಣಿ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದಾರೆ.
Karnataka Districts Feb 22, 2023, 9:44 AM IST
ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ನಡುವೆ ವೈಯಕ್ತಿಕ ವಿಚಾರದಲ್ಲಿ ವಾಕ್ಸಮರ ನಡೆಯುತ್ತಿತ್ತು. ಮಂಗಳವಾರ ಸರ್ಕಾರ ಇದಕ್ಕೆ ಫುಲ್ ಸ್ಟಾಪ್ ನೀಡಿದ್ದು ಇವರಿಬ್ಬರೊಂದಿಗೆ ರೂಪಾ ಅವರ ಪತಿ ಮನೀಷ್ ಮೌದ್ಗೀಲ್ ಅವರಿಗೂ ವರ್ಗಾವಣೆ ಶಿಕ್ಷೆ ನೀಡಿದೆ.
state Feb 21, 2023, 11:21 PM IST