ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ಸದಸ್ಯರಾದ ಸುನಿಲ್ ಕುಮಾರ್ ಸೇರಿದಂತೆ ಇತರೆ ಸದಸ್ಯರು ಹಕ್ಕುಚ್ಯುತಿ ಪ್ರಸ್ತಾವನೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಸರ್ಕಾರ ವಾಪಸ್ ತೆಗೆದುಕೊಂಡರೆ, ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಿದೆ ಎಂದು ಕಿಡಿಕಾರಿದರು. ಕೊನೆಗೆ ಸಭಾಧ್ಯಕ್ಷರು ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲು ಅನುಮತಿ ನೀಡಿದರು. ಇದರಿಂದ ತಾತ್ಕಾಲಿಕವಾಗಿ ಬಿಜೆಪಿ ಸದಸ್ಯರು ಧರಣಿ ಹಿಂಪಡೆದರು.
Politics Dec 6, 2023, 6:17 AM IST
‘ವಿವಿಧ ಮದ್ಯದಂಗಡಿ ಪರವಾನಗಿ ನೀಡುವಾಗ ಮೀಸಲಾತಿ ಪಾಲನೆ ಮಾಡಬೇಕು ಎಂಬ ನಿಯಮಗಳಿಲ್ಲ. ಹೀಗಾಗಿಯೇ ಎಸ್ಸಿ ಹಾಗೂ ಎಸ್ಟಿ ಪರವಾನಗಿದಾರರಿಗೆ ಸೇರಿದ ಮದ್ಯದಂಗಡಿಗಳ ಸಂಖ್ಯೆ ತೀರಾ ಕಡಿಮೆ ಇದೆ. ಆದ್ದರಿಂದ ಮದ್ಯದಂಗಡಿ ಪರವಾನಗಿ ನೀಡುವಾಗಲೂ ಮೀಸಲಾತಿ ಪರಿಗಣಿಸಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಅಬಕಾರಿ ಸಚಿವ ಆರ್. ತಿಮ್ಮಾಪುರ ಹೇಳಿದ್ದಾರೆ.
Karnataka Districts Dec 6, 2023, 6:16 AM IST
ಬರ ಪರಿಹಾರ ಕುರಿತ ನಿಲುವಳಿ ಸೂಚನೆ ಮೇಲಿನ ಚರ್ಚೆಯ ವೇಳೆ ವಿಪಕ್ಷ ನಾಯಕ ಅಶೋಕ್ ಅವರು, ಸಿದ್ದರಾಮಯ್ಯ ಅವರು ತಮ್ಮ ಮೊದಲ ಸರ್ಕಾರದಲ್ಲಿ ಇದ್ದಂತೆ ಇಲ್ಲ. ಗರ ಬಡಿದಂತೆ, ಗಾಳಿ ಹೊಡೆದಂತೆ ಆಗಿದ್ದೀರಿ. ಈ ರೀತಿಯ ಸಿದ್ದರಾಮಯ್ಯ ಅವರನ್ನು ನಾವು ನೋಡಿಲ್ಲ. ಜೆಡಿಎಸ್ ನಾಯಕ ರೇವಣ್ಣ ಅವರ ಜೊತೆ ಹೋಗಿ ನಿಮಗೆ ಹಿಡಿದಿರುವ ಗರ ಅಥವಾ ಹೊಡೆದಿರುವ ಗಾಳಿ ದೂರವಾಗಲಿದೆ ಎಂದು ಛೇಡಿಸಿದರು.
Politics Dec 6, 2023, 5:19 AM IST
ಕೊರೋನಾ ಸೇರಿ ವಿವಿಧ ಕಾರಣದಿಂದಾಗಿ 2019-20ರಿಂದ ಸ್ಯಾನಿಟರಿ ನ್ಯಾಪ್ಕಿನ್ ವಿತರಣೆ ಸ್ಥಗಿತಗೊಂಡಿದೆ. ಇದೀಗ ಆ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು, ಜನವರಿಯಿಂದ 19 ಲಕ್ಷ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್ ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
state Dec 5, 2023, 11:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಗೆ ತಡವಾಗಿ ಆಗಮಿಸಿದ್ದರಿಂದ ಬೆಳಗ್ಗೆ 11ರ ಬದಲಾಗಿ 12ಕ್ಕೆ ಸದನವನ್ನು ಸ್ಪೀಕರ್ ಯು.ಟಿ.ಖಾದರ್ ಪ್ರಾರಂಭಿಸಿದರು. ಮೊದಲ ದಿನ ಸಂತಾಪ ಸೂಚನೆ ಬೆಂಬಲಿಸಿ ಮುಖ್ಯಮಂತ್ರಿಗಳು ಮಾತನಾಡಬೇಕಿರುವ ಕಾರಣ ಸದನವನ್ನು ಒಂದು ಗಂಟೆ ತಡವಾಗಿ ಆರಂಭಿಸಲಾಯಿತು.
Politics Dec 5, 2023, 7:38 AM IST
ಬೆಂಗಳೂರು(ಡಿ.05): ಈ ಬಾರಿಯ ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಹೆಚ್ಚಿನ ಚರ್ಚೆಯಾಗಿ, ಪರಿಹಾರ ಕಂಡುಕೊಳ್ಳುವ ಸಲುವಾಗಿ ಅಧಿವೇಶನದ ಎರಡು ಮತ್ತು ಮೂರನೇ ದಿನಗಳನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
Politics Dec 5, 2023, 7:17 AM IST
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಕಲಾಪದ ಮೊದಲ ದಿನ ವಿಧಾನಪರಿಷತ್ತಿನಲ್ಲಿ ನಿಗದಿತ ಸಚಿವರು ಗೈರಾಗಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರು, ಸಭಾನಾಯಕ ಎನ್.ಎಸ್. ಬೋಸರಾಜು ಅವರನ್ನು ತರಾಟೆಗೆ ತೆಗೆದುಕೊಂಡರು.
Politics Dec 5, 2023, 6:31 AM IST
ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Politics Dec 5, 2023, 2:00 AM IST
ರಾಜ್ಯದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯ ದಿನಾಂಕವನ್ನು ಸರ್ಕಾರದಿಂದ ಮುಂದೂಡಿಕೆ ಮಾಡಲಾಗಿದ್ದು, ಶೀಘ್ರವೇ ದಿನಾಂಕ ಪ್ರಕಟಿಸಲಾಗುವುದು.
State Govt Jobs Dec 4, 2023, 7:34 PM IST
ಮೂರು ಹೃದಯ ಭಾಗದ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಒಂದು ದಿನದ ನಂತರ ಲೋಕಸಭೆಯಲ್ಲಿ ಮೂರನೇ ಬಾರಿ ಮೋದಿ ಸರ್ಕಾರ ಹಾಗೂ ಮತ್ತೆ ಮತ್ತೆ ಮೋದಿ ಸರ್ಕಾರ ಎಂಬ ಘೋಷಣೆಗಳು ಪ್ರತಿಧ್ವನಿಸಿದೆ.
India Dec 4, 2023, 1:05 PM IST
ಕೇಂದ್ರದ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಡುವಣ ವಾಕ್ಸಮರಕ್ಕೆ ಕಾರಣವಾಗಲಿದೆ ಎಂದು ನಿರೀಕ್ಷಿಸಲಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇಂದು ಚಾಲನೆ ಸಿಗಲಿದೆ.
India Dec 4, 2023, 5:53 AM IST
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನದಲ್ಲಿ ದೇಶದ ಮೊದಲ ಪ್ರಧಾನಿ ನೆಹರು ಫೋಟೋ ಅಳವಡಿಕೆ ಮಾಡಲಾಗುತ್ತದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು.
state Dec 3, 2023, 4:38 PM IST
ಕೇಂದ್ರದ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಡುವಣ ವಾಕ್ಸಮರಕ್ಕೆ ಕಾರಣವಾಗಲಿದೆ ಎಂದು ನಿರೀಕ್ಷಿಸಲಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಡಿ.4ರ ಸೋಮವಾರ ಚಾಲನೆ ಸಿಗಲಿದೆ.
India Dec 3, 2023, 8:40 AM IST
ರಾಜ್ಯದ ಪರ್ಯಾಯ ಶಕ್ತಿ ಕೇಂದ್ರ ಸುವರ್ಣ ವಿಧಾನಸೌಧದಲ್ಲಿ ಡಿ. 4 ರಿಂದ 15ರವರೆಗೆ ವಿಧಾನಮಂಡಳ ಅಧಿವೇಶನ ನಡೆಯಲಿದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ನೇತೃತ್ವದ ಹೊಸ ಸರ್ಕಾರದ ಬೆಳಗಾವಿ ಮೊದಲ ಅಧಿವೇಶನ ಇದಾಗಿದೆ.
Karnataka Districts Dec 3, 2023, 2:00 AM IST
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಜಾರಿಗೊಳಿಸಿ ಬಳಿಕ ಅದನ್ನು ವಾಪಸ್ ಪಡೆದಿದೆ. ಆದರೆ, ಹಿಂದಿನ ಬಿಜೆಪಿ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿತ್ತು. ಈ ವೇಳೆ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೇ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದರು. ಆದರೆ, ಈಗ ಕೃಷಿ ಕಾಯ್ದೆಯನ್ನು ವಾಪಸ್ ಪಡೆದಿಲ್ಲ. ರೈತರ ದಿಕ್ಕು ತಪ್ಪಿಸುವ ಹುನ್ನಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕೋಡಿಹಳ್ಳಿ ಚಂದ್ರಶೇಖರ
Karnataka Districts Dec 3, 2023, 12:00 AM IST