ನಾನು ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.
Karnataka Districts Sep 8, 2024, 6:28 PM IST
ಶಾಶ್ವತ ಕಲ್ಯಾಣಿಗಳು ಇಲ್ಲದ ಕೆರೆ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿಗಳನ್ನು ನಿರ್ಮಿಸಲಾಗಿದೆ. ನಗರದಲ್ಲಿ ಗಣೇಶ ಚತುರ್ಥಿಗೆ ಮಾರಾಟಕ್ಕಾಗಿ ಸಿದ್ದವಾಗಿರುವ ಮಣ್ಣಿನ ಗಣೇಶ ಮೂರ್ತಿಗಳು, ಜತೆಗೆ, ನಗರದ ಪ್ರಮುಖ ದೇವಸ್ಥಾನ, ಜಂಕ್ಷನ್, ಮುಖ್ಯ ರಸ್ತೆ ಸೇರಿದಂತೆ ವಿವಿಧ ಭಾಗದಲ್ಲಿ ಪ್ರತಿ ವಾರ್ಡ್ 3ರಿಂದ ಕಿರಂತೆ ಒಟ್ಟು 462 ಸ್ಥಳದಲ್ಲಿ ತಾತ್ಕಾಲಿಕ ಮೊಬೈಲ್ ಟ್ಯಾಂಕರ್ ವ್ಯವಸ್ಥೆ ಮಾಡಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ ಮಾಡಲಾಗಿದೆ. ಈ ವಿವರಗಳನ್ನೂ ಬಿಬಿಎಂಪಿ ನೀಡಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ.
Karnataka Districts Sep 6, 2024, 11:49 AM IST
ಬಿಬಿಎಂಪಿ ಗುತ್ತಿಗೆದಾರರು ಬಾಕಿ ಬಿಲ್ ಪಾವತಿಯಾಗುವವರೆಗೂ ಯಾವುದೇ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ 15 ದಿನಗಳ ಒಳಗೆ ಬೆಂಗಳೂರಿನ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಬೇಕು ಎಂದು ಡೆಡ್‌ಲೈನ್ ನೀಡಿದ್ದಾರೆ.
Politics Sep 2, 2024, 12:35 PM IST
ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ, ಬೆಂಗಳೂರಿನಲ್ಲಿ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣೇಶ ಮೂರ್ತಿಗಳು ಮಾರಾಟವಾಗುತ್ತಿವೆ. ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳ ಜೊತೆಗೆ ಪಿಓಪಿ ಮೂರ್ತಿಗಳು ಸಹ ಮಾರಾಟವಾಗುತ್ತಿದ್ದು, ಅಧಿಕಾರಿಗಳ ಎಚ್ಚರಿಕೆಯನ್ನು ನಿರ್ಲಕ್ಷಿಸಲಾಗುತ್ತಿದೆ.
Festivals Sep 2, 2024, 12:12 PM IST
ಬೆಂಗಳೂರಿನಲ್ಲಿ ಪರಿಸರಕ್ಕೆ ಹಾನಿಕರ ವಸ್ತುಗಳಿಂದ ಗಣೇಶ ಮೂರ್ತಿ ತಯಾರಿಸುವವರ ವಿರುದ್ಧ ಬಿಬಿಎಂಪಿ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದೆ. ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಲು ಸೂಚಿಸಲಾಗಿದೆ.
Karnataka Districts Sep 1, 2024, 12:41 PM IST
ರಾಜಧಾನಿ ಬೆಂಗಳೂರಿನಲ್ಲಿರುವ ಟೆಲಿಕಾಂ ಟವರ್‌ಗಳಿಗೆ ವಾರ್ಷಿಕ 12 ಸಾವಿರ ರು. ಶುಲ್ಕ ವಿಧಿಸಿ ವಸೂಲಿಗೆ ಬಿಬಿಎಂಪಿ ಕಂದಾಯ ವಿಭಾಗ ಮುಂದಾಗಿದೆ. ಕಳೆದ ಒಂದೂವರೆ ದಶಕದಿಂದ ಬಿಬಿಎಂಪಿಯು ನಗರದಲ್ಲಿರುವ ಟವರ್‌ಗಳಿಗೆ ಶುಲ್ಕ ವಿಧಿಸುವುದಕ್ಕೆ ಪ್ರಯತ್ನ ಮಾಡುತ್ತಿದೆ.
Karnataka Districts Sep 1, 2024, 10:58 AM IST
ಬೆಂಗಳೂರಿನಲ್ಲಿ ಬೀದಿನಾಯಿಗಳ ದಾಳಿ ಮುಂದುವರೆದಿದ್ದು, ಜಾಲಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ 76 ವರ್ಷದ ವೃದ್ಧೆಯೊಬ್ಬರು ಬೀದಿನಾಯಿಗಳ ದಾಳಿಗೆ ಬಲಿಯಾಗಿದ್ದಾರೆ.
Karnataka Districts Aug 28, 2024, 8:42 PM IST
ಬೆಂಗಳೂರಿನ ಎರಡನೇ ಅತಿ ಉದ್ದದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ಟೆಂಡರ್ ಪಡೆದ ಕಂಪನಿಯು ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆ ರದ್ದು ಪಡಿಸುವುದಕ್ಕೆ ಬಿಬಿಎಂಪಿ ಚಿಂತನೆ ನಡೆಸುತ್ತಿದೆ.
Karnataka Districts Aug 28, 2024, 1:49 PM IST
ಡೆಂಗ್ಯೂ, ಮಲೇರಿಯಾ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಹೊಸ ಪ್ರಯೋಗ. ಈಡಿಸ್ ಸೊಳ್ಳೆಗಳನ್ನು ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ. ಗೋಪಾಲಪುರದಲ್ಲಿ ಪ್ರಾಯೋಗಿಕ ಅನುಷ್ಠಾನ, ಉತ್ತಮ ಫಲಿತಾಂಶದ ಮೇಲೆ ರಾಜ್ಯಾದ್ಯಂತ ವಿಸ್ತರಣೆಯ ಯೋಜನೆ.
Karnataka Districts Aug 26, 2024, 1:59 PM IST
ದೆಹಲಿಯಂತೆಯೇ ರಾಜಧಾನಿ ಬೆಂಗಳೂರಿನ ವಿಜಯನಗರದಲ್ಲಿ ಪಾಲಿಕೆ ಬಜಾರ್ ನಿರ್ಮಾಣಗೊಂಡಿದೆ. ಭಾನುವಾರ ಉದ್ಘಾಟನೆಯಾಗಲಿದೆ. ಇದು ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರ ಕನಸಿನ ಯೋಜನೆ.
Karnataka Districts Aug 25, 2024, 5:19 PM IST
ಬೆಂಗಳೂರಿನಲ್ಲಿ ಶಾಂತಿಯುತ ಗಣೇಶ ಹಬ್ಬ ಆಚರಣೆ ಮಾಡಬೇಕು. ಈ ವೇಳೆ ರೌಡಿ ಶೀಟರ್‌ಗಳ ಮೇಲೂ ಹದ್ದಿನ ಕಣ್ಣಿಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
Karnataka Districts Aug 21, 2024, 7:01 PM IST
ಬೆಂಗಳೂರು ನಗರದಲ್ಲಿ ಗಣೇಶ ಕೂರಿಸಲು ಅನುಮತಿ ಪಡೆಯುವುದಕ್ಕೆ ಬಿಬಿಎಂಪಿ ವತಿಯಿಂದ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಪದ್ದತಿ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
Festivals Aug 21, 2024, 6:17 PM IST
Tree Fall On Auto In Vijayanagar ಬಿಬಿಎಂಪಿ ಹಾಗೂ ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಬಡಪಾಯಿ ಆಟೋ ಡ್ರೈವರ್ ಬಲಿಯಾಗಿದ್ದಾನೆ. ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಅದೇ ದಿನ ಸೂತಕದ ವಾತಾವರಣ ನಿರ್ಮಾಣವಾಗಿದೆ.
Karnataka Districts Aug 17, 2024, 9:23 AM IST
ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಬಿಬಿಎಂಪಿ ಅಥವಾ ಬಿಎಂಆರ್‌ಸಿಎಲ್ (ನಮ್ಮ ಮೆಟ್ರೋ) ಯಾರಾದರೂ ಆಗಲಿ ದಯವಿಟ್ಟು ಗುಂಡಿ ಮುಚ್ಚುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಪರಿಹಾರ ಮಾಡುವಂತೆ ಕೋರಿದ ಸಚಿವ ಕೃಷ್ಣ ಬೈರೇಗೌಡ
Karnataka Districts Aug 16, 2024, 5:52 AM IST
ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ವೃದ್ಧೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Karnataka Districts Aug 13, 2024, 9:53 AM IST