ಕಳಸಾ ಬಂಡೂರಿ ಯೋಜನೆ ಪೂರ್ಣಗೊಳ್ಳಲು ಇದ್ದ ಕಾನೂನು ಅಡೆತಡೆಗಳೆಲ್ಲ ನಿವಾರಣೆಯಾದರೂ ಕಾಮಗಾರಿ ಮುಗಿಸಿ ಯೋಜನೆ ಪೂರ್ಣಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಯನ್ನು ಕಡೆಗಣಿಸುತ್ತಿವೆ ಎಂದು ಮಹಾದಾಯಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka Districts Jun 25, 2020, 7:22 AM IST
ಕೊರೋನಾ ಸಂಕಷ್ಟದಿಂದ ತತ್ತರಿಸಿದ ರೈತರಿಗೆ ಸರ್ಕಾರ ಆಸರೆಯಾಗಬೇಕು ಎಂದು ಕಳಸಾ ಬಂಡೂರಿ ಕೇಂದ್ರ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಹೇಳಿದ್ದಾರೆ.
Karnataka Districts May 13, 2020, 8:27 AM IST
ರೈತ ಸಮುದಾಯದ ಬಹು ದಿನಗಳ ಬೇಡಿಕೆಯಾದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳಲ್ಲಿ ಹರಿಯುವ ನೀರಿನಲ್ಲಿ ನಮಗೆ ಸಂಪೂರ್ಣ ನೀರು ಸಿಗದಿರುವುದು ತೃಪ್ತಿ ತಂದಿಲ್ಲವೆಂದು ಮಾಜಿ ಸಚಿವ ಬಿ.ಆರ್. ಯಾವಗಲ್ ಹೇಳಿದ್ದಾರೆ.
Karnataka Districts Feb 29, 2020, 8:36 AM IST
ಮಹದಾಯಿ ವಿಷಯಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ಆದೇಶ ನೀಡಿ ಒಂದು ವಾರದೊಳಗೆ ನೋಟಿಫಿಕೇಶನ್ ಹೊರಡಿಸಿದ್ದೇವೆ. ಇದೀಗ ರಾಜ್ಯ ಸರ್ಕಾರ ಈ ಬಜೆಟ್‌ನಲ್ಲಿ ಇದಕ್ಕೆ 500 ಕೋಟಿ ಮೀಸಲಿಟ್ಟು, ಕಾಮಗಾರಿ ಪ್ರಾರಂಭಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
Karnataka Districts Feb 29, 2020, 7:36 AM IST
ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಮಹದಾಯಿ ನೀರು ಬಳಕೆಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫೀಕೇಶನ್ ಹೊರಡಿಸಿರುವುದು ಉತ್ತರ ಕರ್ನಾಟಕದ ಬಹು ದಿನಗಳ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಹೇಳಿದ್ದಾರೆ.
Karnataka Districts Feb 28, 2020, 9:02 AM IST
ಮಹದಾಯಿ ಹೋರಾಟಗಾರರು ನಿರಂತರ ಹೋರಾಟ ಮಾಡಿದರೂ ಸರ್ಕಾರಗಳು ಯೋಜನೆ ಜಾರಿ ಮಾಡದ್ದಕ್ಕೆ ನಾವು ದಯಾಮರಣ ಅರ್ಜಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದು, ಆದರೆ ಸದ್ಯ, ಸುಪ್ರೀಂ ಕೋರ್ಟ್ ನೀರು ಬಳಕೆಗೆ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದರಿಂದ ನಾವು ದಯಾಮರಣದ ಅರ್ಜಿಯನ್ನು ಹಿಂದಕ್ಕೆ ಪಡೆಯುತ್ತೇವೆ ಎಂದು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಶ್ರೀಗಳು ಹೇಳಿದ್ದಾರೆ.
Karnataka Districts Feb 22, 2020, 1:02 PM IST
ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಳಸಾ ಬಂಡೂರಿ ಯೋಜನೆ ಸಮಸ್ಯೆ ಬಗೆ ಹರಿದಿರುವುದು ಸಂತಸ ತಂದಿದೆ. ಈ ಬಜೆಟ್‌ನಲ್ಲಿ ಅದಕ್ಕೆ ಹಣ ತೆಗೆದಿಟ್ಟು ಆದಷ್ಟು ಬೇಗ ನೀರಾವರಿ ಯೋಜನೆ ಚಾಲನೆ ಮಾಡುವುದು ನನ್ನ ಮೊದಲ ಆದ್ಯತೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
Karnataka Districts Feb 21, 2020, 12:29 PM IST
ಮಹದಾಯಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಉತ್ತರ ಕರ್ನಾಟಕ ಭಾಗದ ಸಂಸದರಿಗೆ ಹಣ ಕೊಟ್ಟಿದ್ದೇವೆ. ಆದರೆ ಹಣ ಪಡೆದುಕೊಂಡಿರುವ ಸಂಸದರು ಕೆಲಸ ಮಾಡಿ ಕೊಡದೇ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ‘ಕರ್ನಾಟಕ ರೈತ ಸೇನೆ’ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಆರೋಪಿಸಿದ್ದಾರೆ.
Karnataka Districts Feb 19, 2020, 7:23 AM IST
ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮಧ್ಯಸ್ಥಿಕೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಮತ್ತೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಸಿದ್ದು ತೇಜಿ ಆಗ್ರಹಿಸಿದ್ದಾರೆ.
Karnataka Districts Feb 16, 2020, 7:35 AM IST
ಜಲಸಂಪನ್ಮೂಲ ಖಾತೆಯನ್ನು ಪಟ್ಟು ಹಿಡಿದು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ರಮೇಶ ಜಾರಕಿಹೊಳಿ ಅವರು ತಮ್ಮ ತವರು ಜಿಲ್ಲೆ ಮತ್ತು ಉತ್ತರ ಕರ್ನಾಟಕದ ಭಾಗದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿನ ತಾಂತ್ರಿಕ ಅಡಚಣೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಾರಾ ಎಂದು ಈ ಭಾಗದ ಜನರು ಎದುರು ನೋಡುತ್ತಿದ್ದಾರೆ.
Karnataka Districts Feb 15, 2020, 2:24 PM IST
ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರರು ಮತ್ತೆ ಹೋರಾಟಕ್ಕಿಳಿದಿದ್ದಾರೆ. ರೈತ ಬೆಳೆದ ಬೆಳೆಗೆ ಬೆಂಬಲ ಬೆಲೆ ಹಾಗೂ ಮಾಹಾದಾಯಿ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ಹೋರಾಟಗಾರರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
Karnataka Districts Jan 27, 2020, 1:18 PM IST
ಮಹದಾಯಿ ನೀರಿಗಾಗಿ 4 ವರ್ಷಗಳಿಂದ ಬಿಸಿಲು, ಮಳೆ ಲೆಕ್ಕಿಸದೇ ರೈತರಿಂದ ನಿರಂತರ ಹೋರಾಟ| ಮಹದಾಯಿ ಹೋರಾಟ ವೇದಿಕೆಯಲ್ಲಿ ರೈತ ಸೇನಾ ಸಂಘಟನೆ ತಾಲೂಕು ಉಪಾಧ್ಯಕ್ಷ ನಾಯ್ಕರ ಹೇಳಿಕೆ| ಹೋರಾಟಗಾರರಿಗೆ ಎಷ್ಟೇ ತೊಂದರೆ ನೀಡಿದರೂ ಸಹ ನಮ್ಮ ಹೋರಾಟ ನಿಲ್ಲುವುದಿಲ್ಲ|
Karnataka Districts Jan 27, 2020, 7:37 AM IST
ತಾಲೂಕಿನ ರೈತರು 2018ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಮಾಡಿಕೊಂಡ ರೈತ ಸಮುದಾಯಕ್ಕೆ ಸರ್ಕಾರ ಸರಿಯಾಗಿ ಬೆಳೆ ಹಾನಿ ಪರಿಹಾರ ವಿತರಣೆ ಮಾಡಬೇಕು ಎಂದು ರೈತ ಸೇನೆ ಸದಸ್ಯ ಶಿವಪ್ಪ ಹುರಳಿ ಆಗ್ರಹಿಸಿದ್ದಾರೆ.
Karnataka Districts Jan 25, 2020, 7:36 AM IST
ರಾಜ್ಯದಲ್ಲಿ ನಾಲ್ಕೈದು ವರ್ಷದಿಂದ ಸರಿಯಾಗಿ ಬೆಳೆ ಬಂದಿಲ್ಲ. ಹೀಗಾಗಿ ಸರ್ಕಾರ ರೈತರ ಕೃಷಿಗೆ ಪಡೆದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಕಳಸಾ ಬಂಡೂರಿ ಕೇಂದ್ರ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಆಗ್ರಹಿಸಿದ್ದಾರೆ.
Karnataka Districts Jan 23, 2020, 7:36 AM IST
ಮಹದಾಯಿ ನೀರು ಪಡೆದುಕೊಳ್ಳಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಸಿರುವ ಕಾನೂನು ಹೋರಾಟ ನಿಧಾನಗತಿಯಲ್ಲಿ ಸಾಗಿದ್ದು, ಈ ಕುರಿತು ಸುಪ್ರೀಂ ಕೋರ್ಟ್‌ಗೆ ಈಗಾಗಲೇ ಪಿಐಎಲ್ ಸಲ್ಲಿಸಿದ್ದು, ಇಲ್ಲಿ ನಮಗೆ ನ್ಯಾಯ ಸಿಗದಿದ್ದರೆ ಮತ್ತೊಮ್ಮೆ ರಾಷ್ಟ್ರಪತಿಗಳಿಗೆ ದಯಾಮರಣ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಶ್ರೀಗಳು ತಿಳಿಸಿದ್ದಾರೆ.
Karnataka Districts Jan 22, 2020, 7:23 AM IST