ಟೆಸ್ಟ್ ಕ್ರಿಕೆಟ್ ಅನ್ನ ಮತ್ತಷ್ಟು ಫೇಮಸ್ ಮಾಡಲು ಡೇ & ನೈಟ್ ಟೆಸ್ಟ್ ಅನ್ನ ಐಸಿಸಿ ಆಯೋಜಿಸುತ್ತಿದೆ. 2015ರಲ್ಲಿ ಮೊದಲ ಬಾರಿಗೆ ಈ ಪಿಂಕ್ ಬಾಲ್ ಟೆಸ್ಟ್ ಅನ್ನ ಆಡಿಸಲಾಯ್ತು. ಆದ್ರೂ 2015ರಿಂದ 2023ರವರೆಗೆ ಅಂದ್ರೆ ಈ 9 ವರ್ಷದಲ್ಲಿ ನಡೆದಿರುವುದು ಕೇವಲ 21 ಡೇ & ನೈಟ್ ಟೆಸ್ಟ್ಗಳು ಮಾತ್ರ.
Cricket Dec 13, 2023, 4:13 PM IST
India Jul 3, 2022, 6:53 PM IST
ಐಸಿಸಿಯು ಯಾವುದೇ ಪಿಚ್ ಕಳಪೆ ಮಟ್ಟದ್ದಾಗಿದ್ದರೆ 3 ಹಾಗೂ ಆಟಕ್ಕೆ ಯೋಗ್ಯವಲ್ಲದ ಪಿಚ್ಗೆ 5 ಋುಣಾತ್ಮಕ ಅಂಕ ನೀಡುತ್ತದೆ. 5 ವರ್ಷಗಳೊಳಗೆ 5 ಋುಣಾತ್ಮಕ ಅಂಕ ಪಡೆಯುವ ಪಿಚ್ಗಳಲ್ಲಿ 1 ವರ್ಷಗಳ ಕಾಲ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ನಡೆಸುವುದಿಲ್ಲ. ಇದೀಗ 1 ಋುಣಾತ್ಮಕ ಅಂಕ ಗಳಿಸಿರುವ ಕೆಎಸ್ಸಿಎ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಪಿಚ್ ಸಿದ್ಧಪಡಿಸುವಾಗ ಬಹಳ ಎಚ್ಚರಿಕೆ ವಹಿಸಬೇಕಿದೆ.
Cricket Mar 21, 2022, 8:13 AM IST
ಬೆಂಗಳೂರಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 30 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಇನ್ನು ಎರಡನೇ ಇನಿಂಗ್ಸ್ನಲ್ಲಿ ಅಶ್ವಿನ್ 55 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ಒಟ್ಟು 6 ವಿಕೆಟ್ಗಳನ್ನು ತಮ್ಮ ಖಾತೆಗೆ ಜಮಾ ಮಾಡಿಕೊಂಡಿದ್ದರು. ಇದರ ಜತೆಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 100 ವಿಕೆಟ್ ಕಬಳಿಸಿದ ಜಗತ್ತಿನ ಮೊದಲ ಬೌಲರ್ ಎನ್ನುವ ಕೀರ್ತಿಗೆ ಅಶ್ವಿನ್ ಪಾತ್ರರಾಗಿದ್ದಾರೆ.
Cricket Mar 15, 2022, 1:00 PM IST
100 ರು. ಟಿಕೆಟ್ ಪಡೆದಿದ್ದವರು ಗೇಟ್ ನಂ.2, 500 ರು., ಟಿಕೆಟ್ ಪಡೆದಿದ್ದವರು ಗೇಟ್ ನಂ.19, 750 ರು., ಹಾಗೂ ಅದಕ್ಕಿಂತ ಹೆಚ್ಚಿನ ಮೊತ್ತದ ಟಿಕೆಟ್ ಖರೀದಿಸಿದ್ದವರು ಗೇಟ್ ನಂ.18ರ ಬಳಿ ಇರುವ ಕೌಂಟರ್ಗಳಿಗೆ ತೆರಳಿ ಮೂಲ ಟಿಕೆಟ್ ಹಿಂದಿರುಗಿಸಿ ಹಣ ವಾಪಸ್ ಪಡೆಯಬಹುದು ಎಂದು ಕೆಎಸ್ಸಿಎ ಪ್ರಕಟಣೆ ತಿಳಿಸಿದೆ.
Cricket Mar 15, 2022, 9:43 AM IST
ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸವಾಲಿನ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು ಮೂರನೇ ದಿನದಾಟವನ್ನು ಎಚ್ಚರಿಕೆಯಿಂದ ಆರಂಭಿಸಿತಾದರೂ, ಚಹಾ ವಿರಾಮದ ಬಳಿಕ ಟೀಂ ಇಂಡಿಯಾ ಮಾರಕ ದಾಳಿಯನ್ನು ಸಂಘಟಿಸುವ ಮೂಲಕ ಲಂಕಾ ಪಡೆಯನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಶ್ರೀಲಂಕಾ ತಂಡದ ಪರ ನಾಯಕ ದೀಮುತ್ ಕರುಣರತ್ನೆ ಆಕರ್ಷಕ ಶತಕ ಬಾರಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
Cricket Mar 14, 2022, 6:01 PM IST
ಈ ನಾಲ್ವರು ಕ್ರಿಕೆಟ್ ಅಭಿಮಾನಿಗಳ ಮೇಲೆ ಕಬ್ಬನ್ ಪಾರ್ಕ್ ಪೊಲೀಸರು, ಮೈದಾನಕ್ಕೆ ಅತಿಕ್ರಮ ಪ್ರವೇಶ ಹಾಗೂ ಭದ್ರತಾ ಶಿಷ್ಟಾಚಾರ ಉಲ್ಲಂಘಿಸಿದ ಆಧಾರದಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಭಾನುವಾರ ರಾತ್ರಿ ಸುಮಾರು 10.15ರ ವೇಳೆ ನೋಡ ನೋಡುತ್ತಿದ್ದಂತೆಯೇ, ಎಲ್ಲಾ ಭದ್ರತೆಯನ್ನು ಉಲ್ಲಂಘಿಸಿ ವಿರಾಟ್ ಕೊಹ್ಲಿ ಬಳಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮೈದಾನ ಪ್ರವೇಶಿಸಿದ್ದರು.
Cricket Mar 14, 2022, 5:50 PM IST
ಎಂ. ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನದಾಟದಂತ್ಯದ ವೇಳೆಗೆ ಒಂದು ವಿಕೆಟ್ ಕಳೆದುಕೊಂಡು 28 ರನ್ ಬಾರಿಸಿತ್ತು. ಎರಡನೇ ವಿಕೆಟ್ಗೆ ದೀಮುತ್ ಕರುಣರತ್ನೆ ಹಾಗೂ ಕುಸಾಲ್ ಮೆಂಡೀಸ್ 97 ರನ್ಗಳ ಜತೆಯಾಟವಾಡುವ ಮೂಲಕ ಲಂಕಾ ತಂಡಕ್ಕೆ ಉತ್ತಮ ಆರಂಭವನ್ನೇ ಒದಗಿಸಿಕೊಟ್ಟರು.
Cricket Mar 14, 2022, 4:19 PM IST
Cricket Mar 13, 2022, 9:40 PM IST
Cricket Mar 13, 2022, 9:03 PM IST
ಚಿನ್ನಸ್ವಾಮಿ ಮೈದಾನದಲ್ಲಿ ಆರಂಭವಾಗಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಉಭಯ ತಂಡಗಳ 16 ವಿಕೆಟ್ಗಳು ಪತನವಾಗಿದ್ದವು. ಮೊದಲ ದಿನದಾದಂತ್ಯಕ್ಕೆ ಶ್ರೀಲಂಕಾ ತಂಡವು 86 ರನ್ಗಳಿಗೆ 6 ವಿಕೆಟ್ ಕಳೆದುಕೊಂಡಿತ್ತು. ಇನ್ನು ಎರಡನೇ ದಿನದಾಟ ಆರಂಭಿಸಿದ ಲಂಕಾ ತಂಡಕ್ಕೆ ವೇಗಿ ಜಸ್ಪ್ರೀತ್ ಬುಮ್ರಾ ಆರಂಭದಲ್ಲೇ ಶಾಕ್ ನೀಡಿದರು.
Cricket Mar 13, 2022, 2:36 PM IST
ಬಿಸಿಲಿನಲ್ಲಿ ಚೆಂಡು ಹೆಚ್ಚಾಗಿ ಸ್ಪಿನ್ ಆಗುವಾಗ ಭಾರತೀಯರ ಮೇಲೆ ಸವಾರಿ ಮಾಡುವ ಅವಕಾಶವನ್ನು ಕೈಚೆಲ್ಲಿದ ಶ್ರೀಲಂಕಾ ಬೌಲರ್ಗಳು, ಆತಿಥೇಯರಿಗೆ 4.25 ರನ್ರೇಟ್ನಲ್ಲಿ ರನ್ ಕಲೆಹಾಕಲು ಬಿಟ್ಟು ಎಡವಟ್ಟು ಮಾಡಿಕೊಂಡರು. ಶ್ರೇಯಸ್ ಅಯ್ಯರ್ರ ಮನಮೋಹಕ ಬ್ಯಾಟಿಂಗ್ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸಲ್ಲಿ 252 ರನ್ಗೆ ಆಲೌಟ್ ಆಯಿತು.
Cricket Mar 13, 2022, 9:01 AM IST
ಇಲ್ಲಿನ ಎಂ. ಚಿನ್ನಸ್ವಾಮಿ ಮೈದಾನವು ಮೊದಲ ಬಾರಿಗೆ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಒಂದು ಬದಲಾವಣೆಗಳನ್ನು ಮಾಡಲಾಗಿದ್ದು, ಜಯಂತ್ ಯಾದವ್ ಬದಲಿಗೆ ಅಕ್ಷರ್ ಪಟೇಲ್ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.
Cricket Mar 12, 2022, 1:39 PM IST
ಈಗಾಗಲೇ ಮೊಹಾಲಿ ಟೆಸ್ಟ್ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇದೀಗ ಎರಡನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನು ಜಯಿಸುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಲೆಕ್ಕಾಚಾರದಲ್ಲಿದೆ. ಬರೋಬ್ಬರಿ 4 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಕ್ರಿಕೆಟ್ ಅಭಿಮಾನಿಗಳು ರೆಡಿಯಾಗಿದ್ದಾರೆ.
Cricket Mar 12, 2022, 11:14 AM IST
ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳ ನಡುವಿನ ಪಿಂಕ್ ಬಾಲ್ ಟೆಸ್ಟ್ (Pink Ball Test) ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಸಾಕ್ಷಿಯಾಗಲಿದೆ. ಈಗಾಗಲೇ ಮೊಹಾಲಿ ಟೆಸ್ಟ್ ಪಂದ್ಯವನ್ನು ಜಯಿಸುವ ಮೂಲಕ ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಇದೀಗ ಸರಣಿ ಕ್ಲೀನ್ ಸ್ವೀಪ್ ಮಾಡುವತ್ತ ಚಿತ್ತ ನೆಟ್ಟಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ಹಲವು ಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಲಿದೆ.
Cricket Mar 12, 2022, 8:52 AM IST