Team India  

(Search results - 5133)
 • Ravi Shastri hints stepping down as Team India head coach after ICC T20 World Cup kvn

  CricketSep 19, 2021, 10:36 AM IST

  ಟಿ20 ವಿಶ್ವಕಪ್‌ ಬಳಿಕ ಟೀಂ ಇಂಡಿಯಾ ಕೋಚ್‌ ಹುದ್ದೆಗೆ ರವಿಶಾಸ್ತ್ರಿ ಗುಡ್‌ಬೈ

  ಇದು ನನ್ನ ನಾಲ್ಕು ದಶಕದ ಕ್ರಿಕೆಟ್‌ ಬದುಕಿನಲ್ಲಿ ಅತ್ಯಂತ ತೃಪ್ತಿಕರ ಕ್ಷಣ. ಆದರೆ ಅಗತ್ಯಕ್ಕಿಂತ ಹೆಚ್ಚಾಗಿ ನೀವು ಇಲ್ಲಿರಬಾರದು. ಹುದ್ದೆ ತೊರೆಯುವುದರಲ್ಲಿ ಬೇಸರವಿದೆ. ಯಾಕೆಂದರೆ ನಾನು ಶ್ರೇಷ್ಠ ಆಟಗಾರರ ಜೊತೆ ಕೆಲಸ ನಿರ್ವಹಿಸಿದ್ದೇನೆ. ಡ್ರೆಸ್ಸಿಂಗ್‌ ರೂಮಿನಲ್ಲಿ ಉತ್ತಮ ಸಮಯ ಕಳೆದಿದ್ದೇವೆ ಎಂದು ಹೇಳಿದರು.
   

 • BCCI may approach Anil Kumble VVS Laxman For Team India Head Coach Post kvn

  CricketSep 18, 2021, 4:27 PM IST

  ಟೀಂ ಇಂಡಿಯಾ ಕೋಚ್‌ ಮತ್ತೆ ಕನ್ನಡಿಗ ಕುಂಬ್ಳೆಗೆ ಮಣೆ ಹಾಕುತ್ತಾ ಬಿಸಿಸಿಐ..?

  ಸಚಿನ್‌ ತೆಂಡುಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್‌ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿಯ ಶಿಫಾರಸಿನಂತೆ 2016-17ರ ಅವಧಿಯಲ್ಲಿ ಅನಿಲ್‌ ಕುಂಬ್ಳೆ ಟೀಂ ಇಂಡಿಯಾ ಪ್ರಧಾನ ಕೋಚ್‌ ಆಗಿ ಕಾರ್ಯ ನಿರ್ವಹಿಸಿದ್ದರು.

 • Virat Kohli asked BCCI To remove Rohit Sharma as Vice Captain Says Report kvn

  CricketSep 18, 2021, 12:16 PM IST

  ರೋಹಿತ್‌ಗೆ ಉಪನಾಯಕತ್ವ ಬೇಡ: ಕೊಹ್ಲಿ ಬೇಡಿಕೆ..! ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿ ಇಲ್ವಾ..?

  ನವದೆಹಲಿ: ಭಾರತ ಏಕದಿನ ತಂಡದ ಉಪನಾಯಕನ ಸ್ಥಾನದಿಂದ ರೋಹಿತ್‌ ಶರ್ಮಾ ಅವರನ್ನು ಕೈಬಿಡುವಂತೆ ಬಿಸಿಸಿಐ ಆಯ್ಕೆ ಸಮಿತಿ ಮುಂದೆ ನಾಯಕ ವಿರಾಟ್‌ ಕೊಹ್ಲಿ ಪ್ರಸ್ತಾಪವಿರಿಸಿದ್ದಾರೆ ಎನ್ನುವ ಕುತೂಹಲಕಾರಿ ಬೆಳವಣಿಗೆಯೊಂದನ್ನು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಈ ವರದಿ ಭಾರತೀಯ ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಸಂಚಲನವನ್ನು ಹುಟ್ಟುಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

 • Team India T20 Cricket vice captaincy KL Rahul Rishabh Pant and Jasprit Bumrah in the fray kvn

  CricketSep 18, 2021, 11:34 AM IST

  ಟೀಂ ಇಂಡಿಯಾ ಟಿ20 ಉಪನಾಯಕತ್ವಕ್ಕೆ ಮೂವರು ಕ್ರಿಕೆಟಿಗರ ಪೈಪೋಟಿ..!

  ಉಪನಾಯಕನ ಸ್ಥಾನಕ್ಕೆ ಪ್ರಮುಖವಾಗಿ ಮೂವರು ಆಟಗಾರರ ಹೆಸರು ಕೇಳಿಬರುತ್ತಿದೆ. ಕೆ.ಎಲ್‌.ರಾಹುಲ್‌ ಹಾಗೂ ರಿಷಭ್‌ ಪಂತ್‌ ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ. ಇಬ್ಬರಿಗೂ ಐಪಿಎಲ್‌ ತಂಡ ಮುನ್ನಡೆಸಿದ ಅನುಭವವಿದೆ.

 • Rohit Sharma KL Rahul and Rishabh Pant are in Line For Team India T20 Captaincy kvn

  CricketSep 17, 2021, 3:55 PM IST

  ಯಾರಾಗಲಿದ್ದಾರೆ ಟೀಂ ಇಂಡಿಯಾ ಮುಂದಿನ ಟಿ20 ಕ್ಯಾಪ್ಟನ್‌..?

  ದುಬೈ: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರವಿಶಾಸ್ತ್ರಿ, ಉಪ ನಾಯಕ ರೋಹಿತ್‌ ಶರ್ಮಾ ಅವರೊಂದಿಗೆ ಚರ್ಚಿಸಿ, ಅವರ ಸಲಹೆ ಪಡೆದು ಟಿ20 ನಾಯಕ ಸ್ಥಾನದಿಂದ ಕೆಳಗಿಳಿಯುವ ಬಗ್ಗೆ ತೀರ್ಮಾನ ಕೈಗೊಂಡಿದ್ದೇನೆ ಎಂದು ವಿರಾಟ್‌ ಹೇಳಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್‌ ಶಾಗೂ ತಮ್ಮ ನಿರ್ಧಾರ ತಿಳಿಸಿರುವುದಾಗಿ ತಿಳಿಸಿದ್ದಾರೆ. ಟೀಂ ಇಂಡಿಯಾ ಮೂವರು ಆಟಗಾರರ ನಡುವೆ ಟಿ20 ನಾಯಕತ್ವಕ್ಕೆ ಸ್ಪರ್ಧೆಯಿದೆ ಎನ್ನಲಾಗುತ್ತಿದೆ. ಇದೀಗ ಟೀಂ ಇಂಡಿಯಾ ಮುಂದಿನ ಟಿ20 ನಾಯಕ ಯಾರಾಗಬಹುದು ಎನ್ನುವ ಚರ್ಚೆಯೂ ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಜೋರಾಗಿದೆ.
   

 • ICC Trophy Drought is the reason behind Virat Kohli T20 Captaincy Step down kvn

  CricketSep 17, 2021, 3:26 PM IST

  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪದತ್ಯಾಗಕ್ಕೆ ಒತ್ತಡವೇ ಕಾರಣವಾಯ್ತಾ..?

  ದುಬೈ: ಯುಎಇಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಪಂದ್ಯಾವಳಿಯ ಬಳಿಕ ಟಿ20 ನಾಯಕ ಸ್ಥಾನದಿಂದ ನಿರ್ಗಮಿಸುವುದಾಗಿ ವಿರಾಟ್‌ ಕೊಹ್ಲಿ ಗುರುವಾರ ಘೋಷಿಸಿದ್ದಾರೆ. ಆದರೆ, ಏಕದಿನ ಮತ್ತು ಟೆಸ್ಟ್‌ ತಂಡದ ನಾಯಕನಾಗಿ ಮುಂದುವರೆಯುವುದಾಗಿ ಇದೇ ವೇಳೆ ತಿಳಿಸಿದ್ದಾರೆ. ಟೀಂ ನಾಯಕನ ಹುದ್ದೆಯಿಂದ ಕೊಹ್ಲಿ ಕಣಕ್ಕಿಳಿಯಲು ಒತ್ತಡವೇ ಕಾರಣವಾಯ್ತಾ ಎನ್ನುವ ಅನುಮಾನ ಆರಂಭವಾಗಿದೆ.
   

 • Indian Cricket Team ODI tour of New Zealand postponed Says Report kvn

  CricketSep 17, 2021, 12:18 PM IST

  ಟೀಂ ಇಂಡಿಯಾದ ನ್ಯೂಜಿಲೆಂಡ್‌ ಪ್ರವಾಸ 2022ಕ್ಕೆ ಮುಂದೂಡಿಕೆ..!

  ಯುಎಇನಲ್ಲಿ ಆಯೋಜನೆಗೊಂಡಿರುವ ಟಿ20 ವಿಶ್ವಕಪ್‌ ಬಳಿಕ, ಐಸಿಸಿ ವಿಶ್ವಕಪ್‌ ಸೂಪರ್‌ ಲೀಗ್‌ನ ಭಾಗವಾಗಿ 3 ಏಕದಿನ ಪಂದ್ಯಗಳನ್ನು ಆಡಲು ಭಾರತ ತಂಡ ನ್ಯೂಜಿಲೆಂಡ್‌ ಪ್ರವಾಸ ಕೈಗೊಳ್ಳಬೇಕಿತ್ತು. 

 • Virat Kohli To Step Down As India s T20I Captain After ICC T20 World Cup mah

  CricketSep 16, 2021, 6:40 PM IST

  ವಿಶ್ವಕಪ್ ಬಳಿಕ ನಾಯಕತ್ವಕ್ಕೆ ಗುಡ್ ಬೈ.. ವಿಚಾರ ತಿಳಿಸಿದ ವಿರಾಟ್ ಕೊಹ್ಲಿ!

  ನನಗೆ ಭಾರತವನ್ನು ಪ್ರತಿನಿಧಿಸುವ ಅವಕಾಶ ಅಲ್ಲದೇ ತಂಡ ಮುನ್ನಡೆಸುವ ಭಾಗ್ಯವೂ ಸಿಕ್ಕಿತ್ತು.  ನಾನು ಎಲ್ಲರಿಗೂ ಧನ್ಯವಾದ ಹೇಳುತ್ತಿದ್ದೇನೆ.. ಉಳಿದ ಆಟಗಾರರ ನೆರವು ಇಲ್ಲದಿದ್ದರೆ ಏನು ಮಾಡಲಾಗುತ್ತಿರಲಿಲ್ಲ.  ಸಹ ಆಟಗಾರರು, ಸಪೋರ್ಟ್ ಸ್ಟಾಫ್, ಆಯ್ಕೆ ಮಂಡಳಿ ಎಲ್ಲರಿಗೂ ಮತ್ತೊಮ್ಮೆ ಧನ್ಯವಾದ ಅರ್ಪಿಸುತ್ತಿದ್ದೇನೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

 • T20 World Cup We will try to beat India again Says Pakistan Pacer Hasan Ali kvn

  CricketSep 16, 2021, 3:29 PM IST

  T20 World Cup:'ಟೀಂ ಇಂಡಿಯಾವನ್ನು ಮತ್ತೊಮ್ಮೆ ಸೋಲಿಸಲು ಪ್ರಯತ್ನಿಸುತ್ತೇವೆ'

  ಯುಎಇನ ಟರ್ನಿಂಗ್‌ ಪಿಚ್‌ನಲ್ಲಿ ಸ್ಪಿನ್ನರ್‌ಗಳು ಮೇಲುಗೈ ಸಾಧಿಸುವ ಸಾಧ್ಯತೆ ಹೆಚ್ಚಿದೆ. ಹೀಗಿದ್ದೂ ವೇಗದ ಬೌಲಿಂಗ್‌ನಲ್ಲಿ ಏರಿಳಿತ ಮಾಡುವ ಮೂಲಕ ವೇಗಿಗಳು ಪರಿಣಾಮಕಾರಿ ದಾಳಿ ನಡೆಬಹುದು ಎಂದು ಹಸನ್‌ ಅಲಿ ಅಭಿಪ್ರಾಯ ಪಟ್ಟಿದ್ದಾರೆ. 

 • ICC T20 Rankings Team India Captain Virat Kohli remain at 4th places kvn

  CricketSep 16, 2021, 12:04 PM IST

  ಟಿ20 ರ‍್ಯಾಂಕಿಂಗ್‌: 4ನೇ ಸ್ಥಾನ ಕಾಯ್ದುಕೊಂಡ ವಿರಾಟ್ ಕೊಹ್ಲಿ

  ಇಂಗ್ಲೆಂಡ್‌ನ ಡೇವಿಡ್‌ ಮಲಾನ್‌ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ಬ್ಯಾಟ್ಸ್‌ಮನ್‌ಗಳ ವಿಭಾಗದ ಅಗ್ರ 7 ಸ್ಥಾನಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದಕ್ಷಿಣ ಆಫ್ರಿಕಾ ತಂಡದ ನಾಯಕ ಕ್ವಿಂಟನ್‌ ಡಿ ಕಾಕ್‌ 8ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

 • T20 World Cup Former Cricketer Gautam Gambhir picks India XI against Pakistan kvn

  CricketSep 15, 2021, 5:49 PM IST

  T20 World Cup: ಪಾಕಿಸ್ತಾನ ಎದುರಿನ ಪಂದ್ಯಕ್ಕೆ ಬಲಿಷ್ಠ ಟೀಂ ಇಂಡಿಯಾ ಹೆಸರಿಸಿದ ಗಂಭೀರ್

  ನವದೆಹಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ಕ್ರಿಕೆಟ್‌ ಜ್ವರ ನಿಧಾನವಾಗಿ ಕಾವೇರ ತೊಡಗಿದೆ. ಯುಎಇ ಹಾಗೂ ಓಮನ್‌ನಲ್ಲಿ ಅಕ್ಟೋಬರ್ 17ರಿಂದ ಟಿ20 ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಅಕ್ಟೋಬರ್ 24ರಂದು ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಪಾಕಿಸ್ತಾನ ವಿರುದ್ದದ ಪಂದ್ಯಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದ್ದಾರೆ. ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
   

 • No captaincy change for India as long as team performing well Says BCCI Secretary Jay Shah kvn

  CricketSep 15, 2021, 1:27 PM IST

  ಕೊಹ್ಲಿ ನಾಯಕತ್ವ ಬದಲಾವಣೆ: ಕೊನೆಗೂ ತುಟಿಬಿಚ್ಚಿದ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ..!

  ನವದೆಹಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್‌ ಬಳಿಕ ವಿರಾಟ್ ಕೊಹ್ಲಿ ಸೀಮಿತ ಓವರ್‌ಗಳ ನಾಯಕತ್ವದಿಂದ ಕೆಳಗಿಳಿಯಲಿದ್ದಾರೆ. ಇದಾದ ಬಳಿಕ ಉಪನಾಯಕ ರೋಹಿತ್ ಶರ್ಮಾ ಸೀಮಿತ ಓವರ್‌ಗಳ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ ಕೊಹ್ಲಿ ಟೆಸ್ಟ್‌ ತಂಡದ ನಾಯಕರಾಗಿ ಮುಂದುವರೆಯಲಿದ್ದಾರೆ ಎನ್ನುವ ಒಂದು ವರದಿ ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಇದೀಗ ಈ ವಿಚಾರದ ಕುರಿತಂತೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ತುಟಿಬಿಚ್ಚಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.  
   

 • Former Cricketer Gary Kirsten not looking to make comeback as Team India coach Says Report kvn

  OTHER SPORTSSep 15, 2021, 12:50 PM IST

  ಮತ್ತೆ ಟೀಂ ಇಂಡಿಯಾ ಕೋಚ್ ಆಗ್ತಾರಾ ಗ್ಯಾರಿ ಕಸ್ರ್ಟನ್‌..?

  ಗ್ಯಾರಿ ಕಸ್ರ್ಟನ್ 2007ರಿಂದ 2011ರ ಅವಧಿಯಲ್ಲಿ ಭಾರತ ಕ್ರಿಕೆಟ್ ತಂಡದ ಹೆಡ್‌ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದರು. ಗ್ಯಾರಿ ಕಸ್ರ್ಟನ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಟೆಸ್ಟ್‌ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿತ್ತು. ಇದಾದ ಬಳಿಕ ಬರೋಬ್ಬರಿ 28 ವರ್ಷಗಳ ಬಳಿಕ ಟೀಂ ಇಂಡಿಯಾ ಏಕದಿನ ವಿಶ್ವಕಪ್ ಜಯಿಸಿ ಸಂಭ್ರಮಿಸಿತ್ತು. 

 • Ind vs Eng Test Team India Captain Virat Kohli breaks silence on Manchester Test cancellation kvn

  CricketSep 14, 2021, 4:58 PM IST

  Ind vs Eng ಮ್ಯಾಂಚೆಸ್ಟರ್ ಟೆಸ್ಟ್‌ ರದ್ದು: ಕೊನೆಗೂ ತುಟಿಬಿಚ್ಚಿದ ಕಿಂಗ್ ಕೊಹ್ಲಿ

  ದುರಾದೃಷ್ಟವಶಾತ್, ಇಂಗ್ಲೆಂಡ್‌ ಪ್ರವಾಸವನ್ನು ನಾವಿಲ್ಲಿ ಬೇಗ ಮುಗಿಸಬೇಕಾಗಿ ಬಂತು. ಕೋವಿಡ್ ಎಲ್ಲವನ್ನು ಅನಿಶ್ಚಿತತೆಗೆ ದೂಡುವಂತೆ ಮಾಡಿದೆ ಎಂದು ಆರ್‌ಸಿಬಿಯ ಬೋಲ್ಡ್‌ ಡೈರಿಯಲ್ಲಿ ಕೊಹ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವುದೇ ಸಂದರ್ಭದಲ್ಲಿ ಏನು ಬೇಕಾದರೂ ಸಂಭವಿಸಿಸಬಹುದು. ನಾವಿಲ್ಲಿ ಒಳ್ಳೆಯ ಸುರಕ್ಷಿತ ವಾತಾವರಣದಲ್ಲಿದ್ದು, ಗುಣಮಟ್ಟದ ಐಪಿಎಲ್‌ ಟೂರ್ನಿಯನ್ನು ಎದುರು ನೋಡುತ್ತಿರುವುದಾಗಿ ಕೊಹ್ಲಿ ತಿಳಿಸಿದ್ದಾರೆ.

 • Happy Birthday Suryakumar Yadav Top 4 Performances of Mumbai Indians Stalwart kvn

  CricketSep 14, 2021, 12:52 PM IST

  ಸೂರ್ಯನಿಗಿಂದು ಹುಟ್ಟುಹಬ್ಬದ ಸಂಭ್ರಮ: ನೆನಪಿವೆಯಾ ಮುಂಬೈ ಕ್ರಿಕೆಟಿಗನ ಟಾಪ್ 4 ಫರ್ಫಾಮೆನ್ಸ್‌..!

  ಬೆಂಗಳೂರು: ಭಾರತದ 360 ಖ್ಯಾತಿಯ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್ ಯಾದವ್‌ 31ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಾವೆದುರಿಸಿದ ಮೊದಲ ಎಸೆತದಲ್ಲೇ ಸಿಕ್ಸರ್‌ನೊಂದಿಗೆ ಖಾತೆ ತೆರೆದ ಭಾರತದ ಮೊದಲ ಬ್ಯಾಟ್ಸ್‌ಮನ್‌ ಎನ್ನುವ ವಿಶಿಷ್ಠ ದಾಖಲೆ ಹೊಂದಿರುವ ಸೂರ್ಯನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರಲಾರಂಭಿಸಿದೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಸೂರ್ಯನ 5 ಅದ್ಭುತ ಇನಿಂಗ್ಸ್‌ಗಳನ್ನು ಮೆಲುಕು ಹಾಕೋಣ ಬನ್ನಿ