ಗ್ರಾ.ಪಂ. ಸದಸ್ಯರಿಗೆ ತರಬೇತಿ, ಕೆಡಿಪಿ ಸಭೆಗಳಲ್ಲಿ ಹಿರಿಯ ಅಧಿಕಾರಿಗಳು ಕಡ್ಡಾಯ ಭಾಗಿ, ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳ ಸೇರ್ಪಡೆ, ಪಿಡಿಒಗಳಿಗೆ ಬಯೋ ಮೆಟ್ರಿಕ್ ಹಾಜರಾತಿ ಹಾಗೂ ಗ್ರಾ.ಪಂ.ಗಳಿಗೆ ಗ್ರೇಡಿಂಗ್ ಕೊಡುವ ಪದ್ಧತಿ ಜಾರಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
Politics Feb 15, 2024, 8:22 PM IST
ಬಿಬಿಎಂಪಿಯ ಪ್ರಮುಖ ಆದಾಯದ ಮೂಲವಾದ ಆಸ್ತಿ ತೆರಿಗೆ ವಸೂಲಿ ಪ್ರಮಾಣ ಹೆಚ್ಚಿಸಲು ಬಿಬಿಎಂಪಿ ಕಂದಾಯ ವಿಭಾಗ ಹೊಸಹೊಸ ಮಾರ್ಗ ಕಂಡುಕೊಳ್ಳುತ್ತಿದೆ. ಅದರಂತೆ ಆಸ್ತಿ ಮಾಲೀಕರ ಆಸ್ತಿಗಳನ್ನು ಪರಿಶೀಲನೆ ನಡೆಸಿ, ಎಸ್‌ಎಎಸ್ ಅಡಿಯಲ್ಲಿ ತಪ್ಪು ಮಾಹಿತಿ ನೀಡಿದವರನ್ನು ಪತ್ತೆ ಮಾಡಿ ಅವರಿಂದ ಹೆಚ್ಚುವರಿ ಮೊತ್ತ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.
Karnataka Districts Feb 13, 2024, 5:19 AM IST
ಬಿಬಿಎಂಪಿಯ ಪ್ರಮುಖ ಆದಾಯದ ಮೂಲವಾದ ಆಸ್ತಿ ತೆರಿಗೆ ಸಂಗ್ರಹ ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧಿಸಲು ಕಂದಾಯ ವಿಭಾಗ ಹಿಂದೆ ಬಿದ್ದಿದೆ. 2023-24ನೇ ಸಾಲಿನಲ್ಲಿ ₹4,500 ಕೋಟಿ ತೆರಿಗೆ ಸಂಗ್ರಹದ ಗುರಿಯ ಪೈಕಿ ಜ.31ರ ವೇಳೆಗೆ ಕೇವಲ ₹3,500 ಕೋಟಿ ಮಾತ್ರ ಸಂಗ್ರಹಿಸಲಾಗಿದೆ.
state Feb 6, 2024, 12:53 PM IST
ಬಿಬಿಎಂಪಿ ಆದಾಯದ ಪ್ರಮುಖ ಮೂಲವಾದ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಿಸಲು ತೆರಿಗೆ ಅಧಿಕಾರಿಗಳಿಗೆ ವಾರದ ಗುರಿ ನೀಡಿ ತೆರಿಗೆ ವಸೂಲಿ ಮಾಡಲಾಗುತ್ತಿದೆ. ಅದರ ಜತೆಗೆ ಬಾಕಿ ತೆರಿಗೆ ವಸೂಲಿಗೆ ಸಂಬಂಧಿಸಿದಂತೆ ಹೊಸ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಿದ್ದರೂ ವಾಣಿಜ್ಯ ಆಸ್ತಿಗಳಿಂದ ಬರಬೇಕಿರುವ ₹2 ಸಾವಿರ ಕೋಟಿಗೂ ಹೆಚ್ಚಿನ ಬಾಕಿ ವಸೂಲಿ ಆಗುತ್ತಿಲ್ಲ. ಈ ಮೊತ್ತ ವಸೂಲಿಗೆ ಒಂದೇ ಬಾರಿಗೆ ಬಾಕಿ ತೆರಿಗೆ ಪಾವತಿ ಮಾಡುವವರಿಗೆ ಮೂರು ಬಗೆಯ ವಿನಾಯಿತಿ ನೀಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ.
Karnataka Districts Jan 28, 2024, 8:57 AM IST
ಬೆಂಗಳೂರಿನಲ್ಲಿ ಆಸತಿ ತೆರಿಗೆ ಪಾವತಿ ಕುರಿತು 30x40 ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ.
Karnataka Districts Jan 16, 2024, 6:32 PM IST
ಬಿಬಿಎಂಪಿ ನಿಯಮಬಾಹಿರವಾಗಿ ಆಸ್ತಿ ತೆರಿಗೆ ಪರಿಷ್ಕರಣೆ ಹಾಗೂ 7 ವರ್ಷಗಳ ಹಿಂದಿನಿಂದಲೂ ಪೂರ್ವಾನ್ವಯ ಮಾಡಿರುವುದಕ್ಕೆ ಸಚಿವ ರಾಮಲಿಂಗಾರೆಡ್ಡಿ ಕೆಂಡಾಮಂಡಲ ಆಗಿದ್ದಾರೆ.
Karnataka Districts Jan 10, 2024, 11:50 AM IST
ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿರುವ ಬಿಬಿಎಂಪಿಯು ಡಿಸೆಂಬರ್ ಅಂತ್ಯದ ವೇಳೆಗೆ ಬರೋಬ್ಬರಿ ₹3,273 ಕೋಟಿ ಆಸ್ತಿ ತೆರಿಗೆ ವಸೂಲಿ ಮಾಡಿದೆ. ತನ್ಮೂಲಕ ಕಳೆದ 2022ರ ಡಿಸೆಂಬರ್ ಅಂತ್ಯಕ್ಕೆ ಹೋಲಿಕೆ ಮಾಡಿದರೆ ₹532 ಕೋಟಿ ಹೆಚ್ಚಿನ ಮೊತ್ತದ ಆಸ್ತಿ ತೆರಿಗೆ ವಸೂಲಿಯಾಗಿದೆ.
state Jan 8, 2024, 9:40 AM IST
ಆಸ್ತಿ ತೆರಿಗೆ ಪಾವತಿ ಮಾಡದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಕ್ಲೋಸ್ ಆಗಿದ್ದ ಸಂಪಿಗೆ ರಸ್ತೆಯಲ್ಲಿರುವ ಪ್ರತಿಷ್ಟಿತ ಮಂತ್ರಿಮಾಲ್ ಇಂದು ಬೆಳಗ್ಗೆಯಿಂದ ಎಂದಿನಂತೆ ಒಪನ್ ಆಗಿದೆ.
state Dec 29, 2023, 12:53 PM IST
ಮಂತ್ರಿ ಮಾಲ್ ಮಾಲೀಕರಿಗೆ ಮಾತ್ರವಲ್ಲ. ಮಾಲ್ ಒಳಗಡೆ ಇರುವ ಬಾಡಿಗೆ ಅಥವಾ ಸ್ವಾಧೀನದಲ್ಲಿರುವ ಸುಮಾರು 200ಕ್ಕೂ ಅಧಿಕ ಮಳಿಗೆದಾರರಿಗೂ ಬಿಬಿಎಂಪಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಬುಧವಾರ ಎಲ್ಲ ಮಳಿಗೆಗಳನ್ನು ಬಂದ್ ಮಾಡಿಸಿ ಮಾಲ್ ಮುಖ್ಯ ದ್ವಾರಕ್ಕೆ ಬೀಗ ಹಾಕಲಾಗಿದೆ.
Karnataka Districts Dec 28, 2023, 6:19 AM IST
ಆಸ್ತಿಗಳ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರಿಗೆ ನೋಟಿಸ್ ನೀಡುವ ವ್ಯವಸ್ಥೆಯನ್ನು ಬಿಬಿಎಂಪಿ ಸರಳಗೊಳಿಸಿದೆ. ಎಸ್‌ಎಂಎಸ್ ಹಾಗೂ ವಾಟ್ಸ್‌ಆ್ಯಪ್ ಮೂಲಕ ತೆರಿಗೆ ಬಾಕಿಯ ನೋಟಿಸ್ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈವರೆಗೆ 3.50 ಲಕ್ಷ ಆಸ್ತಿ ಮಾಲೀಕರಿಗೆ ಎಸ್‌ಎಂಎಸ್, ವಾಟ್ಸ್‌ಆ್ಯಪ್ ಮೂಲಕ ನೋಟಿಸ್ ನೀಡಲಾಗಿದೆ.
state Nov 14, 2023, 5:09 AM IST
ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಇತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅಕ್ರಮ ಬಡಾವಣೆ ಮತ್ತು ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣಗೊಂಡಿರುವ ಕಟ್ಟಡಗಳ ಮಾಲೀಕರಿಂದ ನಿರ್ವಹಣಾ ಶುಲ್ಕ ರೂಪದಲ್ಲಿ ತೆರಿಗೆ ವಸೂಲಿ ಮಾಡುವ ಸಂಬಂಧ ಸರ್ಕಾರಕ್ಕೆ ಶಿಫಾರಸು ಮಾಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯ ಸಚಿವ ಸಂಪುಟ ಉಪಸಮಿತಿ ಚಿಂತನೆ ನಡೆಸಿದೆ.
state Oct 20, 2023, 5:45 AM IST
ನಾವು ಬ್ರ್ಯಾಂಡ್ ಬೆಂಗಳೂರು ಮಾಡುತ್ತಿದ್ದರೂ ಟ್ಯಾಕ್ಸ್ ಹೆಚ್ಚಳ ಮಾಡಲ್ಲ. ಆದ್ರೆ ಎಲ್ಲ ಸ್ವತ್ತುಗಳನ್ನು ಮರು ಸಮೀಕ್ಷೆ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Karnataka Districts Oct 9, 2023, 2:43 PM IST
ರಾಜ್ಯದ ಇತರೆ ಮಹಾನಗರ ಪಾಲಿಕೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅನಧಿಕೃತ ಕಟ್ಟಡ ಮತ್ತು ಅನಧಿಕೃತ ಕಂದಾಯ ನಿವೇಶನಗಳಿಂದ ದುಪ್ಪಟ್ಟು ಆಸ್ತಿ ತೆರಿಗೆ ಸಂಗ್ರಹಿಸುವ ಬಗ್ಗೆ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ.
Politics Aug 26, 2023, 7:01 AM IST
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ-2020ರ ಕಲಂ 144 (6) ಮತ್ತು (21)ರ ಅಂಶವನ್ನು ರಾಜ್ಯದ ಇತರೆ ಮಹಾನಗರ ಪಾಲಿಕೆಗಳು, ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ-1976 ಹಾಗೂ ಕರ್ನಾಟಕ ಪುರಸಭೆಗಳ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಈ ಸಮಿತಿ ಅಧ್ಯಯನ ನಡೆಸಿ ವರದಿ ನೀಡಲಿದೆ.
state Aug 26, 2023, 1:30 AM IST
ತೆರಿಗೆ ಕಾನೂನುಗಳು ಸರಳವಾದಷ್ಟು ಸಾಮಾನ್ಯರಿಗೆ ಅನುಕೂಲವಾಗಲಿದ್ದು, ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದ್ದರೆ, ದೇಶ ಅಭಿವೃದ್ಧಿ ಆಗುತ್ತಿದೆ ಎಂದರ್ಥ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
state Aug 5, 2023, 3:10 PM IST