ಬ್ ಜೀ ಹಾಗೂ ಡ್ರೀಮ್-11 ಗೇಮ್ ಆಡುವುದನ್ನು ಪೋಷಕರಿಗೆ ಹೇಳುವುದಾಗಿ ಖಾಸಗಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಬೆದರಿಸಿ ₹41 ಲಕ್ಷ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆತನ ಇಬ್ಬರು ಸಹಪಾಠಿಗಳು ಸೇರಿದಂತೆ ಆರು ಮಂದಿಯನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
CRIME May 1, 2024, 5:50 AM IST
ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2023ರ ಸೆ.25 ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ .ದೀಕ್ಷಿತ್ ಅವರ ಪೀಠಕ್ಕೆ ಸರ್ಕಾರಿ ವಕೀಲರು ಈ ಸ್ಪಷ್ಟನೆ ನೀಡಿದರು.
Education Apr 4, 2024, 12:30 PM IST
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮೂಲಕ ಸರ್ಕಾರ ನಡೆಸಿದ ಮೌಲ್ಯಾಂಕನ ಪರೀಕ್ಷೆ (ಮಂಡಳಿ ಪರೀಕ್ಷೆ) ಕೆಲ ಖಾಸಗಿ ಶಾಲೆಗಳಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ.
Education Apr 1, 2024, 5:03 AM IST
ಖಾಸಗಿ ಶಾಲೆಯಲ್ಲಿ ನಾಡಗೀತ ಕಡ್ಡಾಯವಿಲ್ಲ, ಆಕ್ರೋಶದ ಬಳಿಕ ಆದೇಶ ಬದಲಿಸಿದ ಸರ್ಕಾರ, ಪುಟ್ಟಣ್ಣ ಪ್ರಮಾಣವಚನ ಬಳಿಕ ಬಿಜೆಪಿ ಕಾಲೆಳೆದ ಸಿದ್ದರಾಮಯ್ಯ, ರಾಮನಗರ ವಕೀಲರ ಹೋರಾಟ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
state Feb 21, 2024, 11:53 PM IST
ಕುವೆಂಪು ವಿರಚಿತ ನಾಡಗೀತೆ ವಿಚಾರದಲ್ಲಿ ವಿವಾದ ಮೈಮೇಲೆ ಎಳೆದುಕೊಂಡ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವೆಂದು ಸರ್ಕಾರ ತಿದ್ದುಪಡಿ ಆದೇಶ ಹೊರಡಿಸಿದೆ.
state Feb 21, 2024, 4:06 PM IST
ದಿನಕ್ಕೊಂದು ವಿವಾದಗಳ ಮೂಲಕ ಸುದ್ದಿಯಾಗುತ್ತಿರುವ ರಾಜ್ಯ ಸರ್ಕಾರಕ್ಕೆ ಬುಧವಾರ ಮತ್ತೆ ಇಂಥದ್ದೇ ಸಂಕಷ್ಟಕ್ಕೆ ಸಿಲುಕಿದೆ. ಖಾಸಗಿ ಶಾಲೆಗಳಲ್ಲಿ ರಾಷ್ಟ್ರಕವಿ ಕುವೆಂಪು ಬರೆದಿರುವ ನಾಡಗೀತೆ ಕಡ್ಡಾಯವಲ್ಲ ಎನ್ನುವ ಆದೇಶ ಹೊರಡಿಸಿದೆ.
state Feb 21, 2024, 12:36 PM IST
ಖಾಸಗಿ ಶಾಲೆಗಳು 2017-18ನೇ ಶೈಕ್ಷಣಿಕ ಸಾಲಿಗಿಂತ ಹಿಂದೆ ಅನುಮತಿ ಪಡೆದಿದ್ದರೆ ಅವುಗಳ ಮಾನ್ಯತೆ ಅವಧಿಯನ್ನು ಹತ್ತು ವರ್ಷಕ್ಕೊಮ್ಮೆ ನವೀಕರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
Politics Feb 20, 2024, 4:00 AM IST
ಓವರ್ ಟೇಕ್ ಮಾಡುವ ವೇಳೆ ಕಾರು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಖಾಸಗಿ ಶಾಲೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
CRIME Feb 17, 2024, 6:39 PM IST
ಇನ್ನೂ ಅಚ್ಚರಿಯೇನೆಂದರೆ, ಇದೇ ಶಾಲೆಯಲ್ಲಿ ಅವರ ಹಿರಿಯ ಮಗ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದು, ಅವರಿಗೆ ವಾರ್ಷಿಕ 3.2 ಲಕ್ಷ ಶುಲ್ಕ ಕಟ್ಟುತ್ತಿದ್ದಾರೆ. ಆದರೆ, ಕಿರಿಯ ಮಗನನ್ನು ಎಲ್ಕೆಜಿಗೆ ಸೇರಿಸಲು ಹಿರಿಯ ಮಗನಿಗೆ ನೀಡುವ ಶುಲ್ಕಕ್ಕಿಂತ ಕೇವಲ 50 ಸಾವಿರ ರೂಪಾಯಿ ಕಡಿಮೆ ಎಂದಿದ್ದಾರೆ
Education Feb 15, 2024, 4:43 PM IST
ತರಗತಿ ಒಳಗಡೆ ಹಿಂದೂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ವಜಾಗೊಂಡಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನಾ ತಂಡವನ್ನು ರಚಿಸುವಂತೆ ಕರ್ನಾಟಕ ಶಿಕ್ಷಣ ಇಲಾಖೆಗೆ ಕಾಂಗ್ರೆಸ್ ಮುಖಂಡರು ಮಂಗಳವಾರ ಒತ್ತಾಯಿಸಿದ್ದಾರೆ.
state Feb 13, 2024, 9:42 PM IST
ತನ್ನ ಬಗ್ಗೆ ಶಿಕ್ಷಕ ಮಾನಹಾನಿಕಾರಕ ಮೆಸೇಜ್ ಕಳಿಸಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
CRIME Feb 12, 2024, 9:02 PM IST
SSLC ಪೂರ್ವಸಿದ್ಧತಾ ಪರೀಕ್ಷಾ ವೆಚ್ಚವೆಂದು ಪ್ರತಿ ವಿದ್ಯಾರ್ಥಿಗಳಿಂದ ಪರೀಕ್ಷೆ ಶುಲ್ಕ ಸಂಗ್ರಹಕ್ಕೆ ಮುಂದಾಗಿರುವ ಕರ್ನಾಟಕ ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಹೊರಡಿಸಿರುವ ಸುತ್ತೋಲೆ ಇದೀಗ ವಿವಾದಕ್ಕೀಡಾಗಿದ್ದು, ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳು ತಿರುಗಿ ಬಿದ್ದಿವೆ.
Education Feb 5, 2024, 12:08 PM IST
ನಾಡಗೀತೆ ಹೇಗೆ ಹಾಡಬೇಕು, ಅದರ ನಿಯಮಗಳೇನು ಎಂಬ ಬಗ್ಗೆ ಸರ್ಕಾರ ಹೊರಡಿಸಿರುವ ತಿದ್ದುಪಡಿ ಆದೇಶ ಖಾಸಗಿ ಶಾಲೆಗಳಿಗೆ ಅನ್ವಯವಾಗುತ್ತದೆಯೇ ಇಲ್ಲವೇ ಈ ಬಗ್ಗೆ ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಹೈಕೋರ್ಟ್ ನೋಟಿಸ್ ನೀಡಿದೆ
state Feb 3, 2024, 11:39 AM IST
ಮಂಡ್ಯ (ಜ.23): ಮೇಲುಕೋಟೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕಿ ಕಾಡಿನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರನ್ನು ಅದೇ ಗ್ರಾಮದ ಪರಿಚಯಸ್ಥ ಯುವಕನೇ ಬೆಟ್ಟದ ತಪ್ಪಿನಲ್ಲಿ ಕರೆದುಕೊಂಡು ಹೋಗಿ ಕೊಲೆ ಮಾಡಿ ಮಣ್ಣು ಮಾಡಿ ಬಂದಿದ್ದಾನೆ ಎಂದು ಹೇಳಲಾಗುತ್ತಿದೆ.
CRIME Jan 23, 2024, 1:02 PM IST
ಖಾಸಗಿ ಶಾಲೆಗಳ ಹುಸಿ ಬಾಂಬ್ ಬೆದರಿಕೆ ಮಾಸುವ ಮುನ್ನವೇ ಇದೀಗ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹೊತ್ತಲ್ಲೇ ಪ್ರತಿಷ್ಠಿತ ವಸ್ತು ಸಂಗ್ರಹಾಲಯ, ನೆಹರು ತಾರಾಲಯಗಳಿಗೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ಗಳು ಬಂದು ಆತಂಕ ಸೃಷ್ಟಿಸಿದೆ
state Jan 6, 2024, 10:50 AM IST