'ಒಬ್ಬರ ಮೇಲೆ ಒಬ್ಬರು ಭ್ರಷ್ಟಾಚಾರದ ಆರೋಪ ಮಾಡಿಕೊಳ್ಳುತ್ತಿದ್ದ ಎರಡು ಪಕ್ಷಗಳು ಇಂದು ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಮೈತ್ರಿ ಮಾಡಿಕೊಂಡಿವೆ' ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಆಮ್ ಆದ್ಮ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
India Apr 5, 2024, 8:03 AM IST
ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದಲ್ಲಿ ಎಲ್ಲರೂ ಭ್ರಷ್ಟರೇ ತುಂಬಿಕೊಂಡಿದ್ದಾರೆ. ಅದರಲ್ಲಿಯೂ ಡಿ.ಕೆ. ಶಿವಕುಮಾರ್ಗೆ ಭ್ರಷ್ಟಾಚಾರಿಗಳೆಂದರೆ ಭಾರೀ ಅಚ್ಚುಮೆಚ್ಚು ಎಂದು ಕೇಂದ್ರ ಸಚಿವ ಅಮಿತ್ ಶಾ ಟೀಕೆ ಮಾಡಿದರು.
Politics Apr 2, 2024, 4:18 PM IST
ಅಣ್ಣ ತಮ್ಮಂದಿರಿಗೆ ನಾಡು, ಜಿಲ್ಲೆಯ ಕುರಿತು ಯಾವುದೇ ಕಾಳಜಿ ಇಲ್ಲ. ಬರೀ ಭ್ರಷ್ಟಾಚಾರ, ಲೂಟಿ ಹೊಡೆಯುವುದು, ದೇಶ ಹೊಡೆಯುವುದು, ಮನೆ ಹೊಡೆಯುವುದೇ ಇವರ ಕೆಲಸವಾಗಿದೆ ಎಂದು ಡಿ.ಕೆ.ಸಹೋದರರ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದರು.
Politics Apr 1, 2024, 8:03 AM IST
‘ದೇಶದ ನ್ಯಾಯಾಂಗ ಅಪಾಯದಲ್ಲಿದೆ. ವಿಶೇಷವಾಗಿ ರಾಜಕಾರಣಿಗಳ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ಥಾಪಿತ ಹಿತಾಸಕ್ತಿಗಳು ಕೋರ್ಟ್ಗಳಿಗೆ ಮಸಿ ಬಳಿಯಲು ಯತ್ನಿಸುತ್ತಿವೆ’ ಎಂದು ದೇಶದ ಖ್ಯಾತ 600 ವಕೀಲರು ಒಂದಾಗಿ ಭಾರತದ ಮುಖ್ಯ ನ್ಯಾಯಾಧೀಶರಿಗೆ ಬರೆದ ಪತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.
India Mar 29, 2024, 4:49 AM IST
ಉದ್ಯೋಗ ಪಡೆಯಲೆಂದು ರಾಜ್ಯದ ಬಡವರು ನೀಡಿರುವ ಲಂಚದ ಹಣ 3000 ಕೋಟಿ ರು.ನಷ್ಟಿದೆ. ಇಷ್ಟು ಮೊತ್ತದ ನಗದು ಅಥವಾ ಇತರೆ ವಸ್ತುಗಳನ್ನು ಈಗಾಗಲೇ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಈ ಹಣವನ್ನು ರಾಜ್ಯದ ಬಡವರಿಗೆ ಮರಳಿಸಲು ಕಾನೂನಿನಲ್ಲಿ ಏನೇನು ಅವಕಾಶ ಇದೆ ಎಂಬುದನ್ನು ನಾವು ಪರಿಶೀಲಿಸುತ್ತಿದ್ದೇವೆ: ಪ್ರಧಾನಿ ನರೇಂದ್ರ ಮೋದಿ
Politics Mar 28, 2024, 7:03 AM IST
ನಮ್ಮದೇ ಆದ ತಪ್ಪಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇದು ದರಿದ್ರ ಸರ್ಕಾರ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
Politics Mar 28, 2024, 5:24 AM IST
ನರೇಗಾದಡಿ ಪ್ರಾಯೋಗಿಕವಾಗಿ ಕೆಲವೆಡೆ ಪರೀಕ್ಷಿಸಲಾಗಿದೆ. ಕೇಂದ್ರ ಸರ್ಕಾರ ನೂತನ ತಂತ್ರಜ್ಞಾನ ಬಳಸುವುದಕ್ಕೆ ರಾಜ್ಯದ ವಿರೋಧವಿಲ್ಲ. ಆದರೆ, ಎಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡು ಜನವಿರೋಧಿ ನೀತಿ ಅನುಸರಿಸದಿರಲಿ: ಸಚಿವ ಪ್ರಿಯಾಂಕ್ ಖರ್ಗೆ
state Mar 26, 2024, 12:00 PM IST
ಜನಾರ್ದನ ರೆಡ್ಡಿ ಮೇಲೆ ಬಿಜೆಪಿಯವ್ರೇ ಭ್ರಷ್ಟಾಚಾರ ಆರೋಪ ಮಾಡಿದ್ರು. ಈಗ ಪಕ್ಷಕ್ಕೆ ಕರೆದುಕೊಂಡಿದ್ದಾರೆ. ಯಾರೇ ಆಗಲಿ ಬಿಜೆಪಿಗೆ ಸೇರ್ಪಡೆಗೊಂಡರೆ ಶುದ್ಧರಾಗುತ್ತಾರೆ. ವಾಷಿಂಗ್ ಪೌಡರ್ ನಿರ್ಮಾ ಆಗಿಬಿಡುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವ್ಯಂಗ್ಯ.
state Mar 25, 2024, 8:31 PM IST
ಕಾಂಗ್ರೆಸ್ಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ ಎಂಬ ಆರೋಪವಿದೆ. ಅಧಿಕಾರಿಗಳು ಹಣ ಪಡೆದು ಸರ್ಕಾರಕ್ಕೆ ನೀಡುತ್ತಿರುವ ಅನುಮಾನವಿದೆ ಎಂದು ಮುಡಾ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರ್ ಅನುಮಾನ ವ್ಯಕ್ತಪಡಿಸಿದರು.
state Mar 24, 2024, 6:16 PM IST
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ಸಮಯದಲ್ಲಿಯೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ.
India Mar 24, 2024, 9:47 AM IST
ಸರ್ಕಾರಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವೆಂಬ ಪಿಡುಗನ್ನು ತೊಲಗಿಸಬೇಕೆಂದು ಕೋರಿ ಲೋಕಪಾಲ್ ಮಸೂದೆ ಜಾರಿಗೆ ಆಗ್ರಹಿಸಿ ಹೋರಾಟದಲ್ಲಿ ಭಾಗಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಅವರೇ ಲಂಚ ಪ್ರಕರಣದಲ್ಲಿ ಬಂಧಿತನಾಗಿರುವುದು ಹಾಸ್ಯಾಸ್ಪದವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಿಳಿಸಿದ್ದಾರೆ.
India Mar 24, 2024, 9:05 AM IST
ನಗರದ ಉದ್ಯಮಿಯೊಬ್ಬರಿಗೆ ಟಿಡಿಆರ್ ಪ್ರಮಾಣಪತ್ರ ನೀಡಲು ₹25 ಲಕ್ಷ ಲಂಚಕ್ಕೆ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತ ಮನ್ಸೂರ್ ಅಲಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
CRIME Mar 23, 2024, 10:11 PM IST
ಒಂದೆಡೆ ಅರವಿಂದ್ ಕೇಜ್ರಿವಾಲ್ರನ್ನು ಬಂಧಿಸಿರುವ ಬಗ್ಗೆ ಕಾಂಗ್ರೆಸ್ನ ಅಗ್ರ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದರೆ, ಇನ್ನೊಂದೆಡೆ ಅರವಿಂದ್ ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಮುಖ ಕಾಂಗ್ರೆಸ್ ನಾಯಕರೊಬ್ಬರು ಆಗ್ರಹಿಸಿದ್ದಾರೆ.
India Mar 23, 2024, 6:39 PM IST
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಗ್ಗೆ ನಾನು ನಿರಾಶನಾಗಿದ್ದೇನೆ. ಈ ಹಿಂದೆ ಅಣ್ಣಾ ಹಜಾರೆ ಅವರು ಭಾರತದ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದರು. ಅದಕ್ಕೆ ನಾನು ಹಾಗೂ ಕೇಜ್ರಿವಾಲ್ ಸಾಥ್ ನೀಡಿದ್ದೆವು. ಆದರೆ ಈಗ ಭ್ರಷ್ಟಾಚಾರವೇ ತೀವ್ರ ಗಮನ ಸೆಳೆಯುತ್ತಿದೆ ಎಂದು ನ್ಯಾ.ಸಂತೋಷ್ ಹೆಗ್ಡೆ ಹೇಳಿದ್ದಾರೆ.
state Mar 23, 2024, 10:20 AM IST
ಭ್ರಷ್ಟಾಚಾರದ ವಿರುದ್ಧ ಸಮರ ಸಾರುವ ಮೂಲಕವೇ ಅಧಿಕಾರಕ್ಕೇರಿದ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೇ ದೆಹಲಿ ಅಬಕಾರಿ ಹಗರಣದ ಮುಖ್ಯ ಸಂಚುಗಾರ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ ನ್ಯಾಯಾಲಯಕ್ಕೆ ತಿಳಿಸಿದೆ.
India Mar 23, 2024, 8:03 AM IST