ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ವಿಮಾನ ಹಾರಾಟದ ಮೇಲೆ ಪರಿಣಾಮ ಉಂಟಾಗಿದ್ದು, ಕೆಐಎ ಅಧಿಕಾರಿಗಳಿಗೆ ತಲೆಬಿಸಿಯಾದ್ರೆ ಪ್ರೆಯಾಣಿಕರು ಪರದಾಡಿದ್ರು
Karnataka Districts May 11, 2024, 12:24 PM IST
ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ರೈತ ಮಹಿಳೆ ಹಾಗೂ ಶ್ವಾನ ದುರ್ಮರಣಕ್ಕೀಡಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸಪೂರ ಗ್ರಾಮದಲ್ಲಿ ನಡೆದಿದೆ. ಸ್ವಪ್ನಾ(48), ಸಿಡಿಲಿಗೆ ಬಲಿಯಾದ ರೈತ ಮಹಿಳೆ.
state May 10, 2024, 7:48 PM IST
ರಾಜ್ಯದಲ್ಲಿ ಮುಂದಿನ 5 ದಿನಗಳ ಚಂಡಮಾರುತ ಬೀಸಲಿದ್ದು, ಈ ಅವಧಿಯಲ್ಲಿ ರಾಜ್ಯದ 23 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭರ್ಜರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
state May 10, 2024, 3:04 PM IST
ಬೆಂಗಳೂರು ನಗರ, ಗ್ರಾಮಾಂತರ ಸೇರಿ ವಿವಿಧೆಡೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
state May 9, 2024, 10:39 PM IST
ಮಳೆ ಕೈಕೊಟ್ಟ ವರ್ಷ ಗ್ರಾಮಸ್ಥರೆಲ್ಲ ಸೇರಿ ಕಪ್ಪೆ ಮದುವೆ, ಕತ್ತೆ ಮದುವೆ ಮಾಡುವುದನ್ನು ನೋಡಿದ್ದೀರಿ, ಕೆಲವು ಹಳ್ಳಿಗಳ್ಳಿ ಮಳೆಗಾಗಿ ಸತತ ಏಳು ದಿನಗಳ ಕಾಲ ಭಜನೆ ಮಾಡುವುದನ್ನು ಕೇಳಿದ್ದೀರಿ ಆದರೆ ತುಮಕೂರಿನ ಜಯಪುರ ಬಡಾವಣೆಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ ಮಾಡಿ ವಿಶೇಷ ಆಚರಣೆ ಮಾಡಿರುವುದು ಗಮನ ಸೆಳೆದಿದೆ.
state May 9, 2024, 7:06 PM IST
ಮೇ. 10 ರಿಂದ ಮಳೆ ಪ್ರಮಾಣ ಇನ್ನಷ್ಟು ಜಿಲ್ಲೆಗಳಿಗೆ ವ್ಯಾಪಿಸಲಿದ್ದು, ಮೇ13 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಎಚ್ಚರಿಕೆಯ ನೀಡಿದ ಹವಾಮಾನ ಇಲಾಖೆ
state May 9, 2024, 9:32 AM IST
ರಸ್ತೆ ಮಧ್ಯೆಯೇ ಭೂ ಕುಸಿತ ಸೃಷ್ಟಿಯಾಗಿದ ಪರಿಣಾಮ ನಿರ್ಮಾಣ ಹಂತದಲ್ಲಿರುವ ನಿಲ್ದಾಣಕ್ಕೆ ಹೊಂದಿಕೊಂಡ ರಸ್ತೆಯ ಎರಡು ತುದಿಗಳ ನಡುವಿನ ಸಂಪರ್ಕ ಕಡಿತಗೊಂಡಿದೆ. ಬ್ಯಾರಿಕೇಡ್ ಅಳವಡಿಕೆ ಮಾಡಿ ರಸ್ತೆ ಬಂದ್ ಮಾಡಲಾಗಿದೆ. ರಸ್ತೆ ಕುಸಿಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್
Karnataka Districts May 9, 2024, 8:01 AM IST
ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದೆ. ಬುಧವಾರದಿಂದ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದ್ದು, ಸತತ ಏಳು ದಿನ ಮಳೆಯಾಗಲಿದೆ. ಮೇ 13 ಹಾಗೂ 14 ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ.
state May 8, 2024, 6:00 AM IST
ಚಿಕ್ಕಮಗಳೂರು ನಗರ ಸೇರಿದಂತೆ ಸುತ್ತಲ ಪ್ರದೇಶದಲ್ಲಿ ಇಂದು ( ಮಂಗಳವಾರ )ಮಧ್ಯಾಹ್ನ ಧಾರಾಕಾರವಾಗಿ ಸುರಿದ ಭರಣಿ ಮಳೆ ಧರಣಿಯನ್ನು ತೊಳೆದಿದೆ. ಬರಗಾಲದ ಜೊತೆಗೆ ದಾಖಲೆ ಪ್ರಮಾಣದ ತಾಪಮಾನ ಏರಿಕೆಯಿಂದ ಕಾದ ಕಾವಲಿಯಂತಾಗಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ನೆತ್ತಿಸುಡುವ ಬಿಸಿಲಿನಿಂದಾಗಿ ಮನೆಯಿಂದ ಹೊರ ಬರಲು ಹೆದರುತ್ತಿದ್ದ ಜನರು ಇಂದಿನ ಮಳೆಯಿಂದ ಸಂತಸಗೊಂಡಿದ್ದಾರೆ. ಬಿಸಿಗಾಳಿಯಿಂದ ಬಸವಳಿದಿದ್ದ ನಗರದ ಜನತೆ ಮಳೆಯಿಂದಾಗಿ ನಿಟ್ಟುಸಿರು ಬಿಟ್ಟಿದ್ದಾರೆ.
state May 7, 2024, 8:31 PM IST
ಸಂಜೆ 6ಗಂಟೆ ನಂತರ ಆರಂಭವಾದ ಮಳೆ, ಸತತ ಒಂದು ಗಂಟೆ ಸುರಿದಿದೆ. ಮಳೆಯ ಜತೆಗೆ ಭಾರೀ ಗಾಳಿ ಬೀಸಿದ್ದರಿಂದ ನಗರ ವಿವಿಧ ಭಾಗಗಳಲ್ಲಿ ಮರ ಹಾಗೂ ಮರದ ರೆಂಬೆಗಳು ಬಿದ್ದಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು. ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮರಗಳನ್ನು ತೆರವು ಮಾಡುವ ಕೆಲಸ ಮಾಡಿದರಾದರೂ, ದೊಡ್ಡ ಗಾತ್ರಗಳ ಮರ ತೆರವಿಗೆ ಹೆಚ್ಚಿನ ಸಮಯ ಬಂದ ತೆಗೆದುಕೊಂಡ ಕಾರಣ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು.
Karnataka Districts May 7, 2024, 8:15 AM IST
ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ತಮಿಳುನಾಡು, ಆಂಧ್ರಪ್ರದೇಶ ಜತೆಗೆ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.
state May 7, 2024, 5:30 AM IST
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ. ಅದರಲ್ಲಿಯೂ ಹಳೆ ಮೈಸೂರು ಭಾಗದಲ್ಲಿ ಮೇ 7ರಂದು ಬಿಸಿಗಾಳಿ ಜೊತೆಗೆ ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
state May 6, 2024, 1:16 PM IST
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೇ 7ರಿಂದ 12 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
state May 6, 2024, 4:38 AM IST
ಬಿಸಿಲಿನ ತಾಪಮಾನ ಹೆಚ್ಚಳ ಹಾಗು ಕಲುಷಿತ ನೀರಿನಿಂದಾಗಿ ಮೀನುಗಳ ಮಾರಣ ಹೋಮ ನಡೆದಿರುವ ಘಟನೆ ಚಿತ್ರದುರ್ಗದ ಮುರುಘಾಮಠದ ಬಳಿಯ ಮಠದಹಟ್ಟಿ ಕೆರೆಯಲ್ಲಿ ನಡೆದಿದೆ. ಮೀನುಗಳ ಸಾವಿನಿಂದಾಗಿ ಇಡೀ ನಗರವೇ ದುರ್ನಾಥ ಬೀರುತ್ತಿದೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ.
state May 5, 2024, 6:42 PM IST
ಬಿಸಿಲ ಬೇಗೆಯಿಂದ ಬೇಯುತ್ತಿದ್ದ ಬೆಂಗಳೂರಿಗೆ ಮಳೆರಾಯ ತಂಪೆರೆದಿದ್ದ ಒಂದೇ ದಿನದಲ್ಲಿ ಮತ್ತೆ ಹಿಂದಿನ ಪರಿಸ್ಥಿತಿಗೆ ಮರಳಿದ್ದು, ಶನಿವಾರ ಮಧ್ಯಾಹ್ನ ಬಿಸಿಲಿನ ಝಳ ಕೊಂಚ ಮಟ್ಟಿಗೆ ಹೆಚ್ಚಾಗಿತ್ತು.
Karnataka Districts May 5, 2024, 8:03 AM IST