ಶಿವಮೊಗ್ಗ [ಅ.08]:  ಕಾರೊಂದು  ಹಸುಗಳು ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಈ ವೇಳೆ ಮೂರು ಹಸುಗಳು ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. 

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಜಯನಗರ ಬಳಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅತಿ ವೇಗವಾಗಿ ಬರುತ್ತಿದ್ದ ಕಾರು ರಸ್ತೆ ಬದಿ ನಿಂತಿದ್ದ ಹಸುಗಳಿಗೆ ಡಿಕ್ಕಿಯಾಗಿದೆ. ಈ ವೇಳೆ ರಸ್ತೆ ಬದಿಯಲ್ಲಿ ಉರುಳಿ ಬಿದ್ದಿದೆ. ಆಟೋ ಒಂದಕ್ಕೆ ಡಿಕ್ಕಿಯಾಗಬೇಕಿದ್ದು, ಸ್ವಲ್ಪದರಲ್ಲೇ ತಪ್ಪಿದೆ. 

ಹೊಸನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.