ಶಿವಮೊಗ್ಗ [ನ.09] :  ಐತಿಹಾಸಿಕವಾದ  ಅಯೋಧ್ಯೆ ತೀರ್ಪು ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಆಯಕಟ್ಟಿನ ಜಾಗದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಎರ್ಪಡಿಸಲಾಗಿದೆ. 

ಶಿವಮೊಗ್ಗ ನಗರ, ಭದ್ರಾವತಿ ನಗರದ ಸೂಕ್ಷ್ಮ ಪ್ರದೆಶಗಳಲ್ಲಿ ಪೋಲಿಸ್ ನಿಯೋಜನೆ ಮಾಡಲಾಗಿದೆ. ಈಗಾಗಲೇ ಪರೀಕ್ಷೆಗಳು ಮುಂದೂಡಿಕೆಯಾಗಿದ್ದು,   ಡಿಎಆರ್ , ಕೆಎಸ್ಆರ್ ಪಿ, ಡಿ -ಸ್ಕ್ವಾಟ್ , ಎಎನ್ಎಸ್ ತುಕಡಿ ಗಳನ್ನು ಬಂದೋಬಸ್ತಿಗಾಗಿ ನಿಯೋಜನೆ ಮಾಡಲಾಗಿದೆ. 

ಅಯೋಧ್ಯೆ ತೀರ್ಪು ಪ್ರಕಟಿಸಲಿರುವ ಐವರು ನ್ಯಾಯಾಧೀಶರಿವರು.....

ಸಾಮಾಜಿಕ ಜಾಲತಾಣದ ಮೇಲೂ ಹದ್ದಿನ ಕಣ್ಣು ಇಟ್ಟಿರುವ ಪೋಲಿಸರು ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿದ್ದಾರೆ. ಜಿಲ್ಲೆಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಟವನ್ನು ನವೆಂಬರ್ 10ರ ಬೆಳಿಗ್ಗೆಯವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 

ರಾಮನಿಗೆ ದೊರೆತ ಅಯೋಧ್ಯೆ: ಶತಮಾನಗಳ ನಂಬಿಕೆಗೆ ಸುಪ್ರೀಂ ತೀರ್ಪಿನ ನೈವೇದ್ಯೆ!...

ಜಿಲ್ಲೆಯಾದ್ಯಂತ ಇಂದು ಬೆಳಿಗ್ಗೆ 10 ರಿಂದ ನವೆಂಬರ್ 10 ಬೆಳಗ್ಗೆ 10 ರವರೆಗೆ 144 ಸೆಕ್ಷನ್ ಜಾರಿ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್ ಆದೇಶ ನೀಡಿದ್ದಾರೆ. 

ಈಗಾಗಲೇ 134 ವರ್ಷಗಳ ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟವಾಗಿದ್ದು, ರಾಮಲಲ್ಲಾಗೆ ಜಮೀನು ದೊರೆತಿದೆ. 2.77 ಎಕರೆ ಭೂಮಿ ವಶವಾಗಿದೆ.