ಶಿವಮೊಗ್ಗ (ನ.15):  ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, 15 ಕ್ಷೇತ್ರಗಳಲ್ಲಿಯೂ ಕೂಡ ನಮ್ಮ ಗೆಲುವು  ಖಚಿತ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು. 

ಶಿವಮೊಗ್ಗದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜನರು ಬಿಜೆಪಿಯತ್ತ ಒಲವು ತೀರಿಸಿದ್ದಾರೆ. ಈ ನಿಟ್ಟಿನಲ್ಲಿ ಉಪಚುನಾವಣೆಯಲ್ಲಿಯೂ ನಮ್ಮ ಗೆಲುವು ಎಂದರು. 

ಇನ್ನು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ಟಿಕೆಟ್ ಸಿಗದೆ ಇರುವ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು ಅವರಿಗೆ ಟಿಕೆಟ್ ನೀಡಬಾದು ಎಂದಲ್ಲ. ಅನರ್ಹ ಶಾಸಕರೇ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಅವರಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜೀನಾಮೆ ನೀಡಿದ ಯಾವುದೇ ಶಾಸಕರಿಗೂ ಅನ್ಯಾಯ ಮಾಡುವುದಿಲ್ಲ ಎಂದು ಮಾತು ಕೊಟ್ಟಿದ್ದೆವು. ಅದರಂತೆ ನಡೆದುಕೊಂಡಿದ್ದೇವೆ. ಲಕ್ಷ್ಮಣ್ ಸವದಿ ಮುಂದಾತಳ್ವತದಲ್ಲಿ ಅಥಣಿ ಸೇರಿ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದರು. 

ಇನ್ನು ಶಂಕರ್ ಅನರ್ಹತೆಯಿಂದ ತೆರವಾದ ರಾಣೇಬೆನ್ನೂರು ಕ್ಷೇತ್ರದಿಂದ ಪುತ್ರ ಕಾಂತೇಶ್ ಸ್ಪರ್ಧೆ ಮಾಡುವ ಬಗ್ಗೆ ಯೋಚನೆ ಮಾಡಿಲ್ಲ. ಅದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದರು.