ಶಿವಮೊಗ್ಗ [ನ.14]: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. 

ಜೋಗ ಕಾರ್ಕಲ್ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಡೆದಿದ್ದು, ಬಿಜೆಪಿ ತೆಕ್ಕೆಗೆ ತೆಗೆದುಕೊಂಡಿದೆ. 
 
ಕಳೆದ ಬಾರಿ ಕಾಂಗ್ರೆಸ್ ಹಿಡಿತದಲ್ಲಿದ್ದ ಪಟ್ಟಣ ಪಂಚಾಯತ್ ಈ ಬಾರಿ ಬಿಜೆಪಿ ವಶವಾಗಿದೆ. ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಕಮಾಲ್ ಗೆ ಕೈ ಇಲ್ಲಿ ಅಧಿಕಾರ ಕಳೆದುಕೊಂಡಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಡೆಯದ ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಚುನಾವಣೆ ಗೆಲುವು ಹಲವು ರೀತಿಯ ಪ್ರಯತ್ನ ನಡೆಸಿದ್ದು ಆದರೆ ಬಿಜೆಪಿ ಗೆಲುವಾಗಿದೆ. 

ಇಲ್ಲಿನ ಒಟ್ಟು 11 ವಾರ್ಡುಗಳಲ್ಲಿ 9 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು,  ಬಿಜೆಪಿ 6 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಪಡೆದಿದ್ದು, ಒಂದು ಸ್ಥಾನದಲ್ಲಿ ಕಾಂಗ್ರೆಸ್, ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.