ತುಂಗಾನದಿ ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿಷೇಧ

ಶಿವಮೊಗ್ಗ ತುಂಗಾ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಅಲ್ಲದೇ 2.70ಮೀ.ಎತ್ತರದ ಬ್ಯಾರಿಯರ್‌ ನಿರ್ಮಿಸಲಾಗಿದೆ. 
 

Heavy Vehicle Ban in Tunga Old Bridge

ಶಿವಮೊಗ್ಗ [ಅ.22]:  ನಗರದ ಪರಿಮಿತಿಯಲ್ಲಿರುವ ಎಸ್‌.ಎಚ್‌.-57ರ ತುಂಗಾನದಿಗೆ ಅಡ್ಡವಾಗಿ ನಿರ್ಮಿಸಿರುವ 146 ವರ್ಷಗಳಷ್ಟುಹಳೆಯದಾಗಿರುವ ಸೇತುವೆ ಸುಸ್ಥಿರತೆಗಾಗಿ 1.70 ಕೋಟಿ ರು. ವೆಚ್ಚದಲ್ಲಿ ಪುನಶ್ಚೇತನ ಕಾಮಗಾರಿ ಶೀಘ್ರ ಕೈಗೊಳ್ಳಲು ಉದ್ದೇಶಿಸಲಾಗಿದೆ. 

ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಕಾಮಗಾರಿ ಆರಂಭಿಸಲಾಗುವುದು. ಅಲ್ಲಿಯವರೆಗೆ ಸೇತುವೆ ಮೇಲೆ ಲಘು ವಾಹನಗಳ ಸಂಚಾರಕ್ಕೆ ಅವಕಾಶವಿದ್ದು, ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಅಲ್ಲದೇ 2.70ಮೀ.ಎತ್ತರದ ಬ್ಯಾರಿಯರ್‌ ನಿರ್ಮಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ರಸ್ತೆಯಲ್ಲಿ ರಾತ್ರಿವೇಳೆಯಲ್ಲಿ ವಾಹನಗಳು ಅತಿವೇಗದಲ್ಲಿ ಸಂಚರಿಸುವುದರಿಂದ ಯಾವುದೇ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹೈಟ್‌ ಬ್ಯಾರಿಯರ್‌ಗೆ ರಿಫ್ಲೆಕ್ಟರ್‌, ಎರಡು ಬದಿಗಳಲ್ಲಿ ರಂಬಲ್ಸ್‌, ಬ್ಲಿಂಕರ್ಸ್‌ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಚಾಲಕರು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಹಾಗೂ ಈ ಕಾಮಗಾರಿ ಮುಕ್ತಾಯಗೊಳ್ಳುವವರೆಗೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಅವರು ಮನವಿ ಮಾಡಿದ್ದಾರೆ.

Latest Videos
Follow Us:
Download App:
  • android
  • ios