ಕೃಷಿ ನೀರಾವರಿ ಪಂಪ್‌ಸೆಟ್‌ ಬಳಕೆದಾರರು ಮತ್ತು ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಫಲಾನುಭವಿಗಳ ಅಂಕಿ ಅಂಶಗಳನ್ನು ನೀಡಬೇಕಾಗಿರುವುದರಿಂದ ಬಳಕೆದಾರರು ಆಧಾರ್‌ ಸಂಖ್ಯೆ ಹಾಗೂ ಜಾತಿ ಪ್ರಮಾಣ ಪತ್ರದಲ್ಲಿನ ಆರ್‌.ಡಿ. ಸಂಖ್ಯೆಯನ್ನು ಇಲಾಖೆಯ ಅಧಿಕಾರಿಗಳಿಗೆ ನೀಡುವಂತೆ ಮೆಸ್ಕಾಂ  ಅಧಿಕಾರಿಗಳು ತಿಳಿಸಿದ್ದಾರೆ. 

ಶಿಕಾರಿಪುರ (ಅ.20) : ಇಂಧನ ಇಲಾಖೆಗೆ ಶಿಕಾರಿಪುರ ಮೆಸ್ಕಾಂ ವ್ಯಾಪ್ತಿಯಲ್ಲಿನ ಕೃಷಿ ನೀರಾವರಿ ಪಂಪ್‌ಸೆಟ್‌ ಬಳಕೆದಾರರು ಮತ್ತು ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಫಲಾನುಭವಿಗಳ ಅಂಕಿ ಅಂಶಗಳನ್ನು ನೀಡಬೇಕಾಗಿರುವುದರಿಂದ ಬಳಕೆದಾರರು ಆಧಾರ್‌ ಸಂಖ್ಯೆ ಹಾಗೂ ಜಾತಿ ಪ್ರಮಾಣ ಪತ್ರದಲ್ಲಿನ ಆರ್‌.ಡಿ. ಸಂಖ್ಯೆಯನ್ನು ಇಲಾಖೆಯ ಅಧಿಕಾರಿಗಳಿಗೆ ನೀಡುವಂತೆ ಮೆಸ್ಕಾಂ ಎಇಇ ಪರಶುರಾಮಪ್ಪ ಬೆಣ್ಣೆ ಮನವಿ ಮಾಡಿದ್ದಾರೆ. 

ಮಂಗಳೂರು ವಿದ್ಯುತ್‌ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿನ ಹಾಲಿ ಇರುವ ಎಲ್ಲಾ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ 10 ಎಚ್‌.ಪಿ ಮತ್ತು ಅದಕ್ಕಿಂತ ಕಡಿಮೆ ಸಾಮರ್ಥ್ಯ ಹೊಂದಿರುವ ಕೃಷಿ ನೀರಾವರಿ ಪಂಪಸೆಟ್‌ ಬಳಕೆದಾರರು ಮತ್ತು ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಫಲಾನುಭವಿಗಳ ಅಂಕಿ ಅಂಶಗಳನ್ನು ಇಂಧನ ಇಲಾಖೆಗೆ ಒದಗಿಸಬೇಕಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆದ್ದರಿಂದ ಮಾಹಿತಿ ಒದಗಿಸಿ ಸಹಕರಿಸುವಂತೆ ಪತ್ರಿಕಾ ಹೇಳಿಕೆಯಲ್ಲಿ ಅವರು ಮನವಿ ಮಾಡಿದ್ದಾರೆ.