ಶಿವಮೊಗ್ಗ (ಮಾ. 22): ಸಾಗರ ತಾಲೂಕಿನ ಅಮಟಿಕೊಪ್ಪದ ಬಳಿ ಚೆಕ್‌ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಅಂದಾಜು .2 ಕೋಟಿ ಹಣವನ್ನು ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.

ಕಾರಿನಲ್ಲಿ ಪ್ರಗತಿ ಗ್ರಾಮೀಣ ಬ್ಯಾಂಕ್‌ನ ಅಸಿಸ್ಟೆಂಟ್‌ ಮ್ಯಾನೇಜರ್‌ ಹಣ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅನುಮಾನಗೊಂಡ ಫ್ಲೈಯಿಂಗ್‌ ಸ್ಕಾ$್ವಡ್‌ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸರಿಯಾದ ದಾಖಲೆ ಇಲ್ಲದೆ ಇರುವುದರಿಂದ .2 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದು, ತೆರಿಗೆ ಇಲಾಖೆ ವಶಕ್ಕೆ ಒಪ್ಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

- ಸಾಂದರ್ಭಿಕ ಚಿತ್ರ