ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು.ಭೀಮಾಶಂಕರ್ (15),ಸಾವನ್ನಪ್ಪಿದ ವಿದ್ಯಾರ್ಥಿ.ತುಮಕೂರು ತಾಲ್ಲೂಕಿನ ಚಿಕ್ಕತೊಟ್ಟಿಲು ಕೆರೆ ಬಳಿ ಘಟನೆ.

ಕೋರಾ(ಆ.04): ಇತ್ತೀಚೆಗಿನ ದಿನಗಳಲ್ಲಿ ವಯಸ್ಸಿನ ಭೇದವಿಲ್ಲದೇ ಹೃದಯಾಘಾತದ ಘಟನೆಗಳು ವರದಿಯಾಗುತ್ತಲೇ ಇವೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆಯಾಗಿದೆ. ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಯೊಬ್ಬ ಪ್ರಶಸ್ತಿ ಸ್ವೀಕರಿಸುವ ಮುನ್ನವೇ ಹೃದಯಾಘಾತಕ್ಕೆ ಒಳಗಾದ ಆಘಾತಕಾರಿ ಘಟನೆ ನಡೆದಿದೆ. 15 ವರ್ಷದ ಭೀಮಾಶಂಕರ್, ಹೃದಾಯಾಘಾತದಿಂದ ಕೊನೆಯುಸಿರೆಳೆದ ದುರ್ದೈವಿಯಾಗಿದ್ದಾರೆ.

ಹೌದು, ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭೀಮಾಶಂಕರ್, ತುಮಕೂರು ತಾಲೂಕಿನ ಬೆಳದರ ಸರ್ಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಯಾಗಿದ್ದ. ಇಂದು ಚಿಕ್ಕತೊಟ್ಟಿಲು ಕೆರೆ ಬಳಿ ನಡೆಯುತ್ತಿದ್ದ ಹೋಬಳಿ ಮಟ್ಟದ ಪ್ರೌಢಾಶಾಲ ಕ್ರೀಡಾಕೂಟದಲ್ಲಿ ಭೀಮಾಶಂಕರ್ ಭಾಗಿಯಾಗಿದ್ದ. ತುಮಕೂರು ತಾಲ್ಲೂಕಿನ ಚಿಕ್ಕತೊಟ್ಟಿಲು ಕೆರೆ ಬಳಿ ಘಟನೆ ನಡೆದಿದೆ. 

ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭೀಮಾಶಂಕರ್ ಬಾಲಕರ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಿ, ದ್ವಿತೀಯ ಸ್ಥಾನ ಪಡೆದಿದ್ದರು. ಆದರೆ ದುರಾದೃಷ್ಟವಶಾತ್, ಪ್ರಶಸ್ತಿ ಸ್ವೀಕರಿಸುವ ಮುನ್ನವೇ ಭೀಮಾಶಂಕರ್ ಹೃದಾಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಸ್ಥಳೀಯರು ಭೀಮಾಶಂಕರ್‌ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ತುಮಕೂರಿನ ಶ್ರೀದೇವಿ ಆಸ್ಪತ್ರೆಯ ವೈದ್ಯರು ಭೀಮಾಶಂಕರ್ ಮೃತಪಟ್ಟಿರುವ ಮಾಹಿತಿಯನ್ನು ಖಚಿತಪಡಿಸಿದ್ದಾರೆ.

ಟೀಂ ಇಂಡಿಯಾಗೆ ಬಿಗ್ ಶಾಕ್‌..! ಕೆ ಎಲ್‌ ರಾಹುಲ್‌ ಏಷ್ಯಾಕಪ್‌ಗೆ ಡೌಟ್; ಮತ್ತೋರ್ವ ಕ್ರಿಕೆಟಿಗ ವಿಶ್ವಕಪ್‌ನಿಂದಲೇ ಔಟ್..?

ಸದ್ಯ ತುಮಕೂರಿನ ಶ್ರೀದೇವಿ ಆಸ್ಪತ್ರೆಯಲ್ಲಿ ಭೀಮಾಶಂಕರ್ ಅವರ ಮೃತದೇಹವಿದ್ದು, ಇಂದು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಘಟನೆಯ ಸಂಬಂಧ ಕೋರಾ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಕರ್ನಲ್‌ ಗಿರೀಶ ನಾಯ್ಕ ಅಂತ್ಯಸಂಸ್ಕಾರ

ಸಿದ್ದಾಪುರ: ಹೃದಯಾಘಾತದಿಂದ ನಿಧನರಾಗಿದ್ದ ತಾಲೂಕಿನ ಮನಮನೆಗೆಯ ಕರ್ನಲ್‌ ಗಿರೀಶ ನಾಯ್ಕ ಅವರ ಅಂತ್ಯಸಂಸ್ಕಾರ ಬುಧವಾರ ತಡರಾತ್ರಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ತಾಲೂಕು ಆಡಳಿತದ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿ ಅಂತಿಮ ವಿಧಿ-ವಿಧಾನ ನೆರವೇರಿಸಲಾಯಿತು. ಪುಣೆಯಿಂದ ಪಾರ್ಥಿವ ಶರೀರವನ್ನು ಮನಮನೆಗೆ ತರುತ್ತಿದ್ದಂತೆ ಶಾಸಕ ಭೀಮಣ್ಣ ನಾಯ್ಕ ಸ್ಥಳಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ತಹಸೀಲ್ದಾರ್‌ ಎಂ.ಆರ್‌. ಕುಲಕರ್ಣಿ, ತಾಪಂ ಇಒ ದೇವರಾಜ ಹಿತ್ಲಕೊಪ್ಪ, ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ, ಮಾಜಿ ಅಧ್ಯಕ್ಷ ಕೆ.ಜಿ. ನಾಗರಾಜ ಇದ್ದರು.