2019: DC ವಿರುದ್ಧ ಹಸಿರು ಜರ್ಸಿಯಲ್ಲಿ ಕಣಕ್ಕಿಳಿಯಲಿದೆ RCB!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಹಸಿರು ಜರ್ಸಿಯಲ್ಲಿ ಕಣಕ್ಕಿಳಿಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇಂದಿನ ಪಂದ್ಯ ಸಂಪೂರ್ಣ ಹಿಸರು ಮಯವಾಗಲಿದೆ. ಪ್ರತಿ ಆವೃತ್ತಿಯಲ್ಲಿ RCB ಪರಿಸರ ಕಾಳಜಿಗೆ ಎಲ್ಲಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರು(ಏ.07): ಪ್ರತಿ ಐಪಿಎಲ್ ಟೂರ್ನಿಯಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ವರ್ಷವೂ ಗೋ ಗ್ರೀನ್ ಅಭಿಯಾನಕ್ಕೆ ಒತ್ತು ನೀಡಿದೆ. ಇಂದು(ಏ.07) ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಪಂದ್ಯಕ್ಕೆ RCB ಹಸಿರು ಜರ್ಸಿಯಲ್ಲಿ ಕಣಕ್ಕಿಳಿಯಲಿದೆ.
ಇದನ್ನೂ ಓದಿ: IPL 2019: ಡೆಲ್ಲಿ ವಿರುದ್ಧ ಪಂದ್ಯಕ್ಕೆ RCB ತಂಡದಲ್ಲಿ ಬದಲಾವಣೆ?
ಇಂದಿನ ಪಂದ್ಯದ ಟಾಸ್ ವೇಳೆ RCB ನಾಯಕ ವಿರಾಟ್ ಕೊಹ್ಲಿ, ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್‌ಗೆ ಗಿಡ ನೀಡಲಿದ್ದಾರೆ. ಇನ್ನು RCB ಜರ್ಸಿ, ಬಾವುಟ ಸೇರಿದಂತೆ ಎಲ್ಲವೂ ಹಸಿರುಮಯವಾಗಲಿದೆ. ಈ ಮೂಲಕ ಐಪಿಎಲ್ ಟೂರ್ನಿಯಲ್ಲಿ ಪರಿಸರ ಜಾಗೃತಿ ಮೂಡಿಸುತ್ತಿರುವ ಏಕೈಕ ತಂಡ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇದನ್ನೂ ಓದಿ: ಬೀಮರ್ ಎಸೆತ: ಸಿರಾಜ್‌ಗೆ ಗೇಟ್ ಪಾಸ್- ಚಹಾರ್‌ಗೆ ಅವಕಾಶ; ಯಾಕೆ ಹೀಗೆ?
ಪರಿಸರ ಸಂರಕ್ಷಣೆ ಹಾಗೂ ತಾಜ್ಯಗಳ ಮರುಬಳಕೆಗೆ ಒತ್ತು ನೀಡವು ಉದ್ದೇಶದಿಂದ ಈ ಆವೃತ್ತಿಯಲ್ಲಿ RCB ಗೋ ಗ್ರೀನ್ ಅಭಿಯಾನಕ್ಕೆ ಚಾಲನೆ ನೀಡಲಿದೆ. ಹಸಿರು ಬಣ್ಣದ RCB ಜರ್ಸಿ ಕೂಡ ತ್ಯಾಜ್ಯಗಳ ಮರುಬಳಕೆಯಿಂದ ತಯಾರಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಸುತ್ತ ಮುತ್ತ ಸಂಗ್ರಹಿಸಲಾದ ಪ್ಲಾಸ್ಟಿಕ್ ಬಾಟಲಿ ಹಾಗೂ ಇತರ ತ್ಯಾಜ್ಯಗಳಿಂದ ಜರ್ಸಿ ತಯಾರಿಸಲಾಗಿದೆ.