ಆರ್’ಸಿಬಿ ತಂಡದ ಬಗ್ಗೆ ಧನಾತ್ಮಕವಾಗಿ ಪ್ರತಿಕ್ರಿಯಿಸಿರುವ ಎಬಿಡಿ, ನಾವಿನ್ನು ಸಂಪೂರ್ಣವಾಗಿ ಟೂರ್ನಿಯಿಂದ ಹೊರಬಿದ್ದಿಲ್ಲ. ಉಳಿದ 4 ಪಂದ್ಯಗಳಲ್ಲಿ ಗೆದ್ದು ಟೂರ್ನಿಯಲ್ಲಿ ಕಮ್’ಬ್ಯಾಕ್ ಮಾಡುವುದರ ಜೊತೆಗೆ ನಮ್ಮ ಅಭಿಮಾನಿಗಳು ಹೆಮ್ಮೆ ಪಡುವಂತೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ[ಮೇ.12]: ಆಡಿದ 10 ಪಂದ್ಯಗಳಲ್ಲಿ ಕೇವಲ 3 ಪಂದ್ಯಗಳನ್ನು ಗೆದ್ದು ಬಹುತೇಕ ಟೂರ್ನಿಯಿಂದ ಹೊರಬಿದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಡೆಲ್ಲಿ ಡೇರ್’ಡೆವಿಲ್ಸ್ ತಂಡವನ್ನು ಎದುರಿಸುತ್ತಿದೆ.
ಇದರ ಬೆನ್ನಲ್ಲೇ ಆರ್’ಸಿಬಿ ತಂಡದ ಸ್ಟಾರ್ ಬ್ಯಾಟ್ಸ್’ಮನ್ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ ನೀಡಿದ್ದಾರೆ. ಆರ್’ಸಿಬಿ ತಂಡದ ಬಗ್ಗೆ ಧನಾತ್ಮಕವಾಗಿ ಪ್ರತಿಕ್ರಿಯಿಸಿರುವ ಎಬಿಡಿ, ನಾವಿನ್ನು ಸಂಪೂರ್ಣವಾಗಿ ಟೂರ್ನಿಯಿಂದ ಹೊರಬಿದ್ದಿಲ್ಲ. ಉಳಿದ 4 ಪಂದ್ಯಗಳಲ್ಲಿ ಗೆದ್ದು ಟೂರ್ನಿಯಲ್ಲಿ ಕಮ್’ಬ್ಯಾಕ್ ಮಾಡುವುದರ ಜೊತೆಗೆ ನಮ್ಮ ಅಭಿಮಾನಿಗಳು ಹೆಮ್ಮೆ ಪಡುವಂತೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Scroll to load tweet…

ಆರ್’ಸಿಬಿ ಪರ ನಾಯಕ ವಿರಾಟ್ ಕೊಹ್ಲಿ-ಎಬಿ ಡಿವಿಲಿಯರ್ಸ್ ಹೊರತುಪಡಿಸಿ ಉಳಿದ ಬ್ಯಾಟ್ಸ್’ಮನ್’ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಎಬಿಡಿ ಧನಾತ್ಮಕ ಮಾತುಗಳನ್ನಾಡಿದ್ದು, ಇನ್ನುಳಿದ 4 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ.
ಪ್ರಸ್ತುತ ಆರ್’ಸಿಬಿ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದು, ಇಂದು ಫಿರೋಜ್’ಷಾ ಕೋಟ್ಲಾ ಮೈದಾನದಲ್ಲಿ ಡೆಲ್ಲಿ ಡೇರ್’ಡೆವಿಲ್ಸ್ ತಂಡವನ್ನು ಎದುರಿಸಲಿದೆ. ಇನ್ನು ಮುಂಬರುವ ಸೋಮವಾರ ಇಂದೋರ್’ನಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್, ಗುರುವಾರ ತವರಿನಲ್ಲಿ ಸನ್’ರೈಸರ್ಸ್ ಹೈದರಾಬಾದ್ ಹಾಗೂ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಜೈಪುರದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.